< 1 Joni 2 >
1 Nobana, ndikumulembela zintu ezi kuchitila kuti mutabisyi. Pele naa kuti umwi wabisya, tulaawe sikutwiminina kuli Taata, Jesu Kkilisito, oyo ululeme.
೧ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.
2 Ngonguwe muliiyo wezibi zyesu, kutaamba zyeesu luzutu pele kuti azyenyika yoonse mbiizulwa.
೨ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.
3 Mulicheechi tulizi kuti twasika aakumuziba: naa twabamba milawu yakwe.
೩ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.
4 Oyo uwamba kuti, “Leza ndimwizi,” pesi katabambi milawu yakwe mubeji, alimwi bwini tabumo mulinguwe.
೪ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.
5 Pele oyo woonse uubamba ijwi lyakwe, mulinguwe nchobeni luyando lwa Leza lwakakwanisigwa. Acheechi tulizi kuti tuli mulinguwe.
೫ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
6 Kufumbwa uuwamba kuti ukalilide muli Leza welede kweenda mbuli Jesu Kkilisito mbwakeenda.
೬ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.
7 Nomuyandwa, teensi ndikumulembela mulawu mupya pe, pele mulawu wachiindi ngumwakali aawo kuzwa kumatalikilo. Mulawu wachiindi ndijwi ndimwakamvwa.
೭ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಆಜ್ಞೆಯಾಗಿದೆ. ಈ ಹಳೆಯ ಆಜ್ಞೆಯು ನೀವು ಕೇಳಿದ ವಾಕ್ಯವೇ.
8 Nikuba boobo ndimulembela mulawu mupya, oyo uuli nkikasimpe muli Kkilisito amulindinywe, nkambo mudima ulimukwiinda, alimwi mumuuni wabwini ulimukumweka kale.
೮ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
9 Oyo uwamba kuti uli mumumuni kasulide munyiina uchili mumudima alino.
೯ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
10 Oyo uyanda munyina ukkalilide mumumuni alimwi takwe mweenya wakudadalika mulinguwe.
೧೦ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.
11 Pele oyo uusula munyina uli mumudima alimwi weenda mumudima; tazi nkwayobuya nkambo mudima woofwazya menso aakwe.
೧೧ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ನಡೆಯುತ್ತಿದ್ದಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡುಮಾಡಿರುವುದರಿಂದ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂದು ಅವನಿಗೆ ತಿಳಿಯದು.
12 Ndikulemba kulindinywe, nobana, nkambo izibi zyenu zilalekelelwa nkambo kezina lyakwe.
೧೨ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
13 Ndikumulembela, nomandende, nkambo muli mwizi ooyo uzwa kumatalikilo. Ndilikumulembela, nobalumi banini, nkambo mwakamuzunda mubi. Ndamulembela nobana, nkambo muli mwizi Taata.
೧೩ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ. ಮಕ್ಕಳೇ, ನೀವು ತಂದೆಯನ್ನು ಬಲ್ಲವರಾಗಿರುವುದರಿಂದ ನಿಮಗೆ ಬರೆಯುತ್ತಿದ್ದೇನೆ.
14 Ndamulembela nomandende, nkambo mulimwizi ooyo uzwa kumatalikilo. Ndamulembela nobalumi banini, nkambo mulanguuzu, alimwi ijwi lya Leza lilikalilide mulindinywe, alimwi mwamuzunda mubi.
೧೪ತಂದೆಗಳಿರಾ, ಆದಿಯಿಂದಿರುವಾತನನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಾನು ನಿಮಗೆ ಬರೆದಿದ್ದೇನೆ.
15 Mutayandi inyika niziba zintu zili munyika. Kuti kakuli umwi uyanda nyika, luyando lwa Taata talumo mulinguwe.
೧೫ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.
16 Nkambo zyoonse zili munyika - menso menso azyanyama, nikuba chitumpya menso, akalutiluti kabuumi - tazizwi kuli Taata pele zizwa kunyika.
೧೬ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
17 Alimwi nyika anzyiyanda ziliinda. Pele kufumbwa uuchita luyando lwa Leza uyokkalilila akutamani. (aiōn )
೧೭ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು. (aiōn )
18 Nobana banini, lyaba hoola lyamamanino. Mbuuli mbumwakamvwa kuti sikukkazya Kkilisito ulasika, lino bamukazya Kkilisito mbiingi basika. Akambo kazeezi kuti nihoola lyamamanino.
