< Romeinen 7 >
1 Of weet gij niet broeders, -ik spreek immers tot mensen, die wetgeving verstaan, dat de wet gezag heeft over den mens, zolang deze leeft?
೧ಸಹೋದರರೇ, ಧರ್ಮಶಾಸ್ತ್ರವನ್ನು ತಿಳಿದವರೊಂದಿಗೆ ನಾನು ಮಾತನಾಡುತ್ತಿದ್ದೇನೆ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಅವನ ಮೇಲೆ ಧರ್ಮಶಾಸ್ತ್ರವು ನಿಯಂತ್ರಣ ಸಾಧಿಸುತ್ತದೆಂಬುದು ನಿಮಗೆ ಗೊತ್ತಿಲ್ಲವೇ?
2 De gehuwde vrouw is door de wet aan haar man gebonden, zolang hij leeft; maar is de man gestorven, dan is ze vrij van de huwelijkswet.
೨ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.
3 Wanneer ze dus bij het leven van haar man zich geeft aan een anderen man, dan wordt ze echtbreekster genoemd; maar is haar man gestorven, dan is ze vrij van de wet, en is ze geen echtbreekster, als ze zich met een anderen man verbindt.
೩ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಸೇರಿದರೆ ವ್ಯಭಿಚಾರಿಣಿ ಎನಿಸಿಕೊಳ್ಳುವಳು. ಆದರೆ ಗಂಡನು ಸತ್ತ ಮೇಲೆ ಆಕೆ ಆ ನಿಯಮದಿಂದ ಬಿಡುಗಡೆಯಾದ್ದರಿಂದ, ಆಕೆ ಮತ್ತೊಬ್ಬ ಗಂಡನನ್ನು ಮದುವೆ ಮಾಡಿಕೊಂಡರೂ ವ್ಯಭಿಚಾರಿಣಿ ಎಂದೆನಿಸಿಕೊಳ್ಳುವುದಿಲ್ಲ.
4 Zó, mijn broeders, zijt ook gij dood voor de Wet door het Lichaam van Christus, opdat gij aan een ander zoudt toebehoren: aan Hem, die uit de doden is opgewekt; en opdat we vrucht zouden dragen voor God.
೪ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.
5 Toen we in het vlees waren, werkten in onze ledematen de zondige driften, geprikkeld door de Wet, om vruchten te dragen voor de dood;
೫ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.
6 maar thans zijn we vrij van de Wet, dood voor haar, die ons aan banden legde. Dus moeten we dienen in een nieuwe geest, en niet naar een verouderde letter!
೬ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.
7 Wat besluiten we hieruit? Is de Wet zonde? Zeer zeker niet! Maar toch, ik kende de zonde niet, tenzij door de Wet. Immers ik zou de begeerlijkheid niet hebben gekend, als de Wet niet had gezegd: "Ge zult niet begeren."
೭ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
8 De zonde maakte gebruik van het gebod, en wekte in mij allerlei begeerlijkheid op; want zonder de wet is de zonde dood.
೮ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ.
9 Voorheen toch, zonder de Wet, was ik het die leefde; maar toen het gebod was gekomen, leefde de zonde,
೯ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.
10 ik echter stierf; en het gebod ten leven bleek voor mij een gebod tot de dood.
೧೦ಜೀವಿಸುವುದಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣಕ್ಕೆ ಕಾರಣವಾಯಿತೆಂದು ನನಗೆ ಕಂಡು ಬಂದಿತು.
11 De zonde maakte gebruik van het gebod; zij heeft mij verleid, en mij gedood door het gebod.
೧೧ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು.
12 De Wet zelf is dus heilig, en het gebod is heilig, rechtvaardig en goed.
೧೨ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
13 Is dan wat goed is, voor mij ten dode geworden? Zeer zeker niet! Maar het is de zonde, die mij de dood heeft berokkend door iets wat goed is; opdat de zonde zou blijken, zonde te zijn, en opdat ze juist door het gebod nog veel meer zondig zou worden.
೧೩ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.
14 We weten, dat de Wet geestelijk is; maar ikzelf ben vleselijk, verkocht aan de zonde.
೧೪ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
15 Immers, ik begrijp er niets van, wat ik doe: want ik doe niet wat ik wil, maar ik doe juist wat ik verfoei.
೧೫ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.
16 Welnu, wanneer ik doe wat ik niet wil, dan erken ik, dat de Wet goed is;
೧೬ಆದರೆ ನಾನು ಮಾಡುವಂಥದಕ್ಕೆ ನನ್ನ ಮನಸ್ಸು ಒಪ್ಪದಿದ್ದರೆ ಧರ್ಮಶಾಸ್ತ್ರವು ಉತ್ತಮವಾದದ್ದೆಂದು ಒಪ್ಪಿಕೊಂಡ ಹಾಗಾಯಿತು.
17 maar dan doe ikzelf het niet meer, maar de zonde, die in mij woont.
೧೭ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.
18 Ik weet, dat er niets goeds in mij woont; ik bedoel: in mijn vlees. Zeker, het willen is in mij wel aanwezig, maar niet het dòen van het goede;
೧೮ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದಿದೆ ಒಳ್ಳೆಯದನ್ನು ಮಾಡುವುದಕ್ಕೆ ನನಗೇನೋ ಮನಸ್ಸುಂಟು ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
19 want niet doe ik het goede, dat ik wil, maar wèl doe ik het kwade, dat ik niet wil.
೧೯ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.
20 Welnu, wanneer ik wèl doe, wat ik niet wil, dan doe ikzelf het niet meer, maar de zonde die in mij woont.
೨೦ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.
21 Ik ontdek in mij dus deze wet: terwijl ik het goede wil doen, ligt me het kwade voor de hand.
೨೧ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.
22 Naar den inwendigen mens schep ik behagen in Gods Wet,
೨೨ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ.
23 maar in mijn ledematen bespeur ik een andere wet, die strijd voert met de wet van mijn rede en die mij gevangen houdt in de wet van de zonde, welke in mijn ledematen heerst.
೨೩ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.
24 O, rampzalige mens, die ik ben! Wie zal mij verlossen van dit lichaam des doods?
೨೪ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?
25 God zij dank; het geschiedt door Jesus Christus, onzen Heer! Maar toch blijft het staan: uit mijzelf dien ik de Wet van God met de rede, maar de wet der zonde met het vlees.
೨೫ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.