< Zaburi 94 >
1 Yaye Jehova Nyasaye en Nyasaye ma jachul kuor, yaye Nyasaye ma jachul kuor, nyis lerni.
೧ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.
2 Aa malo, yaye Jangʼad bura mar piny; chul josunga gima owinjore kodgi.
೨ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು.
3 Yaye Jehova Nyasaye, nyaka karangʼo ma joma timbegi richo, nyaka karangʼo ma joma timbegi richo biro goyo siboi?
೩ಯೆಹೋವನೇ, ದುಷ್ಟರು ಎಲ್ಲಿಯವರೆಗೆ, ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು?
4 Gidiro weche mag wich teko; joma timbegi richo duto opongʼ gi sunga.
೪ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.
5 Gikidho jogi, yaye Jehova Nyasaye; gidiyo girkeni mari.
೫ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;
6 Ginego dhako ma chwore otho gi jadak; gideyo ngʼama onge gi wuon.
೬ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.
7 Giwacho niya, “Jehova Nyasaye ok ne; Nyasach Jakobo ok dew gik ma watimo.”
೭ಅವರು, “ಯಾಹುವು ನೋಡುವುದೇ ಇಲ್ಲ; ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ.
8 To winjuru, un joma omingʼ e dier ji; un joma ofuwogi, ubiro bedo mariek karangʼo?
೮ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?
9 Donge ngʼama nochomo it winjo wach? Donge ngʼat manoloso wangʼ neno?
೯ಕಿವಿಮಾಡಿದವನು ಕೇಳನೋ? ಕಣ್ಣುಕೊಟ್ಟವನು ನೋಡನೋ?
10 Donge ngʼat marieyo ogendini kumo ji? Bende ngʼat mapuonjo dhano dibed maonge rieko?
೧೦ಜನಾಂಗಗಳನ್ನು ಶಿಕ್ಷಿಸುವವನೂ, ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ?
11 Jehova Nyasaye ongʼeyo pach dhano; ongʼeyo ni gionge tich.
೧೧ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ.
12 Ogwedh ngʼat mikumo, yaye Jehova Nyasaye, ma en ngʼama ipuonjo koa e chikeni;
೧೨ಯಾಹುವೇ, ನೀನು ಯಾರನ್ನು ಶಿಕ್ಷಿಸಿ, ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು.
13 imiyo ngʼama kamano resruok e ndalo chandruok, nyaka chop kuny bur ne joma richo.
೧೩ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ.
14 Nimar Jehova Nyasaye ok bi dagi joge; ok obi jwangʼo girkeni mare.
೧೪ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; ತನ್ನ ಸ್ವತ್ತನ್ನು ಕೈಬಿಡುವುದಿಲ್ಲ.
15 Yor adiera biro yudore kendo ne joma kare, kendo joma oriere gie chunygi biro luwe.
೧೫ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು.
16 En ngʼa mabiro radona gi joma timbegi richo? Ngʼatno mabiro chwaka kakedo gi joricho?
೧೬ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?
17 Ka dine Jehova Nyasaye ok omiya kony, to dikoro asedhi dak e piny ma ji olingʼe thi.
೧೭ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 Kane awacho niya, “Tienda kier,” to herani nojola, yaye Jehova Nyasaye.
೧೮ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, ನಿನ್ನ ಕೃಪೆಯು ನನಗೆ ಆಧಾರವಾಯಿತು.
19 Ka achiedh-nade nopongʼo chunya, to hochni noduogo mor e ngimana.
೧೯ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
20 Loch marach bende inyalo riworigo adier, loch mamiyo ji chandore malit nikech chikene maricho?
೨೦ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, ನಿನಗೂ ಸಂಬಂಧವೇನು?
21 Ginywako ne joma kare kendo gingʼadone joma onge ketho buch tho.
೨೧ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
22 To Jehova Nyasaye osebedo ohingana, kendo Nyasacha en lwanda ma aponde.
೨೨ಆದರೆ ಯೆಹೋವನು ನನ್ನ ದುರ್ಗವೂ, ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ.
23 Obiro chulogi nikech richogi kendo obiro tiekogi nikech timbegi maricho; Jehova Nyasaye ma Nyasachwa biro tiekogi.
೨೩ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು.