< Judges 20 >
1 Then all the children of Israel took up arms, and the people came together like one man, from Dan to Beer-sheba, and the land of Gilead, before the Lord at Mizpah.
೧ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.
2 And the chiefs of the people, out of all the tribes of Israel, took their places in the meeting of the people of God, four hundred thousand footmen armed with swords.
೨ಆ ದೇವಜನರ ಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ, ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.
3 (Now the children of Benjamin had word that the children of Israel had gone up to Mizpah.) And the children of Israel said, Make clear how this evil thing took place.
೩ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು
4 Then the Levite, the husband of the dead woman, said in answer, I came to Gibeah in the land of Benjamin, I and my servant-wife, for the purpose of stopping there for the night.
೪ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತವಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಉಳಿದುಕೊಂಡೆನು.
5 And the townsmen of Gibeah came together against me, going round the house on all sides by night; it was their purpose to put me to death, and my servant-wife was violently used by them and is dead.
೫ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.
6 So I took her, cutting her into parts which I sent through all the country of the heritage of Israel: for they have done an act of shame in Israel.
೬ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.
7 Here you all are, you children of Israel; give now your suggestions about what is to be done.
೭ಇಲ್ಲಿ ಕೂಡಿರುವ ಎಲ್ಲಾ ಇಸ್ರಾಯೇಲರೇ, ಈಗ ನಿಮ್ಮ ಆಲೋಚನೆ ಮತ್ತು ಅಭಿಪ್ರಾಯಗಳನ್ನು ಹೇಳಿರಿ” ಅಂದನು.
8 Then all the people got up as one man and said, Not one of us will go to his tent or go back to his house:
೮ಇದನ್ನು ಕೇಳಿ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗದಿರಲಿ.
9 But this is what we will do to Gibeah: we will go up against it by the decision of the Lord;
೯ನಾವು ಚೀಟು ಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ.
10 And we will take ten men out of every hundred, through all the tribes of Israel, a hundred out of every thousand, a thousand out of every ten thousand, to get food for the people, so that they may give to Gibeah of Benjamin the right punishment for the act of shame they have done in Israel.
೧೦ಇಸ್ರಾಯೇಲ್ಯರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಾಯೇಲರಲ್ಲಿ ನಡೆಸಿದ ದುಷ್ಟ ಕಾರ್ಯಕ್ಕಾಗಿ ಅವರಿಗೆ ದಂಡನೆಮಾಡೋಣ” ಅಂದುಕೊಂಡರು.
11 So all the men of Israel were banded together against the town, united like one man.
೧೧ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು.
12 And the tribes of Israel sent men through all the tribe of Benjamin saying, What is this evil which has been done among you?
೧೨ಅವರು ಬೆನ್ಯಾಮೀನ್ಯರ ಸಮಸ್ತ ಕುಲದವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕೃತ್ಯ ಎಂಥದು?
13 Now give up those good-for-nothing persons in Gibeah so that we may put them to death, clearing away the evil from Israel. But the children of Benjamin would not give ear to the voice of their brothers, the children of Israel.
೧೩ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.
14 And the children of Benjamin came together from all their towns to Gibeah, to go to war with the children of Israel.
೧೪ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.
15 And the children of Benjamin who came that day from the towns were twenty-six thousand men armed with swords, in addition to the people of Gibeah, numbering seven hundred of the best fighting-men,
೧೫ಆ ದಿನದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಸೇರಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.
16 Who were left-handed, able to send a stone at a hair without error.
೧೬ಈ ಎಲ್ಲಾ ಜನರಲ್ಲಿ ಏಳುನೂರು ಜನರು ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬರು ಕೂದಲೆಳೆಯಷ್ಟು ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣರಾಗಿದ್ದರು.
17 And the men of Israel, other than Benjamin, were four hundred thousand in number, all armed with swords; they were all men of war.
೧೭ಬೆನ್ಯಾಮೀನ್ಯರಲ್ಲದ ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು; ಇವರೆಲ್ಲರೂ ವೀರರಾಗಿದ್ದರು.
18 And they got up and went up to Beth-el to get directions from God, and the children of Israel said, Who is to be the first to go up to the fight against the children of Benjamin? And the Lord said, Judah is to go up first.
೧೮ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
19 So the children of Israel got up in the morning and put themselves in position against Gibeah.
೧೯ಇಸ್ರಾಯೇಲ್ಯರು ಬೆಳಗ್ಗೆ ಹೊರಟುಹೋಗಿ ಗಿಬೆಯದ ಎದುರಿನಲ್ಲಿ ಪಾಳೆಯಮಾಡಿಕೊಂಡು,
20 And the men of Israel went out to war against Benjamin (and the men of Israel put their forces in fighting order against them at Gibeah).
