< 2 Petrus 3 >

1 Geliefden, dit is reeds de tweede brief, die ik u schrijf. In beide trachtte ik, door het opfrissen van het geheugen, uw goede gezindheid levendig te houden,
ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ.
2 opdat gij de voorspelling der heilige profeten indachtig zoudt blijven, alsook het gebod van den Heer en Verlosser, door uw apostelen verkondigd.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
3 Vóór alles moet gij er aan denken, dat op het einde der tijden spotters met bijtende spot zullen komen, die naar hun eigen lusten leven, en zeggen:
ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,
4 "Waar blijft nu de belofte van zijn Komst? Want sinds de Vaders zijn ontslapen, blijft alles zoals het geweest is van het begin der schepping af!"
“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ನಮ್ಮ ಪೂರ್ವಿಕರು ನಿದ್ರೆಹೊಂದಿದ ನಂತರದಿಂದ; ಸಮಸ್ತವೂ ಸೃಷ್ಟಿಯ ಆರಂಭದಲ್ಲಿ ಇದ್ದ ಹಾಗೆಯೇ ಇದೆಯಲ್ಲಾ?” ಎಂದು ಪರಿಹಾಸ್ಯಮಾಡುತ್ತಾ ಕೇಳುವರೆಂಬುದಾಗಿ ನೀವು ಮೊದಲು ತಿಳಿದುಕೊಳ್ಳಬೇಕು.
5 Het ontgaat hun immers met opzet, dat door Gods woord de hemelen van oudsher bestonden, en de aarde uit water en door water ontstond;
ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ದೇವರ ವಾಕ್ಯದ ಮೂಲಕ ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
6 en dat de toenmalige wereld door beide wateren werd overstroomd en verging.
ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.
7 Welnu, door hetzelfde woord van God zijn de huidige hemel en aarde zorgvuldig behouden, en bewaard voor het vuur tegen de Dag van het Oordeel en van de ondergang der goddeloze mensen.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
8 Geliefden, dit éne mag u niet ontgaan: Voor den Heer is één dag als duizend jaren, en duizend jaren als één dag.
ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.
9 Niet traag is de Heer met zijn belofte, zoals sommigen dat traagheid noemen; maar lankmoedig is Hij voor u, daar Hij niet wil, dat sommigen verloren gaan, maar dat allen zich zullen bekeren.
ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.
10 Maar komen zal de Dag des Heren als een dief; en dan zullen de hemelen vergaan met donderend geweld, de elementen zullen verbranden en smelten, zo ook de aarde met al wat er op is gemaakt.
೧೦ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
11 En wanneer zó dit alles ineen stort, hoe moet gij dan wel uitmunten in heilige wandel en vroomheid,
೧೧ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.
12 en reikhalzend uitzien naar de komst van de Dag van God! Terwille van hem zullen de hemelen ineen zinken door vuur, de elementen verbranden en smelten,
೧೨ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
13 en verwachten we uit kracht zijner belofte een nieuwe hemel en een nieuwe aarde, waarin de gerechtigheid woont.
೧೩ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.
14 Daarom geliefden, nu gij dit alles verwacht, moet gij uw best doen, om smetteloos en onbevlekt te worden bevonden, in vrede met Hem.
೧೪ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.
15 Weet ook de lankmoedigheid van onzen Heer als een heil te waarderen, zoals onze geliefde broeder Paulus, naar de hem geschonken wijsheid, aan u heeft geschreven,
೧೫ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.
16 en zoals hij dit ook in al de andere brieven leert, wanneer hij over deze dingen spreekt. Er komen daarin sommige duistere plaatsen voor, die onontwikkelde en onstandvastige mensen verdraaien tot hun eigen verderf, zoals ze dat ook met al de andere Schriften doen.
೧೬ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
17 Gij dan, geliefden, nu gij het te voren weet, weest op uw hoede, opdat gij niet door de dwaling der goddelozen wordt meegesleept en uw eigen vastheid verliest.
೧೭ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
18 Neemt liever toe in genade en kennis van Jesus Christus onzen Heer en Verlosser. Hem zij de glorie nu en tot de Dag der Eeuwigheid. (aiōn g165)
೧೮ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್. (aiōn g165)

< 2 Petrus 3 >

The Great Flood
The Great Flood