< Rapar Mar Chik 22 >

1 Ka ineno rwadh wadu kata rombone kolal, kik iwuondri ni ok inene, to kawe idwokene wuon.
ಸ್ವದೇಶದವನ ಎತ್ತಾಗಲಿ ಅಥವಾ ಕುರಿಯಾಗಲಿ ದಾರಿ ತಪ್ಪಿ ಹೋಗಿರುವುದನ್ನು ನೀವು ನೋಡಿಯೂ ನೋಡದಂತೆ ಅದನ್ನು ಬಿಟ್ಟು ಹೋಗಬಾರದು; ಅದನ್ನು ಅಟ್ಟಿಸಿಕೊಂಡು ಹೋಗಿ ಅವನಿಗೆ ಕೊಡಲೇಬೇಕು.
2 Ka owaduno ok odak machiegni kodi kaw chiayono iter dalani nyaka chop obi odware, eka mondo imiye.
ಅವನು ನಿಮಗೆ ದೂರವಾಗಿದ್ದರೆ ಇಲ್ಲವೆ ಅವನು ಯಾರೋ ಎಂದು ನಿಮಗೆ ತಿಳಿಯದೆ ಹೋದರೆ, ಆ ಪಶುವನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ ನೀವು ಅದನ್ನು ಅವನಿಗೆ ಹಿಂತಿರುಗಿ ಕೊಡಬೇಕು.
3 Tim kamano bende ne pundane, kata lawe kata gire moro amora molal kendo kik ichal ngʼama ok oneno.
ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.
4 Ka ineno punda mar nyawadu kata rwadhe kopodho e yo, to kik ichal ngʼama ok oneno, to kony wuon-gi mondo ochunge oa malo.
ಸ್ವದೇಶದವನ ಕತ್ತೆಯಾಗಲಿ ಅಥವಾ ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ ಅವನಿಗೆ ಸಹಾಯಮಾಡಿ ಎಬ್ಬಿಸಬೇಕು.
5 Dhako ok onego rwak lewni mag chwo, chwo bende kik rwak lewni mag mon, nimar Jehova Nyasaye ma Nyasachu ok dwar joma timo kamano.
ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.
6 Ka iyudo od winyo e bath yo, manie yien kata e lum piny kendo winyo madhako onindo e tongʼe kata oumo nyithinde, to kik ikaw winyono gi nyithinde.
ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ಅಥವಾ ನೆಲದ ಮೇಲಾಗಲಿ ಇರುವ ಒಂದು ಪಕ್ಷಿಯ ಗೂಡಿನೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು, ಅವುಗಳ ಮೇಲೆ ತಾಯಿ ಹೊದಗಿರುವುದನ್ನು ಕಂಡರೆ ಮರಿಗಳನ್ನು ತೆಗೆದುಕೊಳ್ಳಬಹುದೇ ಹೊರತು ತಾಯಿಯನ್ನು ಹಿಡಿದುಕೊಳ್ಳಬಾರದು.
7 Inyalo kawo nyithinde to iwe winyono odhi, mondo omi idhi maber kendo idag amingʼa.
ನೀವು ಹೀಗೆ ನಡೆದುಕೊಂಡರೆ ನಿಮಗೆ ಶ್ರೇಯಸ್ಸು ಉಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.
8 Ka igero ot manyien, to nyaka iriw ragengʼ molworo gama mondo kik ikel chwero remo e odi ka ngʼato olwar e tat odi.
ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.
9 Kik ipidh kothe ariyo e puoth mzabibu, kitimo kamano, to gik motwi kata ochiek kanyo duto nobed mogak kendo ginidongʼ ei kama ler mar lemo.
ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು.
10 Kik ipur gi rwath kod punda kitweyo e jok achiel.
೧೦ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.
11 Kik irwak law molos gi yie rombo kod katana motwangʼ kanyakla.
೧೧ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
12 Nyaka imin usi e konde angʼwen mar lawi mar abola.
೧೨ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.
13 Ka ngʼato okendo chiege bangʼe bangʼ riwore kode chunye oa kuome kata oyudo ni ok ohere,
೧೩ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ,
14 kendo owuok oketho nyinge komiye nying marach kendo owacho niya, “Ne anywomo dhakoni to kane ariwora kode to ne ok ayude gi gige ringre.”
೧೪“ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,
15 Eka wuon nyako kod min nokel gima nyiso ni en kod ringre ne jodongo e ranga dala.
೧೫ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
16 Wuon nyako nowach ne jodongo niya, “Ne achiwo nyara e kend ne ngʼatni to ok ohere.
೧೬ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ
17 To koro oseketho nyinge kowacho ni, ‘Ne ok ayudo nyari gi ringre.’ To ma e gima nyiso ni nyara ne oyud gi gige ringre.” Bangʼe jonywolne noyar law e nyim jodong gwengʼ,
೧೭ಇವನು ಅವಳನ್ನು ದ್ವೇಷಿಸಿ, ಪರಪುರುಷನ ಸಂಪರ್ಕ ಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳ ಹೆಸರನ್ನು ಅವಮಾನಪಡಿಸುತ್ತಾನೆ. ಇಗೋ ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುವುದಕ್ಕೆ ಇದೇ ಪ್ರಮಾಣ” ಎಂದು ಹೇಳಿ ಅವಳ ಹೊದಿಕೆಯನ್ನು ಆ ಊರಿನ ಹಿರಿಯರ ಮುಂದೆ ಇಡಬೇಕು.
