< Joshua 17 >
1 Ma e pok mar dhood Manase, kaka wuod Josef makayo, tiende ni, mar Makir, wuod Manase makayo. Makir ne kwar jo-Gilead, ma norwako Gilead gi Bashan nikech jo-Makir ne gin jolweny mongʼere.
೧ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.
2 Omiyo pokni nowene joka Manase mane odongʼ, kaka, anywola mar Abiezer, Helek Asriel, Shekem, Hefer, kod Shemida. Magi e nyikwa Manase ma wuod Josef mamoko machwo kaluwore gi anywolagi.
೨ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.
3 Zelofehad ma wuod Hefer, ma wuod Gilead, ma wuod Makir, ma wuod Manase, ne onge yawuowi makmana nyiri kende, ma nying-gi ne gin: Mala, Nowa, Hogla, Milka gi Tirza.
೩ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳ ಹೊರತು ಗಂಡು ಮಕ್ಕಳು ಇರಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಅವನ ಹೆಣ್ಣು ಮಕ್ಕಳು.
4 Negidhi ir Eliazar jadolo kod Joshua wuod Nun, to gi jotelo mi giwachonegi niya, “Jehova Nyasaye nochiko Musa mondo opognwa girkeni e dier owetewa.” Omiyo Joshua nomiyogi girkeni kaachiel gi owete wuonegi, kaluwore gi chik Jehova Nyasaye.
೪ಇವರು ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ, ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನಲ್ಲಾ?” ಎಂದು ಹೇಳಲು ಯೆಹೋಶುವನು ಯೆಹೋವನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸ್ವತ್ತನ್ನು ಕೊಟ್ಟನು.
5 Pok mar Manase ne en lope apar kapok okwan piny Gilead kod piny Bashan mantiere yo wuok chiengʼ mar aora Jordan,
೫ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.
6 nikech nyi dhood Manase noyudo girkeni e kind owetegi. Piny jo-Gilead nobedo mar nyikwa Manase mamoko.
೬ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.
7 Piny Manase nochakore Asher nyaka Mikmethath mantiere yo wuok chiengʼ mar Shekem. Tongʼno nochakore yo milambo mokawo nyaka joma odak En Tapua.
೭ಮನಸ್ಸೆಯವರ ಸ್ವತ್ತಿನ ಮೇರೆಯು ಆಶೇರ್ ಊರಿನಿಂದ ಶೆಕೆಮಿನ ಪೂರ್ವದಲ್ಲಿರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.
8 Manase nokawo piny Tapua, to Tapua owuon, mane nitiere e tongʼ Manase, nobedo mar jo-Efraim.
೮ತಪ್ಪೂಹ ಪಟ್ಟಣಕ್ಕೆ ಸೇರುವ ಭೂಮಿಯು ಮನಸ್ಸೆಯವರದು; ಆದರೆ ಅವರ ಮೇರೆಗೆ ಹೊಂದಿರುವ ತಪ್ಪೂಹ ಪಟ್ಟಣವು ಎಫ್ರಾಯೀಮ್ಯರದು;
9 Eka tongʼno nodhi nyime yo milambo mochopo nyaka Kana Ravin. Ne nitiere mier matindo ma mek Efraim mane nitiere e dier mier matindo mag Manase, makmana tongʼ Manase ne nitiere yo nyandwat mar holo matut madiny kendo mogik e nam.
೯ಅಲ್ಲಿಂದ ಅವರ ಮೇರೆಯು ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಾಯೀಮ್ಯರಿಗೂ ಕೆಲವು ಪಟ್ಟಣಗಳಿರುತ್ತವೆ. ಮನಸ್ಸೆಯವರ ಮುಂದಿನ ಮೇರೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.
10 Yo milambo ne en piny Efraim, to yo nyandwat ne en mar Manase. Piny Manase nochopo e nam kendo mokiewo gi Asher yo nyandwat, to Isakar yo wuok chiengʼ.
೧೦ಆ ಹಳ್ಳದ ದಕ್ಷಿಣ ತೀರವು ಎಫ್ರಾಯೀಮ್ಯರದು; ಉತ್ತರ ತೀರವು ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಮೇರೆಯು. ಉತ್ತರಕ್ಕೆ ಆಶೇರ್ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ದೇಶವೂ ಇರುತ್ತದೆ.
