< Micah 1 >
1 The word of the Lord which came to Micah the Morashtite, in the days of Jotham, Ahaz, and Hezekiah, kings of Judah: his vision about Samaria and Jerusalem.
೧ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.
2 Give ear, you peoples, all of you; give attention, O earth and everything in it: let the Lord God be witness against you, the Lord from his holy Temple.
೨ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.
3 For see, the Lord is coming out from his place, and will come down, stepping on the high places of the earth.
೩ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.
4 And the mountains will be turned to water under him, and the deep valleys will be broken open, like wax before the fire, like waters flowing down a slope.
೪ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.
5 All this is because of the wrongdoing of Jacob and the sins of the children of Israel. What is the wrongdoing of Jacob? is it not Samaria? and what are the high places of Judah? are they not Jerusalem?
೫ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!
6 So I will make Samaria into a field and the plantings of a vine-garden: I will send its stones falling down into the valley, uncovering its bases.
೬ಆದಕಾರಣ ನಾನು ಸಮಾರ್ಯವನ್ನು ಹೊಲದಲ್ಲಿನ ಹಾಳು ದಿಬ್ಬವನ್ನಾಗಿಯೂ, ದ್ರಾಕ್ಷಿಯ ತೋಟದ ಮಡಿಗಳನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿಗೆ ಸುರಿದುಬಿಡುವೆನು. ಅದರ ಅಸ್ತಿವಾರಗಳನ್ನು ಬಯಲನ್ನಾಗಿ ಮಾಡುವೆನು.
7 And all her pictured images will be hammered into bits, and all the payments for her loose ways will be burned with fire, and all the images of her gods I will make waste: for with the price of a loose woman she got them together, and as the price of a loose woman will they be given back.
೭ಅದರ ಎರಕದ ಬೊಂಬೆಗಳನ್ನೆಲ್ಲಾ ಪುಡಿಪುಡಿ ಮಾಡುವೆನು. ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವುದು. ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು. ಅದು ವೇಶ್ಯಾವಾಟಿಕೆಯಿಂದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು ಹಾಗೂ ವೇಶ್ಯಾವಾಟಿಕೆಯ ಸಂಪಾದನೆಯಾಗಿಯೇ ಪರರ ಪಾಲಾಗುವವು.
8 For this I will be full of sorrow and give cries of grief; I will go uncovered and unclothed: I will give cries of grief like the jackals and will be in sorrow like the ostriches.
೮ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.
9 For her wounds may not be made well: for it has come even to Judah, stretching up to the doorway of my people, even to Jerusalem.
೯ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.
10 Give no word of it in Gath, let there be no weeping at all: at Beth-le-aphrah be rolling in the dust.
೧೦ಇದನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ, ಅಳಲೇಬೇಡಿರಿ, ಬೇತ್ಲೆಯಪ್ರದಲ್ಲಿ ಧೂಳಿನೊಳಗೆ ಹೊರಳಾಡಿರಿ.
11 Be uncovered and go away, you who