18 kendo jodongogo nokaw ngʼatno mi kume.
೧೮ಆ ಊರಿನ ಹಿರಿಯರು ಅವನನ್ನು ಹಿಡಿಸಿ ಅವನನ್ನು ಹೊಡಿಸಬೇಕು.
19 Ngʼatno nochul chudo moromo sekel mia achiel mar fedha mondo mi wuon nyako nikech ngʼatni osemiyo nyar Israel mangili nying marach. Nyakono nosik kode kaka chiege kendo ok noriembe nyaka chiengʼ.
೧೯ಇಸ್ರಾಯೇಲಳಾದ ಹೆಣ್ಣಿನ ವಿಷಯದಲ್ಲಿ ಆ ಪುರುಷನು ನಿರಾಧಾರವಾದ ತಪ್ಪು ಹೊರಿಸಿದ್ದರಿಂದ, ಅವನಿಗೆ ನೂರು ಶೆಕೆಲ್ ಬೆಳ್ಳಿ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು. ಮತ್ತು ಅವನು ಆ ಸ್ತ್ರೀಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
20 To ka dipo ni oyud ni en adier ni nyakono ne ok oyudo gi gige ringre,
೨೦ಆದರೆ ಆ ಹೆಣ್ಣು ವಿವಾಹಕ್ಕೆ ಮುಂಚೆ ದೈಹಿಕವಾಗಿ ಪುರುಷಸಂಪರ್ಕ ಮಾಡಿದ್ದು ನಿಜ ಎಂದು ತಿಳಿದುಬಂದರೆ,
21 to nyakono nokel e dhood wuon mare kendo joma chwo ma gwengʼno nochiele gi kite motho, nikech otimo gima rach e kind jo-Israel kodoko jachode e od wuon. Tim marachno nyaka ugol e dieru.
೨೧ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.
22 Ka ngʼato oyud ka terore gi chi wadgi, to dhakono kod ngʼatno nyaka negi. Tim marachno nyaka gol e dier jo-Israel.
೨೨ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
23 Ka ngʼato oyudo nyako ngili e dala matin ma osetimo winjruok mar kend kod ngʼat machielo ma oterore kode,
೨೩ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ,
24 to nyaka ugol ji ariyogo e dhorangach mar dala oko kendo chielgi gi kite ma githo. Nyakono nogo gi kite nikech ne en e gwengʼ to ok ogoyo koko mondo okonye, kendo ngʼatno nochiel nikech odwanyo chi ngʼato. Tim marachno nyaka ugol e dieru.
೨೪ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
25 To ka ngʼato oromo gi nyako ma osetimo winjruok gi ngʼato mar kend mi omake githuon moterore kode, ngʼatno ema nyaka negi.
೨೫ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು.
26 Kik utim gima rach ne nyakono, onge richo motimo mowinjore gi tho. Wachni chalo kod ngʼat ma omonjo wadgi monego,
೨೬ಆ ಸ್ತ್ರೀಗೆ ಯಾವ ಶಿಕ್ಷೆಯೂ ಆಗಬಾರದು; ಅವಳಲ್ಲಿ ಮರಣ ಶಿಕ್ಷೆಗೆ ಪಾತ್ರವಾದ ಅಪರಾಧವೇನೂ ಇಲ್ಲ. ಒಬ್ಬ ಮನುಷ್ಯನು ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಈ ಸಂಗತಿಯೂ ಹಾಗೆಯೇ ಎಂದು ತಿಳಿಯಬೇಕು.
27 nimar ngʼatni noromo gi nyakoni to kata nyako mosetimgo winjruokni ogoyo koko, ne onge ngʼama okonye.
೨೭ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ.
28 Ka ngʼato oromo gi nyako mapok otimo winjruok mar kend gi ngʼato mi oterore kode githuon mi ofwenygi,
೨೮ಯಾರಿಗೂ ನಿಶ್ಚಯವಾಗದೆ ಇರುವ ಸ್ತ್ರೀಯನ್ನು ಒಬ್ಬನು ಹಿಡಿದು ಸಂಗಮಿಸಿದ್ದು ತಿಳಿದು ಬಂದರೆ,
29 nyaka ochul wuon nyakono sekel piero abich mar fedha. Nyaka okend nyakono nimar osekethone, kendo ok noriembe e ndalo duto mar ngimane.
೨೯ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.
30 Ngʼato ok onego kend chi wuon, kendo kik odwany kitanda wuon mare.
೩೦ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.

< Rapar Mar Chik 22 >