< Deuteronomy 12 >
1 These are the laws and the decisions which you are to keep with care in the land which the Lord, the God of your fathers, has given you to be your heritage all the days of your life on earth.
೧ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ವಾಸಿಸುವ ಎಲ್ಲಾ ದಿನಗಳಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳು ಇವೇ:
2 You are to give up to the curse all those places where the nations, whom you are driving out, gave worship to their gods, on the high mountains and the hills and under every green tree:
೨ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
3 Their altars and their pillars are to be broken down, and their holy trees burned with fire, and the images of their gods cut down; you are to take away their names out of that place.
೩ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
4 Do not so to the Lord your God.
೪ಅವರು ಮಾಡಿದ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವನನ್ನು ಪೂಜಿಸಬಾರದು.
5 But let your hearts be turned to the place which will be marked out by the Lord your God, among your tribes, to put his name there;
೫ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.
6 And there you are to take your burned offerings and other offerings, and the tenth part of your goods, and the offerings to be lifted up to the Lord, and the offerings of your oaths, and those which you give freely from the impulse of your hearts, and the first births among your herds and your flocks;
೬ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
7 There you and all your families are to make a feast before the Lord your God, with joy in everything to which you put your hand, because the Lord has given you his blessing.
೭ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.
8 You are not to do things then in the way in which we now do them here, every man as it seems right to him:
೮ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.
9 For you have not come to the rest and the heritage which the Lord your God is giving you.
೯ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.
10 But when you have gone over Jordan and are living in the land which the Lord your God is giving you as your heritage, and when he has given you rest from all those on every side who are fighting against you, and you are living there safely;
೧೦ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
11 Then there will be a place marked out by the Lord your God as the resting-place for his name, and there you will take all the things which I give you orders to take: your burned offerings and other offerings, and the tenth part of your goods, and the offerings to be lifted up, and the offerings of your oaths which you make to the Lord;
೧೧ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.
12 And you will be glad before the Lord your God, you and your sons and your daughters, and your men-servants and your women-servants, and the Levite who is with you in your house, because he has no part or heritage among you.
೧೨ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.
13 Take care that you do not make your burned offerings in any place you see:
೧೩ನೀವು ಕಂಡ ಕಂಡ ಸ್ಥಳಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸಬಾರದು, ನೋಡಿಕೊಳ್ಳಿರಿ.
14 But in the place marked out by the Lord in one of your tribes, there let your burned offerings be offered, and there do what I have given you orders to do.
೧೪ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.
15 Only you may put to death animals, such as the gazelle or the roe, for your food in any of your towns, at the desire of your soul, in keeping with the blessing of the Lord your God which he has given you: the unclean and the clean may take of it.
೧೫ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
16 But you may not take the blood for food, it is to be drained out on the earth like water.
೧೬ರಕ್ತವನ್ನು ಮಾತ್ರ ತಿನ್ನಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
17 In your towns you are not to take as food the tenth part of your grain, or of your wine or your oil, or the first births of your herds or of your flocks, or anything offered under an oath, or freely offered to the Lord, or given as a lifted offering;
೧೭ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
18 But they will be your food before the Lord your God in the place of his selection, where you may make a feast of them, with your son and your daughter, and your man-servant and your woman-servant, and the Levite who is living with you: and you will have joy before the Lord your God in everything to which you put your hand.
೧೮ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
19 See that you do not give up caring for the Levite as long as you are living in your land.
೧೯ನೀವು ನಿಮ್ಮ ದೇಶದಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು, ಜ್ಞಾಪಕವಿರಲಿ.
20 When the Lord your God makes wide the limit of your land, as he has said, and you say, I will take flesh for my food, because you have a desire for it; then you may take whatever flesh you have a desire for.
೨೦ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.
21 If the place marked out by the Lord your God as the resting-place for his name is far away from you, then take from your herds and from your flocks which the Lord has given you, as I have said, and have a meal of it in the towns where you may be living.
