< Johana 17 >

1 Kane Yesu osetieko wacho wechegi, nongʼiyo polo bangʼe olamo kama: “Wuora, sa osechopo. Mi Wuodi duongʼ mondo Wuodi bende omiyi duongʼ.
ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, “ತಂದೆಯೇ, ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.
2 Nimar isemiye loch ewi ji duto mondo omi ji duto misemiye oyud ngima mochwere. (aiōnios g166)
ನೀನು ಯಾರಾರನ್ನು ಕೊಟ್ಟಿದ್ದೀಯೋಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. (aiōnios g166)
3 To ngima mochwere ema: ni mondo gingʼeyi in Nyasaye makende mar adier, kod Yesu Kristo, Jal miseoro. (aiōnios g166)
ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು. (aiōnios g166)
4 Asemiyi duongʼ e piny kuom tieko tich mane imiya mondo atim.
ನೀನು ನನಗೆ ಕೊಟ್ಟ ಕೆಲಸವನ್ನು ನಾನುನೆರವೇರಿಸಿಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.
5 To koro, Wuora, miya duongʼ e nyimi machal gi duongʼ mane an-go kodi kane piny pok obetie.
ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.
6 “Asehulo nyingi ni joma ne imiya e piny. Ne gin jogi, to ne imiyagi, kendo koro girito wachni.
“ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.
7 Koro gingʼeyo ni gik moko duto ma isemiya oa kuomi.
ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.
8 Nimar ne amiyogi weche mane imiya kendo ne girwakogi. Gisengʼeyo gadier ni ne aa iri, kendo giseyie ni ne iora.
ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತುನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.
9 Koro alamonegi. Ok alam ni piny, to alamo ni joma isemiya, nimar gin magi.
ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ಲೋಕಕ್ಕೋಸ್ಕರ ಬೇಡಿಕೊಳ್ಳದೆ, ನೀನು ನನಗೆ ಕೊಟ್ಟವರಿಗಾಗಿಯೇ ಬೇಡಿಕೊಳ್ಳುತ್ತೇನೆ, ಏಕೆಂದರೆ, ಇವರು ನಿನ್ನವರು.
10 Giga duto gin magi, kendo gigi duto gin maga, kendo aseyudo duongʼ kuomgi.
೧೦ನನ್ನದೆಲ್ಲವೂ ನಿನ್ನದೇ ಮತ್ತು ನಿನ್ನದೆಲ್ಲವೂ ನನ್ನದೇ. ನಾನು ಇವರಲ್ಲಿ ಮಹಿಮೆಗೊಂಡಿದ್ದೇನೆ.
11 Koro ndalona mag bet e piny orumo, nimar abiro iri, to gin pod gin e piny. Yaye Wuoro Maler, ritgi gi teko mar nyingi mane imiya, mondo gibed achiel mana kaka wan kodi wan achiel.
೧೧ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ, ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು, ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡು.
12 Kane pod an kodgi, to nachikogi kendo naritogi maber gi nying mane imiya. Onge kata achiel kuomgi moselal, makmana ngʼatno mane ochan ni nyaka lal mondo Ndiko ochop kare.
೧೨ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.
13 “Koro abiro iri, to awacho gigi kapod an e piny, mondo gibed gi morna mogundho eigi.
೧೩“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14 Asemiyogi wachni, kendo piny ochayogi, nimar ok gin mag pinyni, mana kaka an bende ok an mar pinyni.
೧೪ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
15 Ok alam mondo igolgi oko e piny, to alamo ni iritgi mondo kik Ngʼama Rach timnegi marach.
೧೫ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.
16 Ok gin mag pinyni, mana kaka an bende ok an mar pinyni.
೧೬ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.
17 Pwodhgi gi adierani, nikech Wachni en adiera.
೧೭ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
18 Kaka ne iora e piny e kaka an bende aseorogi e piny.
೧೮ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.
19 Apwodhora nikech gin, mondo omi gin bende gipwodhreni gi adiera.
೧೯ಇವರು ನಿಜವಾಗಿ ಪ್ರತಿಷ್ಠಿರಾಗಬೇಕೆಂದು, ನನ್ನನ್ನು ನಾನೇ ಇವರಿಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ.
20 “Ok alam ni gin kendgi, to alamo bende ni jogo mabiro yie kuoma bangʼ ka gisepuonjogi.
೨೦“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.
21 Yaye Wuora, mi gibed achiel, mana kaka in e iya kendo an e iyi. Mad gin bende gibed e achiel kodwa, mondo piny oyie ni iseora.
೨೧ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
22 Asemiyogi duongʼ mane imiya, mondo gibed achiel kaka wan achiel,
೨೨ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.
23 ka an kuomgi kendo in kuoma. Mad giriwre gibed gimoro achiel mondo piny ongʼe ni ne iora, kendo ni iseherogi mana kaka isehera.
೨೩ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
24 “Wuora, adwaro ni joma isemiya obed koda kama antie, kendo ni gine duongʼna, ma en duongʼno misemiya nikech ne ihera kapok nochwe piny.
೨೪ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು, ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.
25 “Wuoro Makare, kata obedo ni piny ok ongʼeyi, an to angʼeyi, kendo jogi bende ongʼeyo ni ne iora.
೨೫ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.
26 Asehulonegi nyingi, kendo pod abiro medo nyiso ji ngʼama in, mondo hera miherago obed kuomgi, kendo an awuon bende abed kuomgi.”
೨೬ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ, ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ” ಎಂದನು.

< Johana 17 >