< Joel 2 >
1 Gouru tungʼ e Sayun; kendo gouru milome e goda maler. Ji duto modak e piny mondo otetni, nikech odiechiengʼ mar Jehova Nyasaye biro. Osesudo machiegni.
೧ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.
2 En odiechiengʼ mar mudho kod kuyo, kendo en odiechieng mar rumbi kod mudho mandiwa. Ochalo gi piny moyawore ma lerne rieny e kor gode; oganda mangʼongo kendo maratego mar jolweny biro, mane pok one nyaka nene, kendo ok nochak one ndalo mabiro nyaka chiengʼ.
೨ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.
3 Mach wengʼo nyimgi, to bangʼ-gi ligek mach bebnie. Piny chalo gi puoth Eden yo ka nyimgi to ka bangʼ-gi piny otwo modongʼ nono, onge gimoro manyalo pusorenegi matony.
೩ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.
4 Kitgi chalo kaka farese; Gilengʼore kaka jolweny moidho farese.
೪ಆ ಸೈನ್ಯಗಳ ಆಕಾರವು ಕುದುರೆಗಳ ಆಕಾರದ ಹಾಗೆ ಕಾಣಿಸುತ್ತದೆ; ಅವು ಸವಾರರಂತೆ ಓಡುತ್ತವೆ.
5 Gilengʼore ewi gode gi koko machalo koko mag geche lweny, kendo kaka mach makakni kawangʼo yugi, kendo mana kaka oganda mar jolweny maroteke machanore ne lweny.
೫ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
6 Ka ogendini goyo wangʼni kuomgi, to gidhier nono kendo wengegi lil.
೬ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.
7 Gibiro ka giger ka jokedo; gilwenyo ohinga ka jolweny. Gipangore wangʼ achiel ka gichanore, ma ok gilok yorgi.
೭ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;
8 Ok gituomre, moro ka moro pangore kochimo nyime tir. Gimuomo gik madigengʼ-gi ka ok giketho kaka gichanore.
೮ನೂಕುನುಗ್ಗಲ್ಲಿಲ್ಲದೆ ತಮ್ಮ ತಮ್ಮ ಸಾಲುಗಳಲ್ಲಿಯೇ ನಡೆಯುತ್ತವೆ; ಆಯುಧಗಳ ನಡುವೆ ನುಗ್ಗುತ್ತವೆ.
9 Gichomo dala maduongʼ gireto, giringo ka gilwenyo ohinga, giidho nyaka ei udi; kendo gidonjo gie dirisni mana ka jokwoge.
೯ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.
10 Piny tetni e nyimgi, polo bende yiengni, chiengʼ gi dwe lokore mudho, to sulwe bende ok rieny.
೧೦ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.
11 Jehova Nyasaye kok matek e nyim jolweny mage; jolweny mage ok nyal kwan, joma winje gin joma roteke. Odiechieng Jehova Nyasaye duongʼ; kendo olich mokadho. En ngʼa manyalo siro odiechiengno?
೧೧ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?
12 Jehova Nyasaye owacho ni, “Kata sani, dwoguru ira gi chunyu duto, ka uriyo kech kendo uywak kendo udengo.”
೧೨ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
13 Lokuru chunyu, to ok lepu. Dwoguru ir Jehova Nyasaye, ma Nyasachu, nikech ongʼwon kendo okecho ji, iye ok wangʼ piyo kendo ojahera, bende chunye lendo kuom kelo ne ji masira kata chwat.
೧೩ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
14 En ngʼa mongʼeyo? Onyalo lokore mi okechu kendo owenu gweth, kendo ubed gi chiwo mag cham kod misengini miolo piny muchiwo ni Jehova Nyasaye, Nyasachu.
೧೪ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.
15 Gouru turumbete e Sayun, landuru lemo mar riyo kech maler, luonguru chokruok maler.
೧೫ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.
16 Chokuru ji kanyakla, pwodhuru chokruok mar oganda, chokuru jodongo kaachiel, keluru nyithindo kaachiel, koda nyithindo madhodho thuno. Wuowi monyombo machiegni mondo owuogi oa e ode, kendo miaha mondo owuogi oa kachiena.
