< Lamentations 1 >
1 See her seated by herself, the town which was full of people! She who was great among the nations has become like a widow! She who was a princess among the countries has come under the yoke of forced work!
೧ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
2 She is sorrowing bitterly in the night, and her face is wet with weeping; among all her lovers she has no comforter: all her friends have been false to her, they have become her haters.
೨ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
3 Judah has been taken away as a prisoner because of trouble and hard work; her living-place is among the nations, there is no rest for her: all her attackers have overtaken her in a narrow place.
೩ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
4 The ways of Zion are sad, because no one comes to the holy meeting; all her doorways are made waste, her priests are breathing out sorrow: her virgins are troubled, and it is bitter for her.
೪ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.
5 Those who are against her have become the head, everything goes well for her haters; for the Lord has sent sorrow on her because of the great number of her sins: her young children have gone away as prisoners before the attacker.
೫ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.
6 And all her glory has gone from the daughter of Zion: her rulers have become like harts with no place for food, and they have gone in flight without strength before the attacker.
೬ಚೀಯೋನ್ ನಗರಿಯ ವೈಭವವೆಲ್ಲಾ ಕಳೆದುಹೋಗಿದೆ; ಅಲ್ಲಿನ ಪ್ರಧಾನರು ಮೇವಿಲ್ಲದ ಜಿಂಕೆಗಳಂತೆ ಬಲಗುಂದಿ ಹಿಡಿಯಲು ಬೆನ್ನತ್ತಿದವರಿಗೆ ಬೆನ್ನುಕೊಟ್ಟು ಓಡಿಹೋಗಿದ್ದಾರೆ.
7 Jerusalem keeps in mind, in the days of her sorrow and of her wanderings, all the desired things which were hers in days gone by; when her people came into the power of her hater and she had no helper, her attackers saw their desire effected on her and made sport of her destruction.
೭ಯೆರೂಸಲೇಮ್ ಪುರಿಯು ದಿಕ್ಕಾಪಾಲಾಗಿ ಅಲೆದು ಕಷ್ಟಪಡುವಾಗ ಪುರಾತನಕಾಲದಿಂದ ತನಗಿದ್ದ ವೈಭವವನ್ನು ಜ್ಞಾಪಿಸಿಕೊಳ್ಳುತ್ತಾಳೆ. ಆಕೆಗೆ ಯಾರ ಸಹಾಯವೂ ಇಲ್ಲದೆ ಆಕೆಯ ಜನರು ವಿರೋಧಿಯ ಕೈಗೆ ಸಿಕ್ಕಿದಾಗ ಹಾಳುಬಿದ್ದಿರುವ ಆಕೆಯನ್ನು ವೈರಿಗಳು ನೋಡಿ ಹಾಸ್ಯಮಾಡಿದರು.
8 Great is the sin of Jerusalem; for this cause she has become an unclean thing: all those who gave her honour are looking down on her, because they have seen her shame: now truly, breathing out grief, she is turned back.
೮ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.
9 In her skirts were her unclean ways; she gave no thought to her end; and her fall has been a wonder; she has no comforter: see her sorrow, O Lord; for the attacker is lifted up.
೯ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.
10 The hand of her hater is stretched out over all her desired things; for she has seen that the nations have come into her holy place, about whom you gave orders that they were not to come into the meeting of your people.
೧೦ವಿರೋಧಿಯು ಕೈಚಾಚಿ ಅವಳ ಭೋಗ್ಯವಸ್ತುಗಳನ್ನೆಲ್ಲಾ ಬಾಚಿಬಿಟ್ಟನು; “ಮ್ಲೇಚ್ಛರು ನಿನ್ನ ಸಭೆಗೆ ಸೇರಬಾರದು” ಎಂದು ನೀನು ಆಜ್ಞಾಪಿಸಿದರೂ ಅಂಥವರೇ ತನ್ನಲ್ಲಿನ ಪವಿತ್ರಾಲಯದೊಳಗೆ ಸೇರುವುದನ್ನು ಆಕೆಯು ಕಾಣಬೇಕಾಯಿತು.
11 Breathing out grief all her people are looking for bread; they have given their desired things for food to give them life: see, O Lord, and take note; for she has become a thing of shame.
೧೧ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.
12 Come to me, all you who go by! Keep your eyes on me, and see if there is any pain like the pain of my wound, which the Lord has sent on me in the day of his burning wrath.
೧೨ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.
13 From on high he has sent fire into my bones, and it has overcome them: his net is stretched out for my feet, I am turned back by him; he has made me waste and feeble all the day.
೧೩ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.
14 A watch is kept on my sins; they are joined together by his hand, they have come on to my neck; he has made my strength give way: the Lord has given me up into the hands of those against whom I have no power.
೧೪ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ.
15 The Lord has made sport of all my men of war in me, he has got men together against me to send destruction on my young men: the virgin daughter of Judah has been crushed like grapes under the feet of the Lord.
೧೫ಕರ್ತನು ನನ್ನ ಶೂರರನ್ನೆಲ್ಲಾ ನನ್ನ ಕಣ್ಣೆದುರಿಗೆ ಹೊರಳಾಡಿಸಿದ್ದಾನೆ; ನನ್ನ ಯುವಕರನ್ನು ಸದೆಬಡಿದಿದ್ದಾನೆ. ನನ್ನ ಕೇಡಿಗಾಗಿಯೇ ಮಹೋತ್ಸವವನ್ನು ಏರ್ಪಡಿಸಿದ್ದಾನೆ; ಕರ್ತನು ಯೆಹೂದವೆಂಬ ಕನ್ಯೆಯನ್ನು ತೊಟ್ಟಿಯಲ್ಲಿನ ದ್ರಾಕ್ಷಿಯ ಹಾಗೆ ತುಳಿದಿದ್ದಾನೆ.
16 For these things I am weeping; my eye is streaming with water; because the comforter who might give me new life is far from me: my children are made waste, because the hater is strong.
೧೬ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
17 Zion's hands are outstretched; she has no comforter; the Lord has given orders to the attackers of Jacob round about him: Jerusalem has become like an unclean thing among them.
೧೭ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.
18 The Lord is upright; for I have gone against his orders: give ear, now, all you peoples, and see my pain, my virgins and my young men have gone away as prisoners.
೧೮ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!
19 I sent for my lovers, but they were false to me: my priests and my responsible men were breathing their last breath in the town, while they were looking for food to give them new life.
೧೯ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.
20 See, O Lord, for I am in trouble; the inmost parts of my body are deeply moved; my heart is turned in me; for I have been uncontrolled: outside the children are put to the sword, and in the house there is death.
೨೦ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.
21 Give ear to the voice of my grief; I have no comforter; all my haters have news of my troubles, they are glad because you have done it: let the day of fate come when they will be like me.
೨೧ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!
22 Let all their evil-doing come before you; do to them as you have done to me for all my sins: for loud is the sound of my grief, and the strength of my heart is gone.
೨೨ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿಹೋಗಿದೆ.