< Nehemia 6 >
1 Ka wach nobiro ne Sanbalat, Tobia, Geshem ma ja-Arabu kod wasikwa mamoko modongʼ nine wagero ohinga kendo ne onge kamoro amora mane otuch, kata obedo ni e sechego ne pod ok aguro dhorangach.
೧ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.
2 Sanbalat kod Geshem noorona wach kama: “Bi mondo warom e achiel kuom mier mantiere e holo mar Ono.” To ma ne en mana riekogi mar hinya;
೨ಅವರಲ್ಲಿ ಸನ್ಬಲ್ಲಟ್, ಗೆಷೆಮರು ನನಗೆ, “ಓನೋ ಸಮಭೂಮಿಯ ಒಂದು ಗ್ರಾಮದಲ್ಲಿ ಒಂದು ಸಭೆ ಸೇರೋಣ ಬಾ” ಎಂದು ಹೇಳಿ ಕಳುಹಿಸಿದರು. ಇದು ಅವರು ನನಗೆ ಕೇಡು ಬಗೆಯುವುದಕ್ಕಾಗಿಯೇ ಎಂದು ತಿಳಿಯಿತು.
3 omiyo ne aoronegi jaote gi dwoko niya, “An kod tich maduongʼ kendo ok anyal lor piny. Ere gima tangʼ mi tich chungʼ mi aweye kendo alor piny abi iri?”
೩ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು.
4 Ne giorona wach achielni nyadingʼwen, to seche duto ne amiyogi dwoko machalre.
೪ಅವರು ನಾಲ್ಕು ಬಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರವನ್ನು ಕೊಟ್ಟೆನು.
5 Eka, e ote mar abich, Sanbalat noorona jakonyne mana gi wach achielni, kendo e lwete ne nitie baruwa ma ok omuon
೫ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.
6 mane ondike niya: “Oselandi e dier ogendini, kendo Geshem osewacho ni en adier ni in kod jo-Yahudi uchano mar monjowa, to ma emomiyo ugero ohingani. Kendo kaluwore gi wach moselandore en ni idwaro bedo ruodhgi
೬ಅದರಲ್ಲಿ “ಗೆಷೆಮ್ ಎಂಬುವನು ನನಗೆ ತಿಳಿಸಿದ ಪ್ರಕಾರ, ನೀನೂ ಮತ್ತು ಯೆಹೂದ್ಯರೂ ತಿರುಗಿ ಬೀಳಬೇಕೆಂದಿದ್ದೀರಿ; ಆದುದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ ಮತ್ತು ನೀನು ಅವರಿಗೆ ಅರಸನಾಗಬೇಕೆಂದಿರುವೆಯೆಂಬ ಸುದ್ದಿಯು ಜನರಲ್ಲಿ ಹಬ್ಬಿದೆ.
7 kendo iseyiero jonabi mondo okor wachni Jerusalem ni, ‘Nitiere ruoth e piny Juda!’ Koro wachni biro dwogone ruoth; omiyo bi, mondo wapim wachni.”
೭ಇದಲ್ಲದೆ, ‘ಯೆಹೂದದಲ್ಲಿ ಒಬ್ಬ ಅರಸನಿರುತ್ತಾನೆ’ ಎಂದು ನಿನ್ನನ್ನು ಕುರಿತು ಯೆರೂಸಲೇಮಿನಲ್ಲಿ ಪ್ರಕಟಿಸುವುದಕ್ಕೋಸ್ಕರ ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನರು ಹೇಳುತ್ತಿದ್ದಾರೆ. ಈ ಸುದ್ದಿ ರಾಜನಿಗೂ ತಲುಪಿದೆ; ಆದುದರಿಂದ ನಾವು ಸಭೆ ಸೇರಿ ಆಲೋಚಿಸೋಣ ಬಾ” ಎಂದು ಅದರಲ್ಲಿ ಬರೆದಿತ್ತು.
8 Ne aorone dwoko niya, “Gima iwachono ok en adier; mano iparo mana gi pachi owuon.”
೮ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.
9 Ne gitemo mana mar bwogowa, kagiwacho niya, “Lwetgi biro bedo mayom yom, kendo ok gibi tieko tijni.” To ne alemo niya, “Yie imi lweta obed gi teko koro.”
೯ಹೀಗೆ ಎಲ್ಲರೂ, “ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ಮುಗಿಸದೆ ಇರಲಿ” ಎಂದು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ಆದರೆ ನನ್ನ ದೇವರೇ, ನನ್ನ ಕೈಗಳನ್ನು ಬಲಗೊಳಿಸಿ ನನ್ನನ್ನು ಧೈರ್ಯಪಡಿಸು ಎಂದು ಪ್ರಾರ್ಥಿಸಿದೆನು
10 Chiengʼ moro achiel ne adhi e od Shemaya wuod Delaya, ma wuod Mehetabel, mane olorne ei dalane. Nowacho niya, “We warom e od Nyasaye, ei hekalu, kendo mondo walor dhout hekalu, nikech gibiro negi gotienoni.”
೧೦ಆನಂತರ ನಾನು ಮೆಹೇಟಬೇಲನ ಮೊಮ್ಮಗನೂ, ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆನು. ಅವನು ಅಲ್ಲಿ ಅಡಗಿಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಈ ರಾತ್ರಿಯೇ ಬರುತ್ತಾರೆ. ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿ ಪ್ರವೇಶಿಸಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ” ಎಂದು ಹೇಳಿದನು.
11 To ne awacho niya, “Bende dichwo machalo koda kama diringi? Koso ngʼato kaka an nyalo dhi ei hekalu mondo ores ngimane? Ok abi dhi kata nade!”
೧೧ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
12 Ne afwenyo ni Nyasaye ne ok oore, to ne osekoro wach kuoma nikech Tobia kod Sanbalat ne osengʼiewe mar timo kamano.
೧೨ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.
13 Ne osengʼiewe mondo obwoga eka atim richo mar timo ma, bangʼe gimiya nying marach mar njawo kita.
೧೩ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.
14 Par Tobia kod Sanbalat, yaye Nyasacha, kuom gima gisetimo; par bende janabi madhako miluongo ni Noadia kod jonabi mamoko mosetemo bwoga.
೧೪ನನ್ನ ದೇವರೇ, ಟೋಬೀಯ, ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮತ್ತು ಇತರ ಪ್ರವಾದಿಗಳನ್ನು ನೆನಪಿನಲ್ಲಿಟ್ಟುಕೋ.
15 Omiyo gedo mar ohinga norumo e odiechiengʼ mar piero ariyo gabich mar Elul, kendo gedono nokawo ndalo piero abich gariyo.
೧೫ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು.
16 Ka wasikwa duto nowinjo ma, ogendini molworowa luoro nomako kendo chunygi nobwok, nikech negifwenyo ni tijni notim gi teko mar Nyasachwa.
೧೬ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.
17 Bende, e ndalogo joka ruoth ma Juda ne oro barupe mangʼeny ne Tobia, kendo dwoko mag Tobia ne medo bironegi.
೧೭ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.
18 Nimar ji mangʼeny Juda nokwongʼorene, nikech ne en or Shekania wuod Ara, to wuode Jehohanan nonywomo nyar Meshulam wuod Berekia.
೧೮ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು.
19 Kata kamano, negisiko ka gikelona wach mar timne maber kendo nyise gima awacho. To Tobia nodhi nyime ka orona barupe mondo gibwogago.
೧೯ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.