< 1 Corinthiërs 8 >
1 Aangaande nu de dingen, die den afgoden geofferd zijn, wij weten, dat wij allen te zamen kennis hebben. De kennis maakt opgeblazen, maar de liefde sticht.
೧ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
2 En zo iemand meent iets te weten, die heeft nog niets gekend, gelijk men behoort te kennen.
೨ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
3 Maar zo iemand God liefheeft, die is van Hem gekend.
೩ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
4 Aangaande dan het eten der dingen, die den afgoden geofferd zijn, wij weten, dat een afgod niets is in de wereld, en dat er geen ander God is dan een.
೪ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
5 Want hoewel er ook zijn, die goden genaamd worden, hetzij in den hemel, hetzij op de aarde (gelijk er vele goden en vele heren zijn),
೫ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
6 Nochtans hebben wij maar een God, den Vader, uit Welken alle dingen zijn, en wij tot Hem; en maar een Heere, Jezus Christus, door Welken alle dingen zijn, en wij door Hem.
೬“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
7 Doch in allen is de kennis niet; maar sommigen, met een geweten des afgods tot nog toe, eten als iets dat den afgoden geofferd is; en hun geweten, zwak zijnde, wordt bevlekt.
೭ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
8 De spijze nu maakt ons Gode niet aangenaam; want hetzij dat wij eten, wij hebben geen overvloed; en hetzij dat wij niet eten, wij hebben geen gebrek.
೮ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
9 Maar ziet toe, dat deze uw macht niet enigerwijze een aanstoot worde dengenen, die zwak zijn.
೯ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
10 Want zo iemand u, die de kennis hebt, ziet in der afgoden tempel aanzitten, zal het geweten deszelven, die zwak is, niet gestijfd worden, om te eten de dingen, die den afgoden geofferd zijn?
೧೦ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
11 En zal de broeder, die zwak is, door uw kennis verloren gaan, om welken Christus gestorven is?
೧೧ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
12 Doch gijlieden, alzo tegen de broeders zondigende, en hun zwak geweten kwetsende, zondigt tegen Christus.
೧೨ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
13 Daarom, indien de spijs mijn broeder ergert, zo zal ik in eeuwigheid geen vlees eten, opdat ik mijn broeder niet ergere. (aiōn )
೧೩ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. (aiōn )