< Matthew 10 >

1 And calling His twelve disciples to Him, Jesus gave them authority over unclean spirits, so that they could drive them out and heal every disease and sickness.
ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
2 These are the names of the twelve apostles: first Simon, called Peter, and his brother Andrew; James son of Zebedee, and his brother John;
ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
3 Philip and Bartholomew; Thomas and Matthew the tax collector; James son of Alphaeus, and Thaddaeus;
ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,
4 Simon the Zealot, and Judas Iscariot, who betrayed Jesus.
ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.
5 These twelve Jesus sent out with the following instructions: “Do not go onto the road of the Gentiles or enter any town of the Samaritans.
ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
6 Go rather to the lost sheep of Israel.
ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
7 As you go, preach this message: ‘The kingdom of heaven is near.’
‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
8 Heal the sick, raise the dead, cleanse the lepers, drive out demons. Freely you have received; freely give.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
9 Do not carry any gold or silver or copper in your belts.
ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
10 Take no bag for the road, or second tunic, or sandals, or staff; for the worker is worthy of his provisions.
೧೦ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
11 Whatever town or village you enter, find out who is worthy there and stay at his house until you move on.
೧೧ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
12 As you enter the home, greet its occupants.
೧೨ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.
13 If the home is worthy, let your peace rest on it; but if it is not, let your peace return to you.
೧೩ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
14 And if anyone will not welcome you or heed your words, shake the dust off your feet when you leave that home or town.
೧೪ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
15 Truly I tell you, it will be more bearable for Sodom and Gomorrah on the day of judgment than for that town.
೧೫ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
16 Behold, I am sending you out like sheep among wolves; therefore be as shrewd as snakes and as innocent as doves.
೧೬“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
17 But beware of men; for they will hand you over to their councils and flog you in their synagogues.
೧೭ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
18 On My account, you will be brought before governors and kings as witnesses to them and to the Gentiles.
೧೮ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
19 But when they hand you over, do not worry about how to respond or what to say. In that hour you will be given what to say.
೧೯ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
20 For it will not be you speaking, but the Spirit of your Father speaking through you.
೨೦ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
21 Brother will betray brother to death, and a father his child; children will rise against their parents and have them put to death.
೨೧ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
22 You will be hated by everyone because of My name, but the one who perseveres to the end will be saved.
೨೨ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
23 When they persecute you in one town, flee to the next. Truly I tell you, you will not reach all the towns of Israel before the Son of Man comes.
೨೩ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
24 A disciple is not above his teacher, nor a servant above his master.
೨೪“ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.
25 It is enough for a disciple to be like his teacher, and a servant like his master. If the head of the house has been called Beelzebul, how much more the members of his household!
೨೫ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
26 So do not be afraid of them. For there is nothing concealed that will not be disclosed, and nothing hidden that will not be made known.
೨೬ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
27 What I tell you in the dark, speak in the daylight; what is whispered in your ear, proclaim from the housetops.
೨೭ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
28 Do not be afraid of those who kill the body but cannot kill the soul. Instead, fear the One who can destroy both soul and body in hell. (Geenna g1067)
೨೮ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna g1067)
29 Are not two sparrows sold for a penny? Yet not one of them will fall to the ground apart from the will of your Father.
೨೯ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
30 And even the very hairs of your head are all numbered.
೩೦ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
31 So do not be afraid; you are worth more than many sparrows.
೩೧ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
32 Therefore everyone who confesses Me before men, I will also confess him before My Father in heaven.
೩೨“ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
33 But whoever denies Me before men, I will also deny him before My Father in heaven.
೩೩ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
34 Do not assume that I have come to bring peace to the earth; I have not come to bring peace, but a sword.
೩೪“ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
35 For I have come to turn ‘a man against his father, a daughter against her mother, a daughter-in-law against her mother-in-law.
೩೫ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
36 A man’s enemies will be the members of his own household.’
೩೬ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.
37 Anyone who loves his father or mother more than Me is not worthy of Me; anyone who loves his son or daughter more than Me is not worthy of Me;
೩೭ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
38 and anyone who does not take up his cross and follow Me is not worthy of Me.
೩೮ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
39 Whoever finds his life will lose it, and whoever loses his life for My sake will find it.
೩೯ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
40 He who receives you receives Me, and he who receives Me receives the One who sent Me.
೪೦“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
41 Whoever receives a prophet because he is a prophet will receive a prophet’s reward, and whoever receives a righteous man because he is a righteous man will receive a righteous man’s reward.
೪೧ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
42 And if anyone gives even a cup of cold water to one of these little ones because he is My disciple, truly I tell you, he will never lose his reward.”
೪೨ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

< Matthew 10 >