೨೦ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.
21 Then the children of Benjamin came out from Gibeah, cutting down twenty-two thousand of the Israelites that day.
೨೧ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.
22 But the people, the men of Israel, taking heart again, put their forces in order and took up the same position as on the first day.
೨೨ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.
23 Now the children of Israel went up, weeping before the Lord till evening, requesting the Lord and saying, Am I to go forward again to the fight against the children of Benjamin my brother? And the Lord said, Go up against him.
೨೩ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.
24 So the children of Israel went forward against the children of Benjamin the second day.
೨೪ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.
25 And the second day Benjamin went out against them from Gibeah, cutting down eighteen thousand men of the children of Israel, all swordsmen.
೨೫ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.
26 Then all the children of Israel, and all the people, went up to Beth-el, weeping and waiting there before the Lord, going without food all day till evening, and offering burned offerings and peace-offerings before the Lord.
೨೬ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
27 And the children of Israel made request to the Lord, (for the ark of the agreement of the Lord was there in those days,
೨೭ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;
28 And Phinehas, the son of Eleazar, the son of Aaron, was in his place before it, ) and said, Am I still to go on with the fight against the children of Benjamin my brother, or am I to give it up? And the Lord said, Go on; for tomorrow I will give him into your hands.
೨೮ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.
29 So Israel put men secretly all round Gibeah to make a surprise attack on it.
೨೯ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ,
30 And the children of Israel went up against the children of Benjamin on the third day, and put themselves in fighting order against Gibeah as before.
೩೦ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನದಲ್ಲಿಯೂ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.
31 And the children of Benjamin went out against the people, moving away from the town; and as before, at their first attack, they put to death about thirty men of Israel on the highways, of which one goes up to Beth-el and the other to Gibeah, and in the open country.
೩೧ಬೆನ್ಯಾಮೀನ್ಯರು ಇಸ್ರಾಯೇಲ್ಯರೊಡನೆ ಯುದ್ಧಮಾಡವುದಕ್ಕಾಗಿ ಪಟ್ಟಣವನ್ನು ಬಿಟ್ಟು ಊರೊಳಕ್ಕೆ ಬಂದರು. ಅವರು ಮೊದಲಿನಂತೆ ಜನರನ್ನು ಕೊಲ್ಲುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ, ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಮಾಡಿದರು.
32 And the children of Benjamin said, They are giving way before us as at first. But the children of Israel said, Let us go in flight and get them away from the town, into the highways.
೩೨ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ಅಂದುಕೊಂಡರು. ಇಸ್ರಾಯೇಲ್ಯರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ” ಎಂದು ಮಾತನಾಡಿಕೊಂಡು,
33 So all the men of Israel got up and put themselves in fighting order at Baal-tamar: and those who had been waiting secretly to make a surprise attack came rushing out of their place on the west of Geba.
೩೩ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು
34 And they came in front of Gibeah, ten thousand of the best men in all Israel, and the fighting became more violent; but the children of Benjamin were not conscious that evil was coming on them.
೩೪ಪಟ್ಟಣದ ಮುಂದೆ ಬಂದರು; ಅವರು ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧವು ಬಹುಘೋರವಾಯಿತು. ತಮಗೆ ಅಪಾಯವು ಒದಗಿ ಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಿರಲಿಲ್ಲ.
35 Then the Lord sent sudden fear on Benjamin before Israel; and that day the children of Israel put to death twenty-five thousand, one hundred men of Benjamin, all of them swordsmen.
೩೫ಯೆಹೋವನು ಇಸ್ರಾಯೇಲರಿಗೆ ಜಯವನ್ನು ಕೊಟ್ಟಿದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯರ ಯೋಧರನ್ನು ಹತಮಾಡಿದರು.
36 So the children of Benjamin saw that they were overcome: and the men of Israel had given way before Benjamin, putting their faith in the watchers who were to make the surprise attack on Gibeah.
೩೬ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಇಸ್ರಾಯೇಲ್ಯರು ತಾವು ಗಿಬೆಯದ ಸಮೀಪದಲ್ಲಿ ಹೊಂಚು ಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸವುಳ್ಳವರಾಗಿದ್ದರಿಂದ, ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.
37 And the watchers, rushing on Gibeah and overrunning it, put all the town to the sword without mercy.
೩೭ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ, ಅದರೊಳಗಿದ್ದವರೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು.
