< Ayub 2 >
1 Odiechiengʼ machielo, malaike nochako obiro mondo gichungʼ e nyim Jehova Nyasaye, kendo Satan bende nobiro kodgi.
೧ದೇವದೂತರು ಇನ್ನೊಂದು ದಿನ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ಸೈತಾನನೂ ಅವರ ಸಂಗಡ ಬಂದು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡನು.
2 To Jehova Nyasaye nopenjo Satan niya, “Ia kanye?” Satan nodwoko Jehova Nyasaye niya, “Asebedo ka abayo abaya e piny, kendo alworora koni gi koni.”
೨ಯೆಹೋವನು, “ಎಲ್ಲಿಂದ ಬಂದೆ?” ಎಂದು ಸೈತಾನನನ್ನು ಕೇಳಲು ಸೈತಾನನು ಯೆಹೋವನಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗುತ್ತಾ ಇದ್ದು ಬಂದೆನು” ಎಂದನು.
3 Eka Jehova Nyasaye nopenjo Satan niya, “Dipo ka iseparo wach moro kuom jatichna Ayub? Onge ngʼat machielo e piny ngima machalo kode nikech olongʼo chuth kendo en ngʼama kare moluora kendo motangʼ ne richo.” Pod osiko mana gi berne mapile, kata obedo ni ne idonjone ira mondo atieke kaonge gimomiyo.
೩ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.
4 Satan nodwoko niya, “Dhano nyalo yie weyo gimoro amora ma en-go mana ni mondo obed mangima.
೪ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.
5 Koro temie kimulo dende gi chokene ka ok dokwongʼi e wangʼi.”
೫ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸದೆ ಬಿಡುವುದಿಲ್ಲ” ಎಂದನು.
6 Jehova Nyasaye nowachone Satan niya, “Mano ber, koro en e lweti; makmana ni ngimane ema kik imul.”
೬ಯೆಹೋವನು ಸೈತಾನನಿಗೆ, “ನೋಡು, ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದೇನೆ. ಅವನ ಪ್ರಾಣವನ್ನು ಉಳಿಸಬೇಕು” ಎಂದು ಅಪ್ಪಣೆ ಕೊಟ್ಟನು.
7 Kuom mano Satan nowuok oa e nyim Jehova Nyasaye, kendo nogoyo Ayub gi buche maremo malit, kochakore e tiende nyaka e wiye.
೭ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.
8 Eka Ayub nokawo balatago, mondo ogwonyrego kobet e buru.
೮ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.
9 Chiege nokone niya, “Pod kitini itwerigo atweya kuom Nyasachini? Angʼo mamoni kwongʼo Nyasaye mondo itho!”
೯ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, “ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ” ಎಂದು ಹೇಳಿದಳು.
10 To nodwoke niya, “Iwuoyo ka dhako mofuwo. Diwayie mana gi ber kende ma aa kuom Nyasaye to ok chandruok?” Kuom magi duto, Ayub ne ok otimo richo e gimoro amora mane owacho.
೧೦ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.
11 Ka osiepe Ayub adek mane gin Elifaz ja-Teman gi Bildad ja-Shua kod Zofar Ja-Namath nowinjo chandruok duto mane en-go, ne giwuok ka gia e miechgi kendo ne giwinjore mondo girom kaachiel mondo gidhi gitimne mos kendo gihoye.
೧೧ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.
12 Kane ginene ka pod gin mabor, ne ok ginyal ngʼeye. Negichako ywak matek, kendo ne giyiecho lepgi mi gibukore gi buru.
೧೨ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.
13 Bangʼe negibet kode piny e lowo kuom ndalo abiriyo odiechiengʼ gotieno. Onge ngʼama nowachone wach moro amora, nikech negineno ka chandruok mane en-go ne pek moloyo.
೧೩ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.