< Exodus 7 >
1 And the Lord said to Moses, See I have made you a god to Pharaoh, and Aaron your brother will be your prophet.
೧ಆಗ ಯೆಹೋವನು ಮೋಶೆಗೆ ಇಂತೆಂದನು, “ನಿನ್ನನ್ನು ಫರೋಹನಿಗೆ ದೇವರಂತೆ ನೇಮಿಸಿದ್ದೇನೆ. ನೋಡು, ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು.
2 Say whatever I give you orders to say: and Aaron your brother will give word to Pharaoh to let the children of Israel go out of his land.
೨ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.
3 And I will make Pharaoh's heart hard, and my signs and wonders will be increased in the land of Egypt.
೩ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
4 But Pharaoh will not give ear to you, and I will put my hand on Egypt, and take my armies, my people, the children of Israel, out of Egypt, after great punishments.
೪ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.
5 And the Egyptians will see that I am the Lord, when my hand is stretched out over Egypt, and I take the children of Israel out from among them.
೫ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.
6 And Moses and Aaron did so: as the Lord gave them orders, so they did.
೬ಯೆಹೋವನ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.
7 And Moses was eighty years old, and Aaron eighty-three years old, when they gave the Lord's word to Pharaoh.
೭ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
8 And the Lord said to Moses and Aaron,
೮ಯೆಹೋವನು ಮೋಶೆ ಹಾಗೂ ಆರೋನರ ಸಂಗಡ ಮಾತನಾಡಿ,
9 If Pharaoh says to you, Let me see a wonder: then say to Aaron, Take your rod and put it down on the earth before Pharaoh so that it may become a snake.
೯“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
10 Then Moses and Aaron went in to Pharaoh and they did as the Lord had said: and Aaron put his rod down on the earth before Pharaoh and his servants, and it became a snake.
೧೦ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಹಾಕಿದಾಗ ಅದು ಸರ್ಪವಾಯಿತು.
11 Then Pharaoh sent for the wise men and the wonder-workers, and they, the wonder-workers of Egypt, did the same with their secret arts.
೧೧ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು.
12 For every one of them put down his rod on the earth, and they became snakes: but Aaron's rod made a meal of their rods.
೧೨ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.
13 But Pharaoh's heart was made hard, and he did not give ear to them, as the Lord had said.
೧೩ಯೆಹೋವನು ಮೊದಲು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.
14 And the Lord said to Moses and Aaron, Pharaoh's heart is unchanged; he will not let the people go.
೧೪ಆಗ ಯೆಹೋವನು ಮೋಶೆಗೆ, “ಫರೋಹನ ಹೃದಯವು ಕಠಿಣವಾಗಿದೆ, ತಾನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡುವುದಿಲ್ಲ ಎನ್ನುತ್ತಾನೆ.
15 Go to Pharaoh in the morning; when he goes out to the water, you will be waiting for him by the edge of the Nile, with the rod which was turned into a snake in your hand;
೧೫ನೀನು ಬೆಳಿಗ್ಗೆ ಫರೋಹನ ಬಳಿಗೆ ಹೋಗು, ಅವನು ನೀರಿನ ಬಳಿಗೆ ಇಳಿದು ಬರುತ್ತಾನಲ್ಲಾ. ಸರ್ಪವಾಗಿ ಮಾರ್ಪಾಟುಮಾಡಿದ ಆ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಅವನನ್ನು ಎದುರುಗೊಳ್ಳುವುದಕ್ಕೆ ನೈಲ್ ನದಿ ತೀರದಲ್ಲಿ ನಿಂತುಕೊಂಡು ಅವನಿಗೆ ಹೀಗನ್ನಬೇಕು,
16 And say to him, The Lord, the God of the Hebrews, has sent me to you, saying, Let my people go so that they may give me worship in the waste land; but up to now you have not given ear to his words.
೧೬‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.
17 So the Lord says, By this you may be certain that I am the Lord; see, by the touch of this rod in my hand the waters of the Nile will be turned to blood;
೧೭ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.
18 And the fish in the Nile will come to destruction, and the river will send up a bad smell, and the Egyptians will not be able, for disgust, to make use of the water of the Nile for drinking.
೧೮ನದಿಯಲ್ಲಿರುವ ಮೀನುಗಳು ಸಾಯುವವು. ನದಿಯು ಹೊಲಸಾಗಿ ನಾರುವುದು. ಅದನ್ನು ಕುಡಿಯುವುದಕ್ಕೆ ಐಗುಪ್ತರಿಗೆ ಹೇಸಿಗೆಯಾಗುವುದು’ ಎಂದು ಹೇಳಬೇಕು” ಅಂದನು.
19 And the Lord said, Say to Aaron, Let the rod in your hand be stretched out over the waters of Egypt, and over the rivers and the streams and the pools, and over every stretch of water, so that they may be turned to blood; and there will be blood through all the land of Egypt, in vessels of wood and in vessels of stone.
೧೯ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
20 And Moses and Aaron did as the Lord had said; and when his rod had been lifted up and stretched out over the waters of the Nile before the eyes of Pharaoh and his servants, all the water in the Nile was turned to blood;
೨೦ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.
21 And the fish in the Nile came to destruction, and a bad smell went up from the river, and the Egyptians were not able to make use of the water of the Nile for drinking; and there was blood through all the land of Egypt.
೨೧ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿಯು ದುರ್ವಾಸನೆಗೊಂಡಿದ್ದರಿಂದ ಐಗುಪ್ತರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಐಗುಪ್ತ ದೇಶದಲ್ಲೆಲ್ಲಾ ರಕ್ತವೇ ಕಾಣುತಿತ್ತು.
22 And the wonder-workers of Egypt did the same with their secret arts: but Pharaoh's heart was made hard, and he would not give ear to them, as the Lord had said.
೨೨ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
23 Then Pharaoh went into his house, and did not take even this to heart.
೨೩ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.
24 And all the Egyptians made holes round about the Nile to get drinking-water, for they were not able to make use of the Nile water.
೨೪ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು.
25 And seven days went past, after the Lord had put his hand on the Nile.
೨೫ಯೆಹೋವನು ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ತುಂಬಿದವು.