< 2 Chronicles 12 >
1 After Rehoboam had established his sovereignty and royal power, he and all Israel with him forsook the Law of the LORD.
೧ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.
2 In the fifth year of Rehoboam’s reign, because they had been unfaithful to the LORD, Shishak king of Egypt came up and attacked Jerusalem
೨ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.
3 with 1,200 chariots, 60,000 horsemen, and countless troops who came with him out of Egypt—Libyans, Sukkites, and Cushites.
೩ಸಾವಿರದ ಇನ್ನೂರು ರಥಗಳನ್ನೂ, ಅರುವತ್ತು ಸಾವಿರ ಮಂದಿ ರಾಹುತರನ್ನೂ, ಐಗುಪ್ತದಿಂದ ಅಸಂಖ್ಯರಾದ ಲೂಬ್ಯ, ಸುಕ್ಕೀಯ, ಕೂಷ್ಯ ಸೈನಿಕರನ್ನೂ ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟು,
4 He captured the fortified cities of Judah and came as far as Jerusalem.
೪ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು.
5 Then Shemaiah the prophet came to Rehoboam and the leaders of Judah who had gathered at Jerusalem because of Shishak, and he said to them, “This is what the LORD says: ‘You have forsaken Me; therefore, I have forsaken you into the hand of Shishak.’”
೫ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.
6 So the leaders of Israel and the king humbled themselves and said, “The LORD is righteous.”
೬ಆಗ ಅರಸನೂ ಮತ್ತು ಇಸ್ರಾಯೇಲರ ನಾಯಕರೂ ಯೆಹೋವನು ನೀತಿವಂತನೆಂದು ಒಪ್ಪಿ ತಮ್ಮನ್ನು ತಾವೇ ತಗ್ಗಿಸಿಕೊಂಡರು.
7 When the LORD saw that they had humbled themselves, the word of the LORD came to Shemaiah, saying, “They have humbled themselves; I will not destroy them, but will soon grant them deliverance. My wrath will not be poured out on Jerusalem through Shishak.
೭ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.
8 Nevertheless, they will become his servants, so that they may learn the difference between serving Me and serving the kings of other lands.”
೮ಆದರೂ ಅವರು ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸವು ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು” ಎಂದು ಹೇಳಿದನು.
9 So King Shishak of Egypt attacked Jerusalem and seized the treasures of the house of the LORD and of the royal palace. He took everything, including the gold shields that Solomon had made.
೯ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
10 Then King Rehoboam made bronze shields in their place and committed them to the care of the captains of the guard on duty at the entrance to the royal palace.
೧೦ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳಪತಿಗೆ ಒಪ್ಪಿಸಿದನು.
11 And whenever the king entered the house of the LORD, the guards would go with him, bearing the shields, and later they would return them to the guardroom.
೧೧ಅರಸನು ಯೆಹೋವನ ಅಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ಹಿಂತಿರುಗಿ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಗಳಲ್ಲಿಡುವರು.
12 Because Rehoboam humbled himself, the anger of the LORD turned away from him, and He did not destroy him completely. Indeed, conditions were good in Judah.
೧೨ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.
13 Thus King Rehoboam established himself in Jerusalem. He was forty-one years old when he became king, and he reigned seventeen years in Jerusalem, the city the LORD had chosen from all the tribes of Israel in which to put His Name. His mother’s name was Naamah the Ammonite.
೧೩ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಆಳುವವನಾದನು. ಅವನು ತನ್ನ ನಲ್ವತ್ತೊಂದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
14 And Rehoboam did evil because he did not set his heart to seek the LORD.
೧೪ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.
15 Now the acts of Rehoboam, from first to last, are they not written in the records of Shemaiah the Prophet and of Iddo the Seer concerning the genealogies? There was war between Rehoboam and Jeroboam throughout their days.
೧೫ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
16 And Rehoboam rested with his fathers and was buried in the City of David. And his son Abijah reigned in his place.
೧೬ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.