< 2 Kings 10 >
1 Now there were in Samaria seventy of Ahab's sons. And Jehu sent letters to Samaria, to the rulers of the town, and to the responsible men, and to those who had the care of the sons of Ahab, saying,
೧ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
2 Straight away, when you get this letter, seeing that your master's sons are with you, and that you have carriages and horses and a walled town and arms;
೨ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
3 Take the best and most upright of your master's sons, and make him king in his father's place, and put up a fight for your master's family.
೩ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
4 But they were full of fear, and said, The two kings have gone down before him: how may we keep our place?
೪ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
5 So the controller of the king's house, with the ruler of the town, and the responsible men, and those who had the care of Ahab's sons, sent to Jehu, saying, We are your servants and will do all your orders; we will not make any man king; do whatever seems best to you.
೫ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.
6 Then he sent them a second letter, saying, If you are on my side, and if you will do my orders, come to me at Jezreel by this time tomorrow, with the heads of your master's sons. Now the king's seventy sons were with the great men of the town, who had the care of them.
೬ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
7 And when the letter came to them, they took the king's sons and put them to death, all the seventy, and put their heads in baskets and sent them to him at Jezreel.
೭ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
8 And a man came and said to him, They have come with the heads of the king's sons. And he said, Put them down in two masses at the doorway of the town till the morning.
೮ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.
9 And in the morning he went out and, stopping, said to all the people there, You are upright men: it is true that I made designs against my master, and put him to death; but who is responsible for the death of all these?
೯ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
10 You may be certain that nothing which the Lord has said about the family of Ahab will be without effect; for the Lord has done what he said by his servant Elijah.
೧೦ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
11 So Jehu put to death all the rest of the seed of Ahab in Jezreel, and all his relations and his near friends and his priests, till there were no more of them.
೧೧ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
12 Then he got up and came to Samaria. And he was at the meeting-place of the keepers of sheep, by the way,
೧೨ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
13 When he came across the brothers of Ahaziah, king of Judah, and said, Who are you? And they said, We are the brothers of Ahaziah, king of Judah; we are going down to see the children of the king and of the queen.
೧೩ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
14 And he said, Take them living. So they took them living, and put them to death in the water-hole of Beth-eked; of the forty-two men he put every one to death;
೧೪ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
15 And when he had gone away from there, he came across Jehonadab, the son of Rechab: and he said good-day to him, and said to him, Is your heart true to mine, as mine is to yours? And Jehonadab in answer said, It is; and Jehu said, If it is, give me your hand. And he gave him his hand, and he made him come up into his carriage.
೧೫ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
16 And he said, Come with me and see how I am on fire for the Lord's cause. So he made him go with him in his carriage.
೧೬ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
17 And when he came to Samaria, he put to death all those of Ahab's family who were still in Samaria, till there were no more of them, as the Lord had said to Elijah.
೧೭ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
18 Then Jehu got all the people together and said to them, Ahab was Baal's servant in a small way, but Jehu will be his servant on a great scale.
೧೮ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
19 Now send for all the prophets of Baal and all his servants and all his priests, to come to me; let no one keep away: for I have a great offering to make to Baal; anyone who is not present, will be put to death. This Jehu did with deceit, his purpose being the destruction of the servants of Baal.
೧೯ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
20 And Jehu said, Let there be a special holy meeting for the worship of Baal. So a public statement was made.
೨೦ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.
21 And Jehu sent out through all Israel; and all the servants of Baal came, not one kept away. And they came into the house of Baal, so that it was full from end to end.
೨೧ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
22 And Jehu said to him who kept the robes, Get out robes for all the servants of Baal. So he got out robes for them.
೨೨ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
23 And Jehu, with Jehonadab, the son of Rechab, went into the house of Baal; and he said to the servants of Baal, Make a search with care, to see that no servant of the Lord is with you, but only servants of Baal.
೨೩ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.
24 Then they went in to make offerings and burned offerings. Now Jehu had put eighty men outside, and said to them, If any man whom I give into your hands gets away, the life of him who lets him go will be the price of his life.
೨೪ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
25 Then when the burned offering was ended, straight away Jehu said to the armed men and the captains, Go in and put them to death; let not one come out. So they put them to the sword; and, pulling the images to the earth, they went into the holy place of the house of Baal.
೨೫ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
26 And they took out the image of Asherah from the house of Baal, and had it burned.
೨೬ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
27 The altar of Baal was pulled down and the house of Baal was broken up and made an unclean place, as it is to this day.
೨೭ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
28 So Jehu put an end to the worship of Baal in Israel.
೨೮ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
29 But Jehu did not keep himself from all the sins of Jeroboam, the son of Nebat, and the evil he made Israel do; the gold oxen were still in Beth-el and in Dan.
೨೯ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
30 And the Lord said to Jehu, Because you have done well in doing what is right in my eyes and effecting all my purpose for the family of Ahab, your sons will be kings of Israel to the fourth generation.
೩೦ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
31 But Jehu did not take care to keep the law of the Lord with all his heart: he did not keep himself from the sin which Jeroboam did and made Israel do.
೩೧ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
32 In those days the Lord was angry first with Israel; and Hazael made attacks on all the land of Israel,
೩೨ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
33 East of Jordan, in all the land of Gilead, the Gadites and the Reubenites and the Manassites, from Aroer by the valley of the Arnon, all Gilead and Bashan.
೩೩ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
34 Now the rest of the acts of Jehu, and all he did, and his great power, are they not recorded in the book of the history of the kings of Israel?
೩೪ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
35 And Jehu went to rest with his fathers, and was put into the earth in Samaria. And Jehoahaz his son became king in his place.
೩೫ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
36 And the time of Jehu's rule over Israel in Samaria was twenty-eight years.
೩೬ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.