< Johannes 2 >

1 En op den derden dag was er een bruiloft te Kana in Galilea; en de moeder van Jezus was aldaar.
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.
2 En Jezus was ook genood, en Zijn discipelen, tot de bruiloft.
ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.
3 En als er wijn ontbrak, zeide de moeder van Jezus tot Hem: Zij hebben geen wijn.
ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.
4 Jezus zeide tot haar: Vrouw, wat heb Ik met u te doen? Mijn ure is nog niet gekomen.
ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.
5 Zijn moeder zeide tot de dienaars: Zo wat Hij ulieden zal zeggen, doet dat.
ಆತನ ತಾಯಿಯು ಸೇವಕರಿಗೆ “ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದಳು.
6 En aldaar waren zes stenen watervaten gesteld, naar de reiniging der Joden, elk houdende twee of drie metreten.
ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 Jezus zeide tot hen: Vult de watervaten met water. En zij vulden ze tot boven toe.
ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
8 En Hij zeide tot hen: Schept nu, en draagt het tot den hofmeester; en zij droegen het.
ಅನಂತರ ಆತನು ಸೇವಕರಿಗೆ, “ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು.
9 Als nu de hofmeester het water, dat wijn geworden was, geproefd had (en hij wist niet, van waar de wijn was; maar de dienaren, die het water geschept hadden, wisten het), zo riep de hofmeester den bruidegom.
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
10 En zeide tot hem: Alle man zet eerst den goeden wijn op, en wanneer men wel gedronken heeft, alsdan den minderen; maar gij hebt den goeden wijn tot nu toe bewaard.
೧೦“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.
11 Dit beginsel der tekenen heeft Jezus gedaan te Kana in Galilea, en heeft Zijn heerlijkheid geopenbaard; en Zijn discipelen geloofden in Hem.
೧೧ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12 Daarna ging Hij af naar Kapernaum, Hij, en Zijn moeder, en Zijn broeders, en Zijn discipelen; en zij bleven aldaar niet vele dagen.
೧೨ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13 En het pascha der Joden was nabij, en Jezus ging op naar Jeruzalem.
೧೩ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
14 En Hij vond in den tempel, die ossen, en schapen, en duiven verkochten, en de wisselaars daar zittende.
೧೪ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.
15 En een gesel van touwtjes gemaakt hebbende, dreef Hij ze allen uit den tempel, ook de schapen en de ossen; en het geld der wisselaren stortte Hij uit, en keerde de tafelen om.
೧೫ಆತನು ಹಗ್ಗದಿಂದ ಚಾವಟಿ ಮಾಡಿ ಕುರಿ, ದನ ಸಹಿತ ಎಲ್ಲವನ್ನೂ, ದೇವಾಲಯದ ಹೊರಕ್ಕೆ ಅಟ್ಟಿ, ನಾಣ್ಯವಿನಿಮಯ ಮಾಡುವವರ ಮೇಜುಗಳನ್ನು ಉರುಳಿಸಿ, ನಾಣ್ಯಗಳನೆಲ್ಲ ಚೆಲ್ಲಿದನು.
16 En Hij zeide tot degenen, die de duiven verkochten: Neemt deze dingen van hier weg; maakt niet het huis Mijns Vaders tot een huis van koophandel.
೧೬ಪಾರಿವಾಳ ಮಾರುವವರಿಗೆ ಸಿಟ್ಟಿನಿಂದ “ಇವುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಿರಿ. ನನ್ನ ತಂದೆಯ ಮನೆಯನ್ನು ವ್ಯಾಪಾರದ ಸ್ಥಳವನ್ನಾಗಿ ಮಾಡುವುದನ್ನು ನಿಲ್ಲಿಸಿರಿ” ಎಂದು ಗದರಿಸಿದನು.
17 En Zijn discipelen werden indachtig, dat er geschreven is: De ijver van Uw huis heeft mij verslonden.
೧೭ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.
18 De Joden antwoordden dan, en zeiden tot Hem: Wat teken toont Gij ons, dat Gij deze dingen doet?
೧೮ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.
19 Jezus antwoordde en zeide tot hen: Breekt dezen tempel, en in drie dagen zal Ik denzelven oprichten.
೧೯ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.
20 De Joden zeiden dan: Zes en veertig jaren is over dezen tempel gebouwd, en Gij, zult Gij dien in drie dagen oprichten?
೨೦ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 Maar Hij zeide dit van den tempel Zijns lichaams.
೨೧ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 Daarom, als Hij opgestaan was van de doden, werden Zijn discipelen gedachtig, dat Hij dit tot hen gezegd had, en zij geloofden de Schrift, en het woord, dat Jezus gesproken had.
೨೨ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 En als Hij te Jeruzalem was, op het pascha, in het feest, geloofden velen in Zijn Naam, ziende Zijn tekenen, die Hij deed.
೨೩ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 Maar Jezus Zelf betrouwde hun Zichzelven niet, omdat Hij hen allen kende,
೨೪ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
25 En omdat Hij niet van node had, dat iemand getuigen zou van den mens; want Hij Zelf wist, wat in den mens was.
೨೫ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.

< Johannes 2 >