< Genesis 42 >
1 Now Jacob, hearing that there was grain in Egypt, said to his sons, Why are you looking at one another?
೧ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”
2 And he said, I have had news that there is grain in Egypt: go down there and get grain for us, so that life and not death may be ours.
೨“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.
3 So Joseph's ten brothers went down to get grain from Egypt.
೩ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.
4 But Jacob did not send Benjamin, Joseph's brother, with them, for fear, as he said, that some evil might come to him.
೪ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.
5 And the sons of Israel came with all the others to get grain: for they were very short of food in the land of Canaan.
೫ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
6 Now Joseph was ruler over all the land, and it was he who gave out the grain to all the people of the land; and Joseph's brothers came before him and went down on their faces to the earth.
೬ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
7 And when Joseph saw his brothers, it was clear to him who they were, but he made himself strange to them, and talking roughly to them, said, Where do you come from? And they said, From the land of Canaan, to get food.
೭ಯೋಸೇಫನು ಅವರನ್ನು ಕಂಡಾಗ ಅವರ ಗುರುತು ಹಿಡಿದು ತನ್ನ ಅಣ್ಣಂದಿರೆಂದು ತಿಳಿದರೂ ಅವರಿಗೆ ಅನ್ಯನಂತೆ ತೋರ್ಪಡಿಸಿಕೊಂಡು ಕಠಿಣ ನುಡಿಯಿಂದ, “ನೀವು ಎಲ್ಲಿಂದ ಬಂದವರು” ಎಂದು ಕೇಳಿದನು. ಅವರು, “ಧಾನ್ಯವನ್ನು ಕೊಂಡುಕೊಳ್ಳುವುದಕ್ಕೊಸ್ಕರ ಕಾನಾನ್ ದೇಶದಿಂದ ಬಂದಿದ್ದೇವೆ” ಎಂದರು.
8 Now though Joseph saw that these were his brothers, they had no idea who he was.
೮ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.
9 Then the memory of his dreams about them came back to Joseph, and he said to them, You have come secretly to see how poor the land is.
೯ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
10 And they said to him, Not so, my lord: your servants have come with money to get food.
೧೦ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ.
11 We are all one man's sons, we are true men; we have not come with any secret purpose.
೧೧ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು. ನಾವು ಸತ್ಯವಂತರಾಗಿದ್ದೇವೆ ಹೊರತು ಗೂಢಚಾರರಲ್ಲ” ಅಂದರು.
12 And he said to them, No, but you have come to see how poor the land is.
೧೨ಅವನು ಅವರಿಗೆ, “ಇಲ್ಲ, ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದ್ದಿದೀರಿ” ಎಂದು ಹೇಳಿದನು.
13 Then they said, We your servants are twelve brothers, sons of one man in the land of Canaan; the youngest of us is now with our father, and one is dead.
೧೩ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.
14 And Joseph said, It is as I said; you have come with some secret purpose;
೧೪ಯೋಸೇಫನು ಅವರಿಗೆ, “ನಾನು ಈಗಾಗಲೇ ಹೇಳಿದಂತೆ ನೀವು ಗೂಢಚಾರರೇ.
15 But in this way will you be put to the test: by the life of Pharaoh, you will not go away from this place till your youngest brother comes here.
೧೫ನೀವು ಪರೀಕ್ಷಿಸಲ್ಪಡುವುದು ಹೇಗೆಂದರೆ, ನಿಮ್ಮ ಚಿಕ್ಕ ತಮ್ಮನು ಬರಬೇಕು. ಅವನು ಬಂದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಟು ಹೋಗಬಾರದು.
16 Send one of your number to get your brother, and the rest of you will be kept in prison, so that your words may be tested to see if you are true; if not, by the life of Pharaoh, your purpose is certainly secret.
೧೬ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.
17 So he put them in prison for three days.
೧೭ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.
18 And on the third day Joseph said to them, Do this, if you would keep your lives: for I am a god-fearing man:
೧೮ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನು. ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.
19 If you are true men, let one of you be kept in prison, while you go and take grain for the needs of your families;
೧೯ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ.
20 And come back to me with your youngest brother, so that your words may be seen to be true, and you will not be put to death. This is what you are to do.
೨೦ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ ನಿಮ್ಮ ಮಾತನ್ನು ಸತ್ಯವೆಂದು ನಾನು ತಿಳಿದುಕೊಳ್ಳುವುದರಿಂದ ನೀವು ಸಾಯುವುದಿಲ್ಲ” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿದರು.
21 And they said to one another, Truly, we did wrong to our brother, for we saw his grief of mind, and we did not give ear to his prayers; that is why this trouble has come on us.
೨೧ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
22 And Reuben said to them, Did I not say to you, Do the child no wrong? but you gave no attention; so now, punishment has come on us for his blood.
