< Jeremia 42 >
1 Eka jotend lweny duto, kaachiel gi Johanan wuod Karea kod Jezania wuod Hoshaya, kod ji duto chakre matin nyaka maduongʼ nodhi ir
೧ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
2 janabi Jeremia kendo owachone niya, “Kiyie to iwinj kwayowa kendo ilamnwa Jehova Nyasaye ma Nyasachi ne joma otonygi duto. Nimar kaka ineno sani, kata obedoni chon ne wangʼeny, to koro sani ji matin ema odongʼ.
೨ಅವರು ಅವನಿಗೆ, “ದಯಮಾಡು, ನಮ್ಮ ಬಿನ್ನಹವನ್ನು ಲಾಲಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ.
3 Lem mondo Jehova Nyasaye ma Nyasachi onyiswa kuma wanyalo dhiyoe kendo gima wanyalo timo.”
೩ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ, ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ವಿಜ್ಞಾಪಿಸಿದರು.
4 Janabi Jeremia nodwoko niya, “Asewinjou. Adier nyaka analamnu Jehova Nyasaye ma Nyasacha kaka usekwayo; ananyisu gimoro amora ma Jehova Nyasaye owacho kendo onge gima anapandnu.”
೪ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.
5 Eka negiwachone Jeremia, “Mad Jehova Nyasaye bed ja-adiera kendo janeno makare kuomwa ka dipo ni timbewa ok oluwore gi gimoro ma Jehova Nyasaye ma Nyasachi ooroi godo irwa.
೫ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!
6 Kowinjore kata ka ok owinjore, wanaluor Jehova Nyasaye ma Nyasachwa, ma waori ire, mondo omi obed maber kodwa, nimar wanaluor Jehova Nyasaye ma Nyasachwa.”
೬ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.
7 Bangʼ ndalo apar wach Jehova Nyasaye nobiro ne Jeremia.
೭ಹತ್ತು ದಿನಗಳಾದ ಮೇಲೆ ಯೆಹೋವನು ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು.
8 Omiyo noluongo Johanan wuod Karea kod jotend lweny mane ni kode kod ji duto chakre matin nyaka maduongʼ.
೮ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,
9 Nowachonegi niya, “Ma e gima Jehova Nyasaye, Nyasach Israel, mane uora ire mondo aterne kwayou, wacho:
೯“ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
10 ‘Ka idak e pinyni, anageru kendo ok anatieku; anapidhu to ok pudhou oko, nimar asebedo gi lit kuom masiche masekelo kuomu.
೧೦‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.
11 Kik uluor ruodh Babulon, makoro uluoro. Kik uluore, Jehova Nyasaye wacho, nimar an kodu kendo anaresu ua e lwetene.
೧೧ನೀವು ಹೆದರಿರುವ ಬಾಬೆಲಿನ ಅರಸನಿಗೆ ಹೆದರಬೇಡಿರಿ, ಅವನಿಗೆ ಅಂಜದಿರಿ; ನಾನು ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಿಮ್ಮೊಂದಿಗಿದ್ದೇನಲ್ಲಾ. ಇದು ಯೆಹೋವನಾದ ನನ್ನ ನುಡಿ.
12 Anatimnu ngʼwono mondo omi en bende ongʼwonnu kendo odwoku e pinyu.’
೧೨ಅವನು ನಿಮ್ಮನ್ನು ಕರುಣಿಸಿ ಸ್ವದೇಶಕ್ಕೆ ಹೋಗುವಂತೆ ನಾನು ನಿಮಗೆ ಕರುಣೆಯನ್ನು ಅನುಗ್ರಹಿಸುವೆನು’ ಎಂದೆನು.
13 “To ka uwacho, ‘Ok wanadagie pinyni,’ mamano mi ubed ma ok uluoro Jehova Nyasaye ma Nyasachu,
೧೩ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;
14 kendo ka uwacho ni, ‘Ooyo, wanadhi kendo wadag Misri, kama ok wana neye lweny kata winjo turumbete kata bedo gi kech mar makati,’
೧೪ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,
15 to uwinj wach Jehova Nyasaye, yaye joma otony modongʼ mag Juda. Ma e gima Jehova Nyasaye Maratego, ma Nyasach Israel, wacho: ‘Ka uramo ni nyaka udhi Misri kendo udhi udak kanyo,
೧೫ಯೆಹೂದ್ಯರಲ್ಲಿ ಉಳಿದವರೇ, ಯೆಹೋವನ ವಾಕ್ಯವನ್ನು ಈಗ ಕೇಳಿರಿ, ‘ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀವು ಐಗುಪ್ತಕ್ಕೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,
16 to ngʼeuru ni ligangla ma uluoro nomaku, kendo kech mabwogou noluu nyaka Misri, kendo kanyo ema unuthoe.
೧೬ಆಗ ನೀವು ಹೆದರುತ್ತಿರುವ ಖಡ್ಗವು ಐಗುಪ್ತದಲ್ಲಿಯೂ ನಿಮ್ಮನ್ನು ಹಿಂದಟ್ಟಿ ಹಿಡಿಯುವುದು, ನೀವು ಅಂಜುತ್ತಿರುವ ಕ್ಷಾಮವು ಅಲ್ಲಿಯೂ ನಿಮ್ಮ ಬೆನ್ನ ಹತ್ತುವುದು; ಅಲ್ಲೇ ಸಾಯುವಿರಿ.
17 Adiera, jogo duto moramo mondo odhi odag Misri noneg gi ligangla, kech kod masira maonge ngʼato angʼata ma notony e chandruok mabiro kelo kuomgi.’
೧೭ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವುದು; ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವರು. ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.
18 Ma e gima Jehova Nyasaye Maratego, ma Nyasach Israel, wacho: ‘Kaka ich wangʼ mara kod mirimba aseolo kuom jogo modak Jerusalem, e kaka mirimba ibiro olo kuomu ka udhi Misri. Inibed gir kwongʼ kendo mabwogo ji, gima ingʼadogo bura kendo gir ajara; ok unuchak une kaeni kendo.’
೧೮ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’”
19 “Yaye jo-Juda modongʼ, Jehova Nyasaye osenyisou ni, ‘Kik udhi Misri.’ Beduru gadiera kuom ma: Asiemou kawuono
೧೯“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.
20 ni ne uketho ketho malich kane uora ir Jehova Nyasaye ma Nyasachu kendo uwacho ni, ‘Lamnwa Jehova Nyasaye ma Nyasachwa; nyiswa gik moko duto mowacho kendo wanatim kamano.’
೨೦ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.
21 Asewachonu kawuono, to pod ok uluoro Jehova Nyasaye ma Nyasachu kuom gigo duto mane oora mondo anyisu.
೨೧ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.
22 Omiyo koro, beduru gadieri kuom ma: Nonegu gi ligangla, kech kod masira kuma udwaro dhiye mondo udagie.”
೨೨ನೀವು ಯಾವ ಸ್ಥಳದಲ್ಲಿ ವಾಸಮಾಡಲು ಅಪೇಕ್ಷಿಸಿ ಹೋಗುತ್ತೀರೋ ಆ ಸ್ಥಳದಲ್ಲೇ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವಿರಿ ಎಂದು ಖಂಡಿತವಾಗಿ ತಿಳಿಯಿರಿ” ಎಂದು ಹೇಳಿದನು.