11 E Isakar kod Asher, Manase ne nitie bende kod Beth Shan, Ibleam kod jo-Dor, Endor, Tanak kod Megido, kaachiel gi jogo mane odak machiegni kodgi, ngʼat mar adek e kwan-no ne en Nafoth.
೧೧ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬುವವರ ಪ್ರಾಂತ್ಯಗಳಲ್ಲಿ ಬೇತಷೆಯಾನ್, ಇಬ್ಲೆಯಾಮ, ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ, ತಾನಾಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳಿಗೆ ಸೇರಿದ ಊರುಗಳು ಸಿಕ್ಕಿದವು.
12 Kata kamano, jo-Manase ne ok nyal kawo e mier matindogi, nikech jo-Kanaan noramo ni nyaka gidag kanyo.
೧೨ಆದರೆ ಮನಸ್ಸೆಯವರು ಆ ಪಟ್ಟಣಗಳ ನಿವಾಸಿಗಳನ್ನು ಹೊರದೂಡಲಿಲ್ಲ. ಕಾನಾನ್ಯರಿಗೆ ಅಲ್ಲಿ ವಾಸಿಸುವುದಕ್ಕೆ ಅನುಕೂಲವಾಯಿತು.
13 Omiyo ka jo-Israel nodoko maroteke, negiketo jo-Kanaan obedo wasumbinigi mane ok giriembogi kata matin.
೧೩ಇಸ್ರಾಯೇಲ್ಯರು ಬಲಗೊಂಡ ಮೇಲೆ ಕಾನಾನ್ಯರನ್ನು ಹೊರಡಿಸದೇ ಅವರನ್ನು ದಾಸತ್ವಕ್ಕೆ ಹಚ್ಚಿದರು.
14 Joka Josef nowachone Joshua niya, “Ere gima omiyo isepogonwa kendo miyowa mana kamoro achiel kaka girkeni? Wasenyaa kendo Jehova Nyasaye osegwedhowa mogundho.”
೧೪ಆದರೆ ಯೋಸೇಫನ ಸಂತಾನದವರು ಯೆಹೋಶುವನಿಗೆ, “ನೀನು ಚೀಟು ಹಾಕಿ, ನಮಗೆ ಒಂದೇ ಭಾಗವನ್ನು ಕೊಟ್ಟದ್ದೇಕೆ? ಯೆಹೋವನು ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿರುವುದರಿಂದ ನಾವು ಮಹಾಜನಾಂಗವಾಗಿದ್ದೇವಲ್ಲಾ?” ಎಂದು ಹೇಳಲು
15 Joshua nodwokogi niya, “To ka usenyaa ahinya kamano kendo piny gode mag Efraim koro tinnu, kare koro dhiuru e bungu manie piny jo-Perizi kod jo-Refai mondo ubet kanyo obed maru.”
೧೫ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.
16 Joka Josef to nodwoko niya, “Piny godeno ok oromowa, kendo jo-Kanaan duto modak e pawno nigi geche mag lweny ma tiendgi otimo nyinyo, kendo mago modak Beth Shan gi mier molwore kaachiel gi holo mar Jezreel bende nigi gechego.”
೧೬ಅವರು ತಿರುಗಿ ಯೆಹೋಶುವನಿಗೆ, “ನಮ್ಮ ಪರ್ವತ ಪ್ರದೇಶವು ನಮಗೆ ಸಾಲುವುದಿಲ್ಲ. ಬೇತಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರೂ ಕಬ್ಬಿಣದ ರಥವುಳ್ಳವರು” ಎಂದರು
17 To Joshua nowachone od Josef, ma gin Efraim kod Manase niya, “Usenyaa kendo un joma nigi teko. Ok unubed gi pok achiel kende,
೧೭ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
18 to nyaka piny moyugno manie got bende. Beteuru nyaka kuma unyalo, to obiro bedo maru; kata obedo ni jo-Kanaan nigi geche nyinyo kendo gi tegno, pod unyalo riembogi.”
೧೮ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.