< Joshua 2 >

1 Then Joshua, the son of Nun, sent two men from Shittim secretly, with the purpose of searching out the land, and Jericho. So they went and came to the house of a loose woman of the town, named Rahab, where they took their rest for the night.
ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.
2 And it was said to the king of Jericho, See, some men have come here tonight from the children of Israel with the purpose of searching out the land.
ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.
3 Then the king of Jericho sent to Rahab, saying, Send out the men who have come to you and are in your house; for they have come with the purpose of searching out all the land.
ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.
4 And the woman took the two men and put them in a secret place; then she said, Yes, the men came to me, but I had no idea where they came from;
ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು ಕೇಳಲು ಬಂದವರಿಗೆ, “ಆ ಮನುಷ್ಯರು ನನ್ನ ಬಳಿಗೆ ಬಂದದ್ದು ನಿಜ; ಅವರು ಎಲ್ಲಿಯವರೆಂಬುದು ನನಗೆ ತಿಳಿಯಲಿಲ್ಲ.
5 And when it was the time for shutting the doors at dark, they went out; I have no idea where the men went: but if you go after them quickly, you will overtake them.
ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.
6 But she had taken them up to the roof, covering them with the stems of flax which she had put out in order there.
ಆದರೆ ಅವಳು ಆ ಮನುಷ್ಯರನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳ ಮಧ್ಯದಲ್ಲಿ ಬಚ್ಚಿಟ್ಟಿದ್ದಳು.
7 So the men went after them on the road to Jordan as far as the river-crossing: and when they had gone out after them, the door into the town was shut.
ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು.
8 And before the men went to rest, she came up to them on the roof,
ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆಯು ಮಾಳಿಗೆ ಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನೆಂದರೆ
9 And said to them, It is clear to me that the Lord has given you the land, and that the fear of you has come on us;
“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.
10 For we have had news of how the Lord made the Red Sea dry before you when you came out of Egypt; and what you did to the two kings of the Amorites, on the other side of Jordan, to Sihon and Og, whom you gave up to the curse.
೧೦ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ
11 And because of this news, our hearts became like water, and there was no more spirit in any of us because of you; for the Lord your God is God in heaven on high and here on earth.
೧೧ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.
12 So now, will you give me your oath by the Lord, that, because I have been kind to you, you will be kind to my father's house,
೧೨ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.
13 And that you will keep safe my father and mother and my brothers and sisters and all they have, so that death may not come on us?
೧೩ನನ್ನ ತಂದೆ ತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನು ನಾಶಮಾಡದೆ ಉಳಿಸುವುದಾಗಿ ಯೆಹೋವನ ಹೆಸರಿನಲ್ಲಿ ವಾಗ್ದಾನ ಮಾಡಬೇಕು ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ” ಎಂದಳು.
14 And the men said to her, Our life for yours if you keep our business secret; and when the Lord has given us the land, we will keep faith and be kind to you.
೧೪ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.
15 Then she let them down from the window by a cord, for the house where she was living was on the town wall.
೧೫ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ
16 And she said to them, Get away into the hill-country, or the men who have gone after you will overtake you; keep yourselves safe there for three days, till the searchers have come back, and then go on your way.
೧೬“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.
17 And the men said to her, We will only be responsible for this oath which you have made us take,
೧೭ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;
18 If, when we come into the land, you put this cord of bright red thread in the window from which you let us down; and get your father and mother and your brothers and all your family into the house;
೧೮ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.
19 Then if anyone goes out of your house into the street, his blood will be on his head, we will not be responsible; but if any damage comes to anyone in the house, his blood will be on our heads.
೧೯ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.
20 But if you say anything about our business here, then we will be free from the oath you have made us take.
೨೦ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.
21 And she said, Let it be as you say. Then she sent them away, and they went; and she put the bright red cord in the window.
೨೧ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.
22 And they went into the hill-country and were there three days, till the men who had gone after them had come back; and those who went after them were searching for them everywhere without coming across them.
೨೨ಗೂಢಚಾರರು ಹೊರಟು ಹೋಗಿ ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನಗಳ ಕಾಲ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.
23 Then the two men came down from the hill-country and went over and came back to Joshua, the son of Nun; and they gave him a complete account of what had taken place.
೨೩ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ಹೊಳೆದಾಟಿ, ನೂನನ ಮಗನಾದ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.
24 And they said to Joshua, Truly, the Lord has given all the land into our hands; and all the people of the land have become like water because of us.
೨೪ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.

< Joshua 2 >