< Ezekiel 9 >

1 Eka ne awinjo koluongo gi dwol maduongʼ niya, “Kel jorito mag dala maduongʼ kae, ka moro ka moro nigi gir kedo lweny e lwete.”
ಆಮೇಲೆ ಆತನು, “ಪಟ್ಟಣವನ್ನು ದಂಡಿಸತಕ್ಕವರೇ, ನೀವೆಲ್ಲರೂ ನಿಮ್ಮ ಹತ್ಯಾ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.
2 Eka ne aneno ji auchiel kabiro koa yo rangach mamalo, ka moro ka moro kuomgi otingʼo gir lweny mager e lwete. Ne nitie ngʼato kodgi morwako law mayom mane otingʼo gir ndiko e bathe. Negidonjo mi gichungʼ e bath kendo mar misango mar nyinyo.
ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
3 To duongʼ mar Nyasaye mar Israel nodar oa ewi kerubi kama ne osebetie, mi ohuyo modhi obet ewi kama idonjogo ei hekalu. Bangʼe Jehova Nyasaye noluongo ngʼat mane orwako law mayom-cha, mane otingʼo gir ndiko e bathe,
ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಕಂಡನು.
4 mi owachone niya, “Dhi e dala Jerusalem duto mondo iket kido e lela wangʼ joma okuyo kendo ma chunygi chandore kuom gik mamono mitimonigi.”
ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.
5 Nowachone joma moko ka awinjo niya, “Luweuru kamoro amora modhiye e dalano kendo uneg ngʼato angʼata ma ok ukechogi kata ngʼwononegi.
ಮತ್ತೂ ಆತನು ಉಳಿದವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ತಿರುಗುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ; ವೃದ್ಧ, ಯುವಕ, ಯುವತಿ, ಸ್ತ್ರೀ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿರಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿರಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿರಿ” ಎಂಬುದಾಗಿ ಆತನು ನನಗೆ ಕೇಳಿಸುವಂತೆ ಅಪ್ಪಣೆಮಾಡಿದನು.
6 Neguru jomadongo gi jomatindo, jotich ma nyiri gi ma yawuowi, mon kod nyithindo, to kik umul ngʼato angʼata man-gi kido e lela wangʼe. Chakuru timo kamano e kara maler mar lemo.” Kuom mano negichako gi jodongo mane ni e nyim hekalu.
ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.
7 Eka nowachonegi niya, “Dhiuru mondo udwany hekalu kendo pongʼuru laru mage gi ringre joma onegi. Dhiuru!” Omiyo ne giwuok mi gidhi kendo negichako nego ji e dalano duto.
ಆತನು ಅವರಿಗೆ, “ಹೊರಡಿರಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.
8 E kinde mane gineko, kane adongʼ kenda, ne apodho piny auma, mi aywagora niya, “Yaye Jehova Nyasaye Manyalo Gik Moko Duto, bende dineg mitiek pep oganda jo-Israel manok modongʼ e thuolo miolee mirimbi kuom Jerusalem?”
ಅವರು ಹತಿಸುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಕರ್ತನಾದ ಯೆಹೋವನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಹೊಯ್ದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ?” ಎಂದು ಮೊರೆಯಿಟ್ಟೆನು.
9 Nodwoka niya, “Richo mar dhood Israel gi dhood Juda duongʼ mokalo apima; piny opongʼ gi remo michwero kendo dala maduongʼ opongʼ gi timbe mobam. Giwacho ni, ‘Jehova Nyasaye osejwangʼo piny kendo; Jehova Nyasaye ok ne gik matimore.’
ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.
10 Omiyo ok abi kechogi kata ngʼwononigi ma ok akumogi, to abiro kumogi kuom gik magisetimo.”
೧೦ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.
11 Bangʼe ngʼat mane orwako law mayom-cha mane otingʼo gir ndiko e bathe noduogo wach kawacho niya, “Asetimo kaka ne ichiko.”
೧೧ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನು, “ನಿನ್ನ ಅಪ್ಪಣೆಯಂತೆಯೇ ಮಾಡಿದ್ದೇನೆ” ಎಂದು ಅರಿಕೆಮಾಡಿದನು.

< Ezekiel 9 >