< Isaiah 26 >
1 In that day this song will be sung in the land of Judah: We have a strong city; salvation is established as its walls and ramparts.
೧ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.
2 Open the gates so a righteous nation may enter— one that remains faithful.
೨ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!
3 You will keep in perfect peace the steadfast of mind, because he trusts in You.
೩ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
4 Trust in the LORD forever, because GOD the LORD is the Rock eternal.
೪ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
5 For He has humbled those who dwell on high; He lays the lofty city low. He brings it down to the ground; He casts it into the dust.
೫ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.
6 Feet trample it down— the feet of the oppressed, the steps of the poor.
೬ಅದು ಕಾಲು ತುಳಿತಕ್ಕೆ ಈಡಾಗಿದೆ. ದಿಕ್ಕಿಲ್ಲದ ಬಡವರೂ ಅದನ್ನು ಕಾಲಿನಿಂದ ತುಳಿದು ಬಿಡುತ್ತಾರೆ.
7 The path of the righteous is level; You clear a straight path for the upright.
೭ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.
8 Yes, we wait for You, O LORD; we walk in the path of Your judgments. Your name and renown are the desire of our souls.
೮ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
9 My soul longs for You in the night; indeed, my spirit seeks You at dawn. For when Your judgments come upon the earth, the people of the world learn righteousness.
೯ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ. ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.
10 Though grace is shown to the wicked man, he does not learn righteousness. In the land of righteousness he acts unjustly and fails to see the majesty of the LORD.
೧೦ದುಷ್ಟರನ್ನು ಕರುಣಿಸಿದರೂ, ಅವರು ಧರ್ಮಜ್ಞಾನವನ್ನು ಪಡೆಯರು; ಯೆಹೋವನ ಮಹಿಮೆಯನ್ನು ಲಕ್ಷಿಸದೆ ಯಥಾರ್ಥರ ದೇಶದಲ್ಲಿಯೂ ಅನ್ಯಾಯವನ್ನು ಆಚರಿಸುವರು.
11 O LORD, Your hand is upraised, but they do not see it. They will see Your zeal for Your people and be put to shame. The fire set for Your enemies will consume them!
೧೧ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
12 O LORD, You will establish peace for us. For all that we have accomplished, You have done for us.
೧೨ಯೆಹೋವನೇ, ನೀನು ನಮಗೆ ಸಮಾಧಾನವನ್ನು ವಿಧಿಸುವಿ, ಏಕೆಂದರೆ ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದಿ.
13 O LORD our God, other lords besides You have had dominion, but Your name alone do we confess.
೧೩ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.
14 The dead will not live; the departed spirits will not rise. Therefore You have punished and destroyed them; You have wiped out all memory of them.
೧೪ನೀನು ಆ ಒಡೆಯರ ಮೇಲೆ ಕೈಮಾಡಿ, ಅವರನ್ನು ನಿರ್ಮೂಲಮಾಡಿ ಅವರ ಜ್ಞಾಪಕವನ್ನು ಅಳಿಸಿಬಿಟ್ಟಿದ್ದಿ. ಸತ್ತವರು ಪುನಃ ಬದುಕುವುದಿಲ್ಲ, ಪ್ರೇತಗಳು ಎದ್ದು ಬರುವುದಿಲ್ಲ.
15 You have enlarged the nation, O LORD; You have enlarged the nation. You have gained glory for Yourself; You have extended all the borders of the land.
೧೫ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.
16 O LORD, they sought You in their distress; when You disciplined them, they poured out a quiet prayer.
೧೬ಯೆಹೋವನೇ, ನಿನ್ನ ಜನರು ಇಕ್ಕಟ್ಟಿಗೆ ಸಿಕ್ಕಿ ನಿನ್ನನ್ನು ಹುಡುಕಿದರು. ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿದರು.
17 As a woman with child about to give birth writhes and cries out in pain, so were we in Your presence, O LORD.
೧೭ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ, ಬೇನೆಯಿಂದ ಕೂಗಿ ಅಳುವಂತೆ ಯೆಹೋವನೇ, ನಾವು ನಿನ್ನ ಮುಂದೆ ಸಹಾಯಕ್ಕಾಗಿ ಕೂಗಿ ದುಃಖಿಸಿದ್ದೇವೆ.
18 We were with child; we writhed in pain; but we gave birth to wind. We have given no salvation to the earth, nor brought any life into the world.
೧೮ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.
19 Your dead will live; their bodies will rise. Awake and sing, you who dwell in the dust! For your dew is like the dew of the morning, and the earth will bring forth her dead.
೧೯ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
20 Go, my people, enter your rooms and shut your doors behind you. Hide yourselves a little while until the wrath has passed.
೨೦ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
21 For behold, the LORD is coming out of His dwelling to punish the inhabitants of the earth for their iniquity. The earth will reveal her bloodshed and will no longer conceal her slain.
೨೧ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”