< Jeremiah 10 >
1 Give ear to the word which the Lord says to you, O people of Israel:
೧ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;
2 This is what the Lord has said: Do not go in the way of the nations; have no fear of the signs of heaven, for the nations go in fear of them.
೨ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.
3 For that which is feared by the people is foolish: it is the work of the hands of the workman; for a tree is cut down by him out of the woods with his axe.
೩ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.
4 They make it beautiful with silver and gold; they make it strong with nails and hammers, so that it may not be moved.
೪ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ.
5 It is like a pillar in a garden of plants, and has no voice: it has to be lifted, for it has no power of walking. Have no fear of it; for it has no power of doing evil and it is not able to do any good.
೫ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ
6 There is no one like you, O Lord; you are great and your name is great in power.
೬ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.
7 Who would not have fear of you, O King of the nations? for it is your right: for among all the wise men of the nations, and in all their kingdoms, there is no one like you.
೭ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.
8 But they are together like beasts and foolish: the teaching of false gods is wood.
೮ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.
9 Silver hammered into plates is sent from Tarshish, and gold from Uphaz, the work of the expert workman and of the hands of the gold-worker; blue and purple is their clothing, all the work of expert men.
೯ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.
10 But the Lord is the true God; he is the living God and an eternal king: when he is angry, the earth is shaking with fear, and the nations give way before his wrath.
೧೦ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.
11 This is what you are to say to them: The gods who have not made the heavens and the earth will be cut off from the earth and from under the heavens.
೧೧ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
12 He has made the earth by his power, he has made the world strong in its place by his wisdom, and by his wise design the heavens have been stretched out.
೧೨ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ.
13 At the sound of his voice there is a massing of waters in the heavens, and he makes the mists go up from the ends of the earth; he makes the thunder-flames for the rain, and sends out the wind from his store-houses.
೧೩ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.
14 Then every man becomes like a beast without knowledge; every gold-worker is put to shame by the image he has made: for his metal image is deceit, and there is no breath in them.
೧೪ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
15 They are nothing, a work of error: in the time of their punishment, destruction will overtake them.
೧೫ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.
16 The heritage of Jacob is not like these; for the maker of all things is his heritage: the Lord of armies is his name.
೧೬ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.
17 Get your goods together and go out of the land, O you who are shut up in the walled town.
೧೭ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.
18 For the Lord has said, I will send the people in flight like a stone from the land at this time, troubling them so that they will be conscious of it.
೧೮“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.
19 Sorrow is mine for I am wounded! my wound may not be made well; and I said, Cruel is my disease, I may not be free from it.
೧೯ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.
20 My tent is pulled down and all my cords are broken: my children have gone from me, and they are not: no longer is there anyone to give help in stretching out my tent and hanging up my curtains.
೨೦ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
21 For the keepers of the sheep have become like beasts, not looking to the Lord for directions: so they have not done wisely and all their flocks have been put to flight.
೨೧ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.
22 News is going about, see, it is coming, a great shaking is coming from the north country, so that the towns of Judah may be made waste and become the living-place of jackals.
೨೨ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.
23 O Lord, I am conscious that a man's way is not in himself: man has no power of guiding his steps.
೨೩ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.
24 O Lord, put me right, but with wise purpose; not in your wrath, or you will make me small.
೨೪ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.
25 Let your wrath be let loose on the nations which have no knowledge of you, and on the families who give no worship to your name: for they have made a meal of Jacob, truly they have made a meal of him and put an end to him and made his fields a waste.
೨೫ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.