< Judges 6 >

1 And the children of Israel did evil in the eyes of the Lord; and the Lord gave them up into the hand of Midian for seven years.
ಇಸ್ರಾಯೇಲರು ತಿರುಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದ್ದರಿಂದ ಆತನು ಅವರನ್ನು ಏಳು ವರ್ಷಗಳ ಕಾಲ ಮಿದ್ಯಾನ್ಯರ ಕೈಗೆ ಒಪ್ಪಿಸಿದನು.
2 And Midian was stronger than Israel; and because of the Midianites, the children of Israel made holes for themselves in the mountains, and hollows in the rocks, and strong places.
ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.
3 And whenever Israel's grain was planted, the Midianites and the Amalekites and the people of the east came up against them;
ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.
4 And put their army in position against them; and they took all the produce of the earth as far as Gaza, till there was no food in Israel, or any sheep or oxen or asses.
ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.
5 For they came up regularly with their oxen and their tents; they came like the locusts in number; they and their camels were without number; and they came into the land for its destruction.
ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
6 And Israel was in great need because of Midian; and the cry of the children of Israel went up to the Lord.
ಇಸ್ರಾಯೇಲರು ಮಿದ್ಯಾನ್ಯರ ದೆಸೆಯಿಂದ ಬಹಳವಾಗಿ ಕುಗ್ಗಿಹೋಗಿ ಯೆಹೋವನಿಗೆ ಮೊರೆಯಿಟ್ಟರು.
7 And when the cry of the children of Israel, because of Midian, came before the Lord,
ಇಸ್ರಾಯೇಲರು ಮಿದ್ಯಾನ್ಯರ ಹಿಂಸೆಯನ್ನು ಸಹಿಸಲಾರದೆ ಯೆಹೋವನಿಗೆ ಮೊರೆಯಿಟ್ಟಾಗ
8 The Lord sent a prophet to the children of Israel, who said to them, The Lord the God of Israel, has said, I took you up from Egypt, out of the prison-house;
ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.
9 And I took you out of the hands of the Egyptians and out of the hands of all who were cruel to you, and I sent them out by force from before you and gave you their land;
ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.
10 And I said to you, I am the Lord your God; you are not to give worship to the gods of the Amorites in whose land you are living, but you did not give ear to my voice.
೧೦ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.
11 Now the angel of the Lord came and took his seat under the oak-tree in Ophrah, in the field of Joash the Abiezrite; and his son Gideon was crushing grain in the place where the grapes were crushed, so that the Midianites might not see it.
೧೧ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
12 And the angel of the Lord came before his eyes, and said to him, The Lord is with you, O man of war.
೧೨ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.
13 Then Gideon said to him, O my lord, if the Lord is with us why has all this come on us? And where are all his works of power, of which our fathers have given us word, saying, Did not the Lord take us out of Egypt? But now he has given us up, handing us over to the power of Midian.
೧೩ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.
14 And the Lord, turning to him, said, Go in the strength you have and be Israel's saviour from Midian: have I not sent you?
೧೪ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.
15 And he said to him, O Lord, how may I be the saviour of Israel? See, my family is the poorest in Manasseh, and I am the least in my father's house.
೧೫ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.
16 Then the Lord said to him, Truly, I will be with you, and you will overcome the Midianites as if they were one man.
೧೬ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.
17 So he said to him, If now I have grace in your eyes, then give me a sign that it is you who are talking to me.
೧೭ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.
18 Do not go away till I come with my offering and put it before you. And he said, I will not go away before you come back.
೧೮ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಈ ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
19 Then Gideon went in and made ready a young goat, and with an ephah of meal he made unleavened cakes: he put the meat in a basket and the soup in which it had been cooked he put in a pot, and he took it out to him under the oak-tree and gave it to him there.
೧೯ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.
20 And the angel of God said to him, Take the meat and the unleavened cakes and put them down on the rock over there, draining out the soup over them. And he did so.
೨೦ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
21 Then the angel of the Lord put out the stick which was in his hand, touching the meat and the cakes with the end of it; and a flame came up out of the rock, burning up the meat and the cakes: and the angel of the Lord was seen no longer.
೨೧ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.
22 Then Gideon was certain that he was the angel of the Lord; and Gideon said, I am in fear, O Lord God! for I have seen the angel of the Lord face to face.
೨೨ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.
23 But the Lord said to him, Peace be with you; have no fear: you are in no danger of death.
೨೩ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.
24 Then Gideon made an altar there to the Lord, and gave it the name Yahweh-shalom; to this day it is in Ophrah of the Abiezrites.
೨೪ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.
25 The same night the Lord said to him, Take ten men of your servants and an ox seven years old, and after pulling down the altar of Baal which is your father's, and cutting down the holy tree by its side,
೨೫ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ, ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ, ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.
26 Make an altar to the Lord your God on the top of this rock, in the ordered way and take the ox and make a burned offering with the wood of the holy tree which has been cut down.
೨೬ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.
27 Then Gideon took ten of his servants and did as the Lord had said to him; but fearing to do it by day, because of his father's people and the men of the town, he did it by night.
೨೭ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ ಯೆಹೋವನು ಹೇಳಿದಂತೆಯೇ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ, ಊರಿನವರಿಗೂ ಹೆದರಿಕೊಂಡಿದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.
28 And the men of the town got up early in the morning, and they saw the altar of Baal broken down, and the holy tree which was by it cut down, and the ox offered on the altar which had been put up there.
