< Acts 8 >

1 And Saul was there, giving approval to Stephen’s death. On that day a great persecution broke out against the church in Jerusalem, and all except the apostles were scattered throughout Judea and Samaria.
ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
2 God-fearing men buried Stephen and mourned deeply over him.
ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3 But Saul began to destroy the church. Going from house to house, he dragged off men and women and put them in prison.
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
4 Those who had been scattered preached the word wherever they went.
ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
5 Philip went down to a city in Samaria and proclaimed the Christ to them.
ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
6 The crowds gave their undivided attention to Philip’s message and to the signs they saw him perform.
ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
7 With loud shrieks, unclean spirits came out of many who were possessed, and many of the paralyzed and lame were healed.
ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
8 So there was great joy in that city.
ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
9 Prior to that time, a man named Simon had practiced sorcery in the city and astounded the people of Samaria. He claimed to be someone great,
ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
10 and all the people, from the least to the greatest, heeded his words and said, “This man is the divine power called the Great Power.”
೧೦ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
11 They paid close attention to him because he had astounded them for a long time with his sorcery.
೧೧ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
12 But when they believed Philip as he preached the gospel of the kingdom of God and the name of Jesus Christ, they were baptized, both men and women.
೧೨ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
13 Even Simon himself believed and was baptized. He followed Philip closely and was astounded by the great signs and miracles he observed.
೧೩ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
14 When the apostles in Jerusalem heard that Samaria had received the word of God, they sent Peter and John to them.
೧೪ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
15 On their arrival, they prayed for them to receive the Holy Spirit.
೧೫ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
16 For the Holy Spirit had not yet fallen upon any of them; they had simply been baptized into the name of the Lord Jesus.
೧೬ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
17 Then Peter and John laid their hands on them, and they received the Holy Spirit.
೧೭ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
18 When Simon saw that the Spirit was given through the laying on of the apostles’ hands, he offered them money.
೧೮ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
19 “Give me this power as well,” he said, “so that everyone on whom I lay my hands may receive the Holy Spirit.”
೧೯“ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
20 But Peter replied, “May your silver perish with you, because you thought you could buy the gift of God with money!
೨೦ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
21 You have no part or share in our ministry, because your heart is not right before God.
೨೧ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
22 Repent, therefore, of your wickedness, and pray to the Lord. Perhaps He will forgive you for the intent of your heart.
೨೨ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
23 For I see that you are poisoned by bitterness and captive to iniquity.”
೨೩ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
24 Then Simon answered, “Pray to the Lord for me, so that nothing you have said may happen to me.”
೨೪ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
25 And after Peter and John had testified and spoken the word of the Lord, they returned to Jerusalem, preaching the gospel in many of the Samaritan villages.
೨೫ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
26 Now an angel of the Lord said to Philip, “Get up and go south to the desert road that goes down from Jerusalem to Gaza.”
೨೬ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
27 So he started out, and on his way he met an Ethiopian eunuch, a court official in charge of the entire treasury of Candace, queen of the Ethiopians. He had gone to Jerusalem to worship,
೨೭ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
28 and on his return was sitting in his chariot reading Isaiah the prophet.
೨೮ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
29 The Spirit said to Philip, “Go over to that chariot and stay by it.”
೨೯ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
30 So Philip ran up and heard the man reading Isaiah the prophet. “Do you understand what you are reading?” Philip asked.
೩೦ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
31 “How can I,” he said, “unless someone guides me?” And he invited Philip to come up and sit with him.
೩೧ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
32 The eunuch was reading this passage of Scripture: “He was led like a sheep to the slaughter, and as a lamb before the shearer is silent, so He did not open His mouth.
೩೨ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
33 In His humiliation He was deprived of justice. Who can recount His descendants? For His life was removed from the earth.”
೩೩ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
34 “Tell me,” said the eunuch, “who is the prophet talking about, himself or someone else?”
೩೪ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
35 Then Philip began with this very Scripture and told him the good news about Jesus.
೩೫ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
36 As they traveled along the road and came to some water, the eunuch said, “Look, here is water! What is there to prevent me from being baptized?”
೩೬ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
೩೭ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
38 And he gave orders to stop the chariot. Then both Philip and the eunuch went down into the water, and Philip baptized him.
೩೮ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
39 When they came up out of the water, the Spirit of the Lord carried Philip away, and the eunuch saw him no more, but went on his way rejoicing.
೩೯ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
40 But Philip appeared at Azotus and traveled through that region, preaching the gospel in all the towns until he came to Caesarea.
೪೦ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

< Acts 8 >