೨೨ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.
23 They were not conscious that the sense of their words was clear to Joseph, for he had been talking to them through one who had knowledge of their language.
೨೩ಯೋಸೇಫನು ದ್ವಿಭಾಷೆಯಲ್ಲಿ ಮಾತನಾಡಬಲ್ಲ ಅನುವಾದಕರೊಂದಿಗೆ ಮಾತನಾಡಿದ್ದರಿಂದ ಅವರು ತಮ್ಮ ಮಾತು ಅವನಿಗೆ ಗೊತ್ತಾಗುತ್ತದೆಂದು ತಿಳಿಯಲಿಲ್ಲ.
24 And turning away from them, he was overcome with weeping; then he went on talking to them again and took Simeon and put chains on him before their eyes.
೨೪ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು.
25 Then Joseph gave orders for their bags to be made full of grain, and for every man's money to be put back into his bag, and for food to be given them for the journey: which was done.
೨೫ಆ ಮೇಲೆ ಯೋಸೇಫನು ತನ್ನ ಆಳುಗಳಿಗೆ ಆ ಮನುಷ್ಯರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವರವರು ತಂದಿದ್ದ ಹಣವನ್ನು ಅವರ ಚೀಲಗಳಲ್ಲೇ ಇಟ್ಟು ಅವರ ಪ್ರಯಾಣಕ್ಕೆ ಬೇಕಾದ ಆಹಾರವನ್ನು ಕೊಡಬೇಕೆಂದು ಅಪ್ಪಣೆ ಮಾಡಲು ಅವರು ಹಾಗೆಯೇ ಮಾಡಿದರು.
26 Then they put the bags of grain on their asses and went away.
೨೬ಇವರು ತಾವು ಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟು ಹೋದರು.
27 Now at their night's resting-place one of them, opening his bag to give his ass some food, saw his money in the mouth of the bag.
೨೭ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.
28 And he said to his brothers, My money has been given back: it is in my bag; then their hearts became full of fear, and turning to one another they said, What is this which God has done to us?
೨೮ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.
29 So when they came to Jacob their father, in the land of Canaan, they gave him an account of all their experiences, saying,
೨೯ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು.
30 The man who is the ruler of the country was rough with us and put us in prison, saying that we had come with a secret evil purpose.
೩೦ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.
31 And we said to him, We are true men, we have no evil designs;
೩೧ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.
32 We are twelve brothers, sons of our father; one is dead, and the youngest is now with our father in the land of Canaan.
೩೨ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
33 And the ruler of the land said, In this way I may be certain that you are true men; let one of you be kept here with me, while you go and take grain for the needs of your families;
೩೩ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,
34 And come back to me with your youngest brother: then I will be certain that you are true men, and I will give your brother back to you and let you do trade in the land.
೩೪ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ ನೀವು ಗೂಢಚಾರರಲ್ಲ ಸತ್ಯವಂತರೇ ಎಂದು ತಿಳಿದುಕೊಂಡು ನಿಮ್ಮ ಅಣ್ಣನನ್ನು ಸೆರೆಯಿಂದ ಬಿಡಿಸುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ಮಾಡಬಹುದು” ಎಂದು ಹೇಳಿದನು ಎಂದರು.
35 And when they took the grain out of their bags, it was seen that every man's parcel of money was in his bag; and when they and their father saw the money, they were full of fear.
೩೫ಅವರು ತಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಚೀಲದಲ್ಲಿಯೂ ಅವರವರ ಹಣದ ಗಂಟು ಸಿಕ್ಕಿತು. ಅವರು, ಅವರ ತಂದೆಯೂ ಹಣದ ಗಂಟುಗಳನ್ನು ಕಂಡಾಗ ಭಯಪಟ್ಟರು.
36 And Jacob their father said to them, You have taken my children from me: Joseph is gone and Simeon is gone, and now you would take Benjamin away; all these things have come on me.
೩೬ಆಗ ಅವರ ತಂದೆಯಾದ ಯಾಕೋಬನು, “ಅವರಿಗೆ ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ. ಯೋಸೇಫನು ಇಲ್ಲ, ಸಿಮೆಯೋನನು ಇಲ್ಲ. ಬೆನ್ಯಾಮೀನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟವೆಲ್ಲಾ ನನ್ನ ಮೇಲೆಯೇ ಬಂದಿತಲ್ಲಾ” ಎಂದು ಹೇಳಿದನು.
37 And Reuben said, Put my two sons to death if I do not come back to you with him; let him be in my care and I will give him safely back to you.
೩೭ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.
38 And he said, I will not let my son go down with you; for his brother is dead and he is all I have: if evil overtakes him on the journey, then through you will my grey head go down to the underworld in sorrow. (Sheol )
೩೮ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. (Sheol )