೨೧ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕಾಗಿ ಆರಿಸಿಕೊಂಡ ಸ್ಥಳವು ನಿಮಗೆ ದೂರವಾದರೆ, ಆತನು ನಿಮಗೆ ಅನುಗ್ರಹಿಸಿದ ದನ ಮತ್ತು ಕುರಿಗಳಲ್ಲಿ ಬೇಕಾದಷ್ಟನ್ನು ನಾನು ಅಪ್ಪಣೆಕೊಟ್ಟ ಮೇರೆಗೆ ನೀವು ಕೊಯಿದು ನಿಮ್ಮ ಊರಲ್ಲೇ ಊಟಮಾಡಬಹುದು.
22 It will be your food, like the gazelle and the roe; the unclean and the clean may take of it.
೨೨ಜಿಂಕೆದುಪ್ಪಿಗಳನ್ನು ಶುದ್ಧರೂ ಮತ್ತು ಅಶುದ್ಧರೂ ತಿನ್ನುವ ಪ್ರಕಾರ ದನ ಮತ್ತು ಕುರಿಗಳನ್ನೂ ತಿನ್ನಬಹುದು.
23 But see that you do not take the blood for food; for the blood is the life; and you may not make use of the life as food with the flesh.
೨೩ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.
24 Do not take it for food but let it be drained out on the earth like water.
೨೪ಅದನ್ನು ತಿನ್ನದೆ, ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.
25 Do not take it for food; so that it may be well for you and for your children after you, while you do what is right in the eyes of the Lord.
೨೫ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.
26 But the holy things which you have, and the offerings of your oaths, you are to take to the place which will be marked out by the Lord:
೨೬ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
27 Offering the flesh and the blood of your burned offerings on the altar of the Lord your God; and the blood of your offerings is to be drained out on the altar of the Lord your God, and the flesh will be your food.
೨೭ಸರ್ವಾಂಗ ಹೋಮಗಳನ್ನು ಸಮರ್ಪಿಸುವಾಗ, ರಕ್ತ ಮಾಂಸಗಳೆರಡನ್ನೂ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯಲ್ಲಿ ದಹಿಸಿಬಿಡಬೇಕು. ಸಮಾಧಾನ ಯಜ್ಞಗಳನ್ನು ಮಾಡುವಾಗ ರಕ್ತವನ್ನು ಆತನ ಯಜ್ಞವೇದಿಯ ಮೇಲೆ ಸುರಿದುಬಿಟ್ಟು ಮಾಂಸವನ್ನು ಊಟಮಾಡಬೇಕು.
28 Take note of all these orders I am giving you and give attention to them, so that it may be well for you and for your children after you for ever, while you do what is good and right in the eyes of the Lord your God.
೨೮ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.
29 When the people of the land where you are going have been cut off before you by the Lord your God, and you have taken their land and are living in it;
೨೯ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ
30 After their destruction take care that you do not go in their ways, and that you do not give thought to their gods, saying, How did these nations give worship to their gods? I will do as they did.
೩೦ನೀವು ಭ್ರಮೆಗೊಂಡು ನಿಮ್ಮ ಎದುರಿನಿಂದ ನಾಶವಾಗಿ ಹೋದವರ ದುಷ್ಟಪದ್ಧತಿಗಳನ್ನು ಅನುಸರಿಸಬಾರದು. ನೀವು, “ಈ ದೇಶದ ಜನರು ತಮ್ಮ ದೇವರುಗಳನ್ನು ಹೇಗೆ ಸೇವಿಸುತ್ತಿದ್ದರೋ ಹಾಗೆಯೇ ನಾವೂ ಸೇವಿಸುವೆವು” ಎಂದು ಹೇಳಿಕೊಳ್ಳುವವರಾಗಿ ಅವರ ದೇವರುಗಳ ವಿಷಯದಲ್ಲಿ ವಿಚಾರಣೆಯನ್ನು ಎಷ್ಟು ಮಾತ್ರವೂ ಮಾಡಬಾರದು.
31 Do not so to the Lord your God: for everything which is disgusting to the Lord and hated by him they have done in honour of their gods: even burning their sons and daughters in the fire to their gods.
೩೧ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
32 You are to keep with care all the words I give you, making no addition to them and taking nothing from them.
೩೨ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.