< Leviticus 1 >
1 And the voice of the Lord came to Moses out of the Tent of meeting, saying,
೧ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
2 Give these orders to the children of Israel: When anyone of you makes an offering to the Lord, you are to take it from the cattle, from the herd or from the flock.
೨“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
3 If the offering is a burned offering of the herd, let him give a male without a mark: he is to give it at the door of the Tent of meeting so that he may be pleasing to the Lord.
೩“‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
4 And he is to put his hand on the head of the burned offering and it will be taken for him, to take away his sin.
೪ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
5 And the ox is to be put to death before the Lord: then Aaron's sons, the priests, are to take the blood and put some of it on and round the altar which is at the door of the Tent of meeting.
೫“‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
6 And the burned offering is to be skinned and cut up into its parts.
೬ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
7 And Aaron's sons, the priests, are to put fire on the altar and put the wood in order on the fire:
೭ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
8 And Aaron's sons, the priests, are to put the parts, the head and the fat, in order on the wood which is on the fire on the altar:
೮ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
9 But its inside parts and its legs are to be washed with water, and it will all be burned on the altar by the priest for a burned offering, an offering made by fire, for a sweet smell to the Lord.
೯ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
10 And if his offering is of the flock, a burned offering of sheep or goats, let him give a male without a mark.
೧೦“‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
11 And he is to put it to death on the north side of the altar before the Lord: and Aaron's sons, the priests, are to put some of the blood on and round the altar.
೧೧ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
12 And the offering is to be cut into its parts, with its head and its fat; and the priest is to put them in order on the wood which is on the fire on the altar:
೧೨ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
13 But the inside parts and the legs are to be washed with water; and the priest will make an offering of all of it, burning it on the altar: it is a burned offering, an offering made by fire, for a sweet smell to the Lord.
೧೩ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
14 And if his offering to the Lord is a burned offering of birds, then he is to make his offering of doves or of young pigeons.
೧೪“‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
15 And the priest is to take it to the altar, and after its head has been twisted off, it is to be burned on the altar, and its blood drained out on the side of the altar:
೧೫ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
16 And he is to take away its stomach, with its feathers, and put it down by the east side of the altar, where the burned waste is put:
೧೬ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
17 And let it be broken open at the wings, but not cut in two; and let it be burned on the altar by the priest on the wood which is on the fire; it is a burned offering; an offering made by fire for a sweet smell to the Lord.
೧೭ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.