< Eklesiastes 8 >
1 En ngʼa machalo gi ngʼama nigi rieko matut? En ngʼa mongʼeyo wacho tiend gik moko? Rieko miyo ngʼato bedo mamor kendo otieko ich wangʼ ma en-go.
೧ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.
2 Luor chik ruoth, awacho kamano, nikech ni kwongʼori e nyim Jehova Nyasaye.
೨ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.
3 Kik irikni ka ia e nyim ruoth. Kik ichwak ngʼama timo richo, nimar obiro timo gimora amora mohero.
೩ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
4 Nimar wach ruoth nigi teko, en ngʼa manyalo wachone niya, “Angʼo ma itimo?”
೪ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.
5 Ngʼato angʼata moluoro chikne ok noyud hinyruok moro amora, to chuny man-gi rieko biro ngʼeyo sa mowinjore mar timo gimoro kod chenro miluwo.
೫ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.
6 Nimar nitiere sa mowinjore kod chenro miluwo e gimoro amora, kata kamano dhier mar dhano pek moloye.
೬ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
7 Nimar dhano ok ongʼeyo gima biro, en ngʼa manyalo nyise gima biro?
೭ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?
8 Onge ngʼama nigi teko ewi yamo mondo ochike, omiyo onge ngʼama nigi teko e odiechieng thone. Mana kaka jalweny ok mi thuolo mar yweyo e kinde mag kedo, e kaka joricho bende ok yud thuolo kuom timbegigo.
೮ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
9 Magi duto ne aneno, kane aketo pacha e gik moko duto mitimo e piny. Nitie kinde moro ma ngʼato sandoe jowetegi to en owuon ema ohinyore.
೯ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ.
10 Aseneno joma timbegi richo ka iyiko, jogo mane osiko kadonjo kendo wuok e kama ler kendo ne yudo pak e dala maduongʼ kuom gik ma ok mi Nyasaye duongʼ. Ma bende en tim manono.
೧೦ಇದಲ್ಲದೆ ದುಷ್ಟರಿಗೆ ಸಮಾಧಿಯಾಗುವುದನ್ನು ಕಂಡೆನು. ಅವರು ಸುಖವಾಗಿ ಗತಿಸುವರು. ಧಾರ್ಮಿಕರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ಪಟ್ಟಣದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದೂ ವ್ಯರ್ಥವೇ.
11 Ka ngʼado bura ne janjore ok otim, to chuny ji pongʼ gi chenro mar timo marach.
೧೧ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
12 Kata obedo ni joma timbegi richo nyalo timo richo mathoth, to pod ginyalo dak kuom kinde mangʼeny, to gima angʼeyo en ni joma oluoro Nyasaye to biro dhi maber e nyim Nyasaye.
೧೨ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
13 Nikech joma timbegi mono ok oluoro Nyasaye, ok ginine maber kendo ngimagi nolal mana ka tipo.
೧೩ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.
14 Nitiere gimoro machielo maonge tiende matimore e piny: joma kare mayudo gigo ma joma mono ema onego yudi, kod joma timbegi mono mayudo gigo monego joma kare ema yudi. Ma bende, awacho, ni onge tiende.
೧೪ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು.
15 Omiyo ayie ni mondo ji owinj maber e ngima margi, nikech onge gima ber ne dhano e piny moloyo chiemo, metho kod bedo gimor. Bangʼe obiro bedo mamor kuom tije matek motiyo e kinde mar ngimane ma Nyasaye omiye ngima e piny ka.
೧೫ಆದುದರಿಂದಲೇ ನಾನು ಸಂತೋಷವನ್ನು ಹೊಗಳಿದೆನು. ಏಕೆಂದರೆ ಮನುಷ್ಯನಿಗೆ ಲೋಕದಲ್ಲಿ ಕುಡಿಯುವುದೂ, ತಿನ್ನುವುದೂ, ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದು ಇಲ್ಲ. ಲೋಕದಲ್ಲಿ ದೇವರು ಅವನಿಗೆ ಅನುಗ್ರಹಿಸುವ ದಿನಗಳಲ್ಲಿ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವುದು.
16 Kane aketo pacha mondo angʼe rieko kendo mondo anon tich matek mar dhano e piny-ka ka nindo ok tere odiechiengʼ gotieno,
೧೬ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
17 to ne afwenyo ni gigo duto Nyasaye ema timo. Omiyo onge ngʼama ongʼeyo gigo matimore e piny. Kata dabed ni oketo chunye manade mar ngʼeyo tiendgi, to ok onyal ngʼeyo tiendgi. Bende kata ngʼama riek par ni ongʼeyo, to ok onyal winjo tiendgi maber.
೧೭ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”