38 Now the sign fixed between the men of Israel and those making the surprise attack was that when they made a pillar of smoke go up from the town,
೩೮ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ, ಓಡಿಹೋಗುತ್ತಿದ್ದವರು ಪುನಃ ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚು ಹಾಕುವವರೂ ಹಾಗು ಉಳಿದ ಇಸ್ರಾಯೇಲರೂ ತಮ್ಮ ತಮ್ಮೊಳಗೆ ಮೊದಲೇ ಗೊತ್ತುಮಾಡಿಕೊಂಡಿದ್ದರು.
39 The men of Israel were to make a turn about in the fight. And Benjamin had overcome and put to death about thirty of the men of Israel, and were saying, Certainly they are falling back before us as in the first fight.
೩೯ಬೆನ್ಯಾಮೀನ್ಯರಾದರೋ, “ಇಸ್ರಾಯೇಲ್ಯರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರು” ಎಂದು ತಿಳಿದು ಅವರನ್ನು ಹತಮಾಡಲು ಪ್ರಾರಂಭಿಸಿ, ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.
40 Then the sign went up out of the town in the pillar of smoke, and the Benjamites, turning back, saw all the town going up in smoke to heaven.
೪೦ಆದರೆ ಪಟ್ಟಣದಿಂದ ಹೊಗೆ ಎದ್ದು ಸ್ತಂಭದೋಪಾದಿಯಲ್ಲಿ ಕಾಣಿಸಿಕೊಳ್ಳಲು ಇಸ್ರಾಯೇಲರು ತಿರುಗಿ ನಿಂತರು.
41 And the men of Israel had made a turn about, and the men of Benjamin were overcome with fear, for they saw that evil had overtaken them.
೪೧ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದನ್ನು ಕಂಡು ತಮಗೆ ಅಪಾಯ ಉಂಟಾಗುವುದೆಂದು ಕಳವಳಗೊಂಡರು.
42 So turning their backs on the men of Israel, they went in the direction of the waste land; but the fight overtook them; and those who came out of the town were heading them off and putting them to the sword.
೪೨ಅವರು ಇಸ್ರಾಯೇಲರಿಗೆ ಬೆನ್ನು ತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಯುದ್ಧವೀರರು ಅವರನ್ನು ಹಿಂದಟ್ಟಿದ್ದರಿಂದಲೂ, ಪಟ್ಟಣಕ್ಕೆ ಬೆಂಕಿ ಹೊತ್ತಿಸಿದವರು ಹೊರಗೆ ಬಂದುಬಿಟ್ಟಿದ್ದರಿಂದಲೂ, ಅವರು ಇಬ್ಬರ ಮಧ್ಯದಲ್ಲಿ ಸಿಕ್ಕಿಹಾಕಿಕೊಂಡರು.
43 And crushing Benjamin down, they went after them, driving them from Nohah as far as the east side of Gibeah.
೪೩ಇಸ್ರಾಯೇಲರು ಅವರನ್ನು ಸುತ್ತಿಕೊಂಡು, ಎಲ್ಲಿಯೂ ಓಡಿಹೋಗದಂತೆ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿರುವ ಮೆನೂಹದಲ್ಲಿ ತುಳಿದುಹಾಕಿಬಿಟ್ಟರು.
44 Eighteen thousand men of Benjamin came to their death, all strong men of war.
೪೪ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.
45 And turning, they went in flight to the rock of Rimmon in the waste land: and on the highways five thousand of them were cut off by the men of Israel, who, pushing on hard after them to Geba, put to death two thousand more.
೪೫ಇದಲ್ಲದೆ ಅವರು ಅರಣ್ಯದಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದು ಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ತಿರುಗಿ ಎರಡು ಸಾವಿರ ಜನರನ್ನು ಹತಮಾಡಿದರು.
46 So twenty-five thousand of the swordsmen of Benjamin came to their end that day, all strong men of war.
೪೬ಹೀಗೆ ಆ ದಿನ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಸೈನಿಕರು ಸಂಹರಿಸಲ್ಪಟ್ಟರು.
47 But six hundred men, turning back, went in flight to the rock of Rimmon in the waste land, and were living on the rock of Rimmon for four months.
೪೭ಆದರೆ ಆರು ನೂರು ಮಂದಿ ಅರಣ್ಯಮಾರ್ಗವಾಗಿ ಓಡಿಹೋಗಿ, ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.
48 And the men of Israel, turning again against the children of Benjamin, put to the sword without mercy all the towns and the cattle and everything there was, burning every town which came into their hands.
೪೮ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.