< Psalms 63 >
1 O God, thou are my God. I will earnestly seek thee. My soul thirsts for thee, my flesh longs for thee, in a dry and weary land, where is no water.
೧ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ. ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
2 So I have looked upon thee in the sanctuary to see thy power and thy glory.
೨ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.
3 Because thy loving kindness is better than life, my lips shall praise thee.
೩ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
4 So I will bless thee while I live. I will lift up my hands in thy name.
೪ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.
5 My soul shall be satisfied as with marrow and fatness. And my mouth shall praise thee with joyful lips
೫ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
6 when I remember thee upon my bed, and meditate on thee in the night-watches.
೬ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.
7 For thou have been my help, and in the shadow of thy wings I will rejoice.
೭ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.
8 My soul follows close after thee. Thy right hand upholds me.
೮ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.
9 But those who seek my soul, to destroy it, shall go into the lower parts of the earth.
೯ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.
10 They shall be given over to the power of the sword. They shall be a portion for foxes.
೧೦ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.
11 But the king shall rejoice in God. Everyone who swears by him shall glory, for the mouth of those who speak lies shall be stopped.
೧೧ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.