೧೮ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಕ್ರಿಸ್ತವಿರೋಧಿಗಳು ಅನೇಕರಿದ್ದಾರೆ. ಆದ್ದರಿಂದ ಇದು ಅಂತ್ಯ ಕಾಲವಾಗಿದೆ ಎಂದು ನಾವು ಬಲ್ಲವರಾಗಿದ್ದೇವೆ.
19 Bakazwa mulindiswe, pele teensi bakali mulindiswe. Nkambo nikwali kuti balikuzwa muli ndiswe nibakakkalilila aswebo. Pele nibakazwa, zyakatondezya kuti teensi bakazwa muli ndiswe.
೧೯ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.
20 Pele mula kunanikwa kuzwa ku Musalali, alimwi mulikezi kasimpe.
೨೦ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.
21 Teensi ndakamulembela akaambo kakuti tamwizi bwini pe, pele nkambo mulibwizi alimwi taakwe kubeja kuzwa mubwini.
೨೧ನೀವು ಸತ್ಯವನ್ನು ತಿಳಿಯದವರಲ್ಲ. ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಹುಟ್ಟಿ ಬರುವುದಿಲ್ಲವೆಂಬುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.
22 Ngwani mubeji pele oyo ukazya kuti Jesu ngo Kkilisito? Ooyo muntu ngonguwe sikukazya Kkilisito, mbuuli kuti wakaka Taata a Mwana.
೨೨ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.
23 Tawo pe uukkaka Mwana uula Taata. Kufumbwa uuzumina Mwana a Taata ulaawe.
೨೩ಯಾರು ದೇವರ ಮಗನನ್ನು ಅಲ್ಲಗಳೆಯುವನೋ ಅವನು ದೇವರಿಗೆ ಸೇರಿದವನಲ್ಲ. ಯಾರು ಮಗನನ್ನು ಒಪ್ಪಿಕೊಳ್ಳುವನೋ ಅವನು ತಂದೆಯಾದ ದೇವರಿಗೆ ಸೇರಿದವನಾಗಿದ್ದಾನೆ.
24 Ino inywe, ezyo nzimwakamvwa kumatalikilo amuzileke zikkalilile mulindinywe. Kuti nzimwakamvwa kuzwa kumatalikilo zyakkalilila mulindinywe, muyokkalilila mu Mwana amuli Taata.
೨೪ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
25 Eechi nchechisyomezyo nchaakapa kuli ndiswe - buumi ibutamani. (aiōnios )
೨೫ಆತನು ನಮಗೆ ಮಾಡಿರುವ ವಾಗ್ದಾನವು ಅದೇನೆಂದರೆ ನಿತ್ಯಜೀವವೇ ಆಗಿದೆ. (aiōnios )
26 Ndalemba izintu eezi kuli ndinywe atala abaabo banga balamusowa.
೨೬ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಿ ತಪ್ಪುದಾರಿಗೆ ಎಳೆಯುವವರ ಕುರಿತಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.
27 Ino inywe, bunanike mbumwakatambula kuzwa kuli nguwe buli kkalilide muli ndinywe, alimwi tamuyanduuli sikumuyiisya pe. Pele kuti kunanika kwakwe kulakuyiisya zyoonse alimwi masimpe teensi nkubeja pe, mbuli mbukwakakuyiisya, kkalilila muli nguwe.
೨೭ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.
28 Alimwi lino, nobana, amukkalilile muli nguwe, kuchitila kuti nayoopamuka tukabe abusichaamba peepe kuyofwa insoni kunembo lyakwe akusika kwakwe.
೨೮ಪ್ರಿಯ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.
29 Na kamwizi kuti uliluleme, mulizi kuti woonse uuchita bubotu wakazyalwa anguwe.
೨೯ಆತನು ನೀತಿವಂತನಾಗಿದ್ದಾನೆಂಬುದು ನಿಮಗೆ ತಿಳಿದಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನೆಂದು ನೀವು ಬಲ್ಲವರಾಗಿರುತ್ತೀರಿ.