< Hebreeën 2 >

1 Daarom moeten we ons des te steviger vastklampen aan wat we gehoord hebben; anders toch drijven we weg.
ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.
2 Want zo het woord van kracht bleef, dat door de engelen werd verkondigd, en iedere overtreding en ongehoorzaamheid gerechte straf ontving:
ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.
3 hoe zullen wij dan ontkomen, wanneer we een zaligheid verwaarlozen, welke het eerst door den Heer is gepreekt, welke onder ons werd bevestigd door hen die Hem hoorden,
ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.
4 en welke ook door God is betuigd door tekenen, wonderen en velerlei kracht, door gaven ook van den heiligen Geest, zoals het Hem heeft behaagd?
ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.
5 Immers niet aan engelen onderwierp Hij de toekomstige wereld, waarover we spreken.
ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.
6 Want er is ergens getuigd: Wat is een mens, dat Gij hem zoudt gedenken, Of een mensenkind, dat Gij acht op hem slaat?
ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?
7 Een korte tijd hebt Gij hem beneden de engelen gesteld, Hem met glorie en luister gekroond.
ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.
8 Alles hebt Gij onderworpen aan zijn voeten. Door hem nu alles te onderwerpen, heeft Hij niets uitgezonderd, dat hem niet onderworpen is. Zeker, nu zien we nog niet, dat alles hem onderworpen is.
ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.
9 Maar wel zien we Jesus met glorie en luister gekroond, omdat Hij de dood heeft ondergaan; Hij, die een korte tijd beneden de engelen was gesteld, om door Gods genade de dood te smaken voor allen.
ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.
10 Het lag toch voor de hand, dat Hij, om wien en door wien alles bestaat, en die vele zonen tot glorie brengt, ook hun Leidsman ter zaligheid door lijden tot glorie zou brengen.
ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.
11 Want Hij die heiligt, en zij die geheiligd worden, zijn allen uit Eén. Daarom schaamt Hij Zich niet, hen broeders te noemen,
ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,
12 als Hij zegt: "Ik zal uw Naam aan mijn broeders verkondigen, In de kring der gemeente U prijzen."
ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”
13 En wederom: "Ik zal op Hem mijn betrouwen stellen." En vervolgens: "Zie Ik en de kinderen, Die God Mij gaf."
ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.
14 Welnu, omdat de kinderen deel hebben aan vlees en bloed, daarom was ook Hij daaraan deelachtig, om door de Dood hem machteloos te maken, die macht had over de dood, en dat is de duivel;
ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ
15 en om allen te verlossen, die uit vrees voor de dood heel hun leven in slavernij zouden verkeren.
ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.
16 Niet engelen toch trok Hij Zich aan, maar Abrahams zaad trok Hij Zich aan.
ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು.
17 En daarom moest Hij in alles gelijk worden aan zijn broeders, opdat Hij in hun betrekkingen tot God een barmhartig en getrouw Hogepriester zou zijn tot uitboeting der zonde van het volk.
ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.
18 Want juist omdat Hijzelf werd bekoord en zelf heeft geleden, kan Hij ook hen helpen, die worden bekoord.
ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.

< Hebreeën 2 >