೨೮ಊರಿನ ಜನರು ಹೊತ್ತಾರೆಯಲ್ಲೆದ್ದು ಬಾಳನ ಯಜ್ಞವೇದಿಯು ಕೆಡವಲ್ಪಟ್ಟಿರುವುದನ್ನೂ, ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭವು ಕಡಿಯಲ್ಪಟ್ಟಿರುವುದನ್ನೂ, ಹೊಸದಾಗಿ ಕಟ್ಟಿದ ಯಜ್ಞವೇದಿಯ ಮೇಲೆ ಎರಡನೆಯ ಹೋರಿಯು ಯಜ್ಞವಾದದ್ದನ್ನೂ ಕಂಡು,
29 And they said to one another, Who has done this thing? And after searching with care, they said, Gideon, the son of Joash, has done this thing.
೨೯“ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸುವಲ್ಲಿ ಯೋವಾಷನ ಮಗನಾದ ಗಿದ್ಯೋನನೇ ಎಂದು ತಿಳಿದು ಬಂದಿತು.
30 Then the men of the town said to Joash, Make your son come out to be put to death, for pulling down the altar of Baal and cutting down the holy tree which was by it.
೩೦ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ಕರೆದುಕೊಂಡು ಬಾ; ಅವನು ಸಾಯಬೇಕು; ಯಾಕೆಂದರೆ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ” ಅಂದರು.
31 But Joash said to all those who were attacking him, Will you take up the cause of Baal? will you be his saviour? Let anyone who will take up his cause be put to death while it is still morning: if he is a god, let him take up his cause himself because of the pulling down of his altar.
೩೧ಯೋವಾಷನು ತನಗೆ ವಿರೋಧವಾಗಿ ನಿಂತವರೆಲ್ಲರಿಗೆ, “ಬಾಳನಿಗೋಸ್ಕರ ನೀವು ವ್ಯಾಜ್ಯಮಾಡಬೇಕೋ? ನೀವು ಅವನನ್ನು ರಕ್ಷಿಸಬೇಕೋ? ಅವನಿಗಾಗಿ ವ್ಯಾಜ್ಯಮಾಡುವವರು ಈ ಹೊತ್ತೇ ಕೊಲ್ಲಲ್ಪಡಲಿ. ಬಾಳನು ದೇವನಾಗಿದ್ದರೆ ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯಮಾಡಲಿ” ಎಂದನು.
32 So that day he gave him the name of Jerubbaal, saying, Let Baal take up his cause against him because his altar has been broken down.
೩೨ಆ ದಿನದಲ್ಲಿ ಅವನು, “ಬಾಳನು ತನ್ನ ಯಜ್ಞವೇದಿಯನ್ನು ಕೆಡವಿಬಿಟ್ಟವನೊಡನೆ ತಾನೇ ವ್ಯಾಜ್ಯಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.
33 Then all the Midianites and the Amalekites and the people of the east, banding themselves together, went over and put up their tents in the valley of Jezreel.
೩೩ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.
34 But the spirit of the Lord came on Gideon; and at the sound of his horn all Abiezer came together after him.
೩೪ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.
35 And he sent through all Manasseh, and they came after him; and he sent to Asher and Zebulun and Naphtali, and they came up and were joined to the others.
೩೫ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಲಾಗಿ ಅವರೂ ಕೂಡಿಬಂದರು. ಆಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ಯುದ್ಧಪ್ರಯಾಣಕ್ಕೋಸ್ಕರ ಸೇರಿಕೊಂಡರು.
36 Then Gideon said to God, If you are going to give Israel salvation by my hand, as you have said,
೩೬ಮತ್ತು ಗಿದ್ಯೋನನು ದೇವರಿಗೆ, “ನೀನು ಹೇಳಿದಂತೆ ಇಸ್ರಾಯೇಲ್ಯರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೋ ಇಲ್ಲವೋ ಎಂಬುದನ್ನು ತಿಳಿಯಪಡಿಸು.
37 See, I will put the wool of a sheep on the grain-floor; if there is dew on the wool only, while all the earth is dry, then I will be certain that it is your purpose to give Israel salvation by my hand as you have said.
೩೭ಇಗೋ, ನಾನು ಕಣದಲ್ಲಿ ಕುರಿಯ ಉಣ್ಣೆಯನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜುಬಿದ್ದು ನೆಲವೆಲ್ಲಾ ಒಣಗಿದ್ದರೆ ನೀನು ಹೇಳಿದಂತೆಯೇ ಇಸ್ರಾಯೇಲರನ್ನು ನನ್ನ ಮೂಲಕವಾಗಿ ರಕ್ಷಿಸುವಿಯೆಂದು ತಿಳಿಯುವೆನು” ಎಂಬುದಾಗಿ ವಿಜ್ಞಾಪಿಸಿದನು.
38 And it was so: for he got up early on the morning after, and twisting the wool in his hands, he got a basin full of water from the dew on the wool.
೩೮ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.
39 Then Gideon said to God, Do not be moved to wrath against me if I say only this: let me make one more test with the wool; let the wool now be dry, while the earth is covered with dew.
೩೯ಅವನು ತಿರುಗಿ ದೇವರಿಗೆ, “ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತನಾಡುತ್ತೇನೆ. ಇನ್ನು ಒಂದೇ ಸಾರಿ ಈ ಉಣ್ಣೆಯಿಂದ ನಿನ್ನನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ಉಣ್ಣೆ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿ ಬಿದ್ದಿರಲಿ” ಅಂದನು.
40 And that night God did so; for the wool was dry, and there was dew on all the earth round it.
೪೦ಆ ರಾತ್ರಿ ದೇವರು ಹಾಗೆಯೇ ಮಾಡಿದನು; ಉಣ್ಣೆ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.

< Judges 6 >