< 1 Corinthians 8 >

1 Now about food sacrificed to idols: We know that we all have knowledge. Knowledge puffs up, but love builds up.
ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.
2 The one who thinks he knows something does not yet know as he ought to know.
ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.
3 But the one who loves God is known by God.
ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ದೇವರು ಅವನನ್ನು ತಿಳಿದುಕೊಂಡಿದ್ದಾನೆ.
4 So about eating food sacrificed to idols: We know that an idol is nothing at all in the world, and that there is no God but one.
ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.
5 For even if there are so-called gods, whether in heaven or on earth (as there are many so-called gods and lords),
ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,
6 yet for us there is but one God, the Father, from whom all things came and for whom we exist. And there is but one Lord, Jesus Christ, through whom all things came and through whom we exist.
“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”
7 But not everyone has this knowledge. Some people are still so accustomed to idols that they eat such food as if it were sacrificed to an idol. And since their conscience is weak, it is defiled.
ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.
8 But food does not bring us closer to God: We are no worse if we do not eat, and no better if we do.
ಆದರೆ ನಾವು ತಿನ್ನುವ ಆಹಾರವು ದೇವರನ್ನು ಮೆಚ್ಚಿಸುವುದಿಲ್ಲ. ತಿನ್ನದಿರುವುದರಿಂದ ನಷ್ಟವೂ ಇಲ್ಲ, ತಿನ್ನುವುದರಿಂದ ಲಾಭವೂ ಇಲ್ಲ.
9 Be careful, however, that your freedom does not become a stumbling block to the weak.
ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.
10 For if someone with a weak conscience sees you who are well informed eating in an idol’s temple, will he not be encouraged to eat food sacrificed to idols?
೧೦ಜ್ಞಾನಿಯಾದ ನೀನೇ ವಿಗ್ರಹಾಲಯದಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲವಾದ ಮನಸ್ಸಾಕ್ಷಿಯುಳ್ಳ ಸಹೋದರನು ಕಂಡರೆ ಅವನೂ ಕೂಡ ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದಕ್ಕೆ ಧೈರ್ಯಗೊಂಡನಲ್ಲವೇ.
11 So this weak brother, for whom Christ died, is destroyed by your knowledge.
೧೧ಹೀಗೆ ಈ ನಿನ್ನ ಜ್ಞಾನದಿಂದ ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.
12 By sinning against your brothers in this way and wounding their weak conscience, you sin against Christ.
೧೨ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ.
13 Therefore, if what I eat causes my brother to stumble, I will never eat meat again, so that I will not cause him to stumble. (aiōn g165)
೧೩ಆದ್ದರಿಂದ ಆಹಾರಪದಾರ್ಥವು ನನ್ನ ಸಹೋದರನಿಗೆ ಅಡ್ಡಿಯಾಗುವುದಾದರೆ ನಾನು ಎಂದಿಗೂ ಮಾಂಸವನ್ನು ತಿನ್ನುವುದಿಲ್ಲ; ನಾನು ನನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವುದಿಲ್ಲಾ. (aiōn g165)

< 1 Corinthians 8 >