< Zaburi 136 >
1 Gouru erokamano ne Jehova Nyasaye, nimar ober.
೧ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
2 Gouru erokamano ne Nyasach nyiseche:
೨ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
3 Gouru erokamano ne Ruodh ruodhi:
೩ಕರ್ತರ ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
4 Ne en kendo matimo honni madongo,
೪ಮಹತ್ಕಾರ್ಯಗಳನ್ನು ನಡೆಸುವುದಕ್ಕೆ ಆತನೊಬ್ಬನೇ ಶಕ್ತನು, ಆತನ ಪ್ರೀತಿಯು ಶಾಶ್ವತವಾದದ್ದು.
5 Jal mane oloso polo gi riekone,
೫ಆತನು ಆಕಾಶವನ್ನು ಜ್ಞಾನದಿಂದ ನಿರ್ಮಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
6 Jal mane oyaro piny ewi pige,
೬ಆತನು ಭೂಮಿಯನ್ನು ಜಲರಾಶಿಗಳ ಮೇಲೆ ಹಾಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
7 Jal mane oloso rameny madongo dongo,
೭ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
8 Nochweyo wangʼ chiengʼ mondo orit odiechiengʼ,
೮ಸೂರ್ಯನು ಹಗಲನ್ನು ಆಳುತ್ತಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
9 kod dwe gi sulwe mondo orit otieno;
೯ಚಂದ್ರ, ನಕ್ಷತ್ರಗಳು ರಾತ್ರಿಯನ್ನು ಆಳುತ್ತವೆ, ಆತನ ಪ್ರೀತಿಯು ಶಾಶ್ವತವಾದದ್ದು.
10 ne En mane onego nyithindo makayo mag Misri,
೧೦ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
11 kendo mane ogolo jo-Israel oko kuomgi,
೧೧ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
12 nogologi gi lwedo motegno kod bat morie;
೧೨ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
13 ne En mane obaro Nam Makwar diere ariyo;
೧೩ಆತನು ಕೆಂಪು ಸಮುದ್ರವನ್ನು ವಿಭಾಗಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
14 mi nogolo jo-Israel koluwo diere tir,
೧೪ಇಸ್ರಾಯೇಲರನ್ನು ಅದರ ಮಧ್ಯದಲ್ಲಿಯೇ ನಡೆಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
15 to Farao gi jolwenje to nomiyo Nam Makwar oywero;
೧೫ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
16 ne En mane otelo ne joge e thim,
೧೬ಆತನು ತನ್ನ ಪ್ರಜೆಯನ್ನು ಅರಣ್ಯದೊಳಗೆ ಕರೆತಂದನು, ಆತನ ಪ್ರೀತಿಯು ಶಾಶ್ವತವಾದದ್ದು.
17 ne En mane ogoyo ruodhi madongo piny,
೧೭ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.
18 kendo mane onego ruodhi maroteke;
೧೮ಶ್ರೇಷ್ಠ ರಾಜರನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
19 Kaka Sihon ruodh jo-Amor,
೧೯ಅಮೋರಿಯರ ಅರಸನಾದ ಸೀಹೋನನು ಅವರಲ್ಲೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
೨೦ಬಾಷಾನಿನ ಅರಸನಾದ ಓಗನು ಇನ್ನೊಬ್ಬನು, ಆತನ ಪ್ರೀತಿಯು ಶಾಶ್ವತವಾದದ್ದು.
21 mi nochiwo pinygi kaka girkeni,
೨೧ಅವರ ದೇಶವನ್ನು ಇಸ್ರಾಯೇಲರಿಗೆ ಸ್ವತ್ತಾಗಿ ಕೊಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.
22 Kaka girkeni ne Israel jatichne;
೨೨ಆತನ ಸೇವಕರಾದ ಇಸ್ರಾಯೇಲರಿಗೆ ಅದು ಸ್ವಾಸ್ತ್ಯವಾಯಿತು, ಆತನ ಪ್ರೀತಿಯು ಶಾಶ್ವತವಾದದ್ದು.
23 ne En mane oparowa ka piny ochamowa,
೨೩ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.
24 kendo mane ogonyowa e lwet wasikwa,
೨೪ನಮ್ಮ ಶತ್ರುಗಳಿಂದ ನಮ್ಮನ್ನು ಬಿಡಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
25 machiwo chiemo ne chwech duto,
೨೫ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.
26 Gouru erokamano ne Nyasach polo,
೨೬ಪರಲೋಕದಲ್ಲಿರುವ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.