೧೬ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ.
17 Jodolo, matiyo e nyim Jehova Nyasaye, mondo oywagi, e kind agola gi kendo mar misango mar hekalu. Giywag kagiwacho niya, “Yaye Jehova Nyasaye, kik itiek jogi. Kik imi girkeni mari obed gima ichayo, ma ogendini wuoyo kuome marach. Angʼo ma dimi giwachi e dier ogendini niya, ‘Ere Nyasachgi?’”
೧೭ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.”
18 Eka Jehova Nyasaye nyiego nomaki nikech pinye kendo nokech joge.
೧೮ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,
19 Jehova Nyasaye nodwokgi kowacho niya, “Abiro miyou cham gi divai manyien kod mo zeituni, moromo yiengʼou chuth; ok anachak ami ubed jogo michayo e dier ogendini.
೧೯ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.
20 “Anariemb jolweny moa nyandwat madhi mabor kodu, anariembu nyaka e thim motwo, joge motelo nodhi e nam man yo wuok chiengʼ, to modongʼ nodhi e nam man yo podho chiengʼ. To jogi motho biro dungʼ, mi dungʼne nopongʼ piny.” Adiera osetimo gik madongo.
೨೦ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ, ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು. ಅದರ ದುರ್ವಾಸನೆಯು ಏರುವುದು. ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
21 Yaye piny, weuru luor; bed mamor kendo moil, adiera Jehova Nyasaye osetimo gik madongo.
೨೧ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
22 Yaye le manie thim, weuru luor; nikech pewe kwath koro loth, yiende nyago olembegi; Ngʼowu gi mzabibu golo mwandugi.
೨೨ಕಾಡುಮೃಗಗಳೇ ಅಂಜಬೇಡಿರಿ, ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು, ಮರವು ಹಣ್ಣು ಬಿಡುವುದು. ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
23 Yaye jo-Sayun moruru, beduru moil kuom Jehova Nyasaye, ma Nyasachu, nikech osemiyou koth mar chwiri e yo makare, asemiyou ngʼidho mogundho, moriwo kodh chwiri kod kodh opon, mana kaka chon.
೨೩ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.
24 Kuonde dino cham nopongʼ gi cham; kendo degi nopongʼ mi-oo oko gi divai manyien kod mo.
೨೪ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.
25 “Abiro chulou kuom higni ma bonyo osechamo; bonyo madongo gi matindo, gi bonyo mamoko gi mony mar bonyo; ma gin oganda maduongʼ mar jolweny mara mane aoro e dieru.
೨೫ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
26 Unubed gi chiemo mathoth, ma uchamo nyaka unuyiengʼ, kendo unupak nying Jehova Nyasaye, ma Nyasachu, mosetimonu timbe miwuoro. Wi joga ok nochak okuod kendo.
೨೬ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
27 Eka unungʼe ni antie ei Israel, ni An e Jehova Nyasaye, ma Nyasachu, kendo ni onge moro machielo; wi joga ok nochak okuod kendo.”
೨೭ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.
28 “Bangʼe, anaol Roho Maler mara kuom ji duto. Yawuotu gi nyiu nokor wach, jodongu nolek lek, jou matindo none fweny.
೨೮ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
29 Kata mana jotichna machwo gi mamon, bende, naol Roho Maler mara kuomgi ndalono.
೨೯ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.
30 Anatim honni miwuoro e kor polo to e piny, remo gi mach kod iro madhwolore nobedie.
೩೦ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
31 Wangʼ chiengʼ nolokre mudho to dwe nolokre remo, kapok odiechiengʼ maduongʼ kendo malich mar Jehova Nyasaye ochopo.
೩೧ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
32 To ngʼato ka ngʼato maluongo nying Jehova Nyasaye noresi; nikech ewi got Sayun kendo ei Jerusalem resruok nobedie, mana kaka Jehova Nyasaye osewacho, e dier joma otony ma Jehova Nyasaye oluongo.”
೩೨ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”