< 1 Chronicles 26 >
1 For the divisions of the door-keepers: of the Korahites, Meshelemiah, the son of Kore, of the sons of Ebiasaph.
೧ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ.
2 And Meshelemiah had sons: Zechariah the oldest, Jediael the second, Zebadiah the third, Jathniel the fourth,
೨ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು.
3 Elam the fifth, Jehohanan the sixth, Eliehoenai the seventh.
೩ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು.
4 And Obed-edom had sons: Shemaiah the oldest, Jehozabad the second, Joah the third, and Sacar the fourth, and Nethanel the fifth,
೪ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
5 Ammiel the sixth, Issachar the seventh, Peullethai the eighth; for the blessing of God was on him.
೫ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ.
6 And Shemaiah his son had sons, rulers over the family of their father, for they were able men.
೬ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
7 The sons of Shemaiah: Othni and Rephael and Obed, Elzabad, whose brothers were great men of war, Elihu and Semachiah.
೭ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
8 All these were sons of Obed-edom: they and their sons and their brothers, able men and strong for the work; sixty-two sons of Obed-edom.
೮ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.
9 Meshelemiah had sons and brothers, eighteen able men.
೯ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು.
10 And Hosah, a son of the children of Merari, had sons: Shimri the chief (for though he was not the oldest, his father made him chief);
೧೦ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.
11 Hilkiah the second, Tebaliah the third, Zechariah the fourth: Hosah had thirteen sons and brothers.
೧೧ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
12 Of these were the divisions of the door-keepers, men of authority, having responsible positions like their brothers to be servants in the house of the Lord.
೧೨ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
13 And the families were taken by the decision of the Lord for every door; the small family had the same chance as the great.
೧೩ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು.
14 And the care of the door on the east came out for Shelemiah. Then the name of Zechariah his son, a man wise in discussion, came out, and the door on the north was given to him.
೧೪ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
15 To Obed-edom, that on the south; and to his sons, the store-house.
೧೫ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ,
16 To Hosah, the door on the west, by the door of Shallecheth, at the footway which goes up, watch by watch.
೧೬ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.
17 On the east were six Levites a day, and on the north and the south four a day, and for the store-house two and two.
೧೭ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು,
18 For the pillared way, on the west, four at the footway and two at the pillared way itself.
೧೮ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
19 These were the divisions of door-keepers, of the sons of the Korahites and of the sons of Merari.
೧೯ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ.
20 And the Levites their brothers were responsible for the stores of the house of God and the holy things.
೨೦ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು.
21 The sons of Ladan: sons of the Gershonites of the family of Ladan, heads of families of Ladan the Gershonite, Jehieli.
೨೧ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,
22 The sons of Jehieli: Zetham and Joel, his brother, had the care of the stores of the house of the Lord.
೨೨ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು.
23 Of the Amramites, of the Izharites, of the Hebronites, of the Uzzielites:
೨೩ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್,
24 And Shebuel, the son of Gershom, the son of Moses, was controller of the stores.
೨೪ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.
25 And his brothers: of Eliezer, Rehabiah his son, and Jeshaiah his son, and Joram his son, and Zichri his son, and Shelomoth his son.
೨೫ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.
26 Shelomoth and his brothers were responsible for all the store of holy things which David the king and the heads of families, the captains of thousands and of hundreds, and the captains of the army, had given to the Lord.
೨೬ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು.
27 From the goods taken in war, they gave, as a holy offering, materials for the building of the house of the Lord.
೨೭ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು.
28 And everything Samuel the prophet and Saul, the son of Kish, and Abner, the son of Ner, and Joab, the son of Zeruiah, had made holy; whatever anyone had given, it was under the care of Shelomoth and his brothers.
೨೮ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.
29 Of the Izharites, Chenaniah and his sons had to do all the public business of Israel, in relation to judges and men in authority.
೨೯ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.
30 Of the Hebronites, Hashabiah and his brothers, seventeen hundred able men, were overseers of Israel on the other side of the Jordan, to the west, being responsible for all the work of the Lord's house and for the work done by the king's servants.
೩೦ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು.
31 Of the Hebronites, Jerijah was the chief of all the Hebronites, in their generations by families. In the fortieth year of the rule of David a search was made, and able men were seen among them at Jazer of Gilead.
೩೧ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು.
32 And his brothers were two thousand, seven hundred able men, heads of families, whom King David made overseers over the Reubenites and the Gadites and the half-tribe of Manasseh, in everything to do with God, and for the king's business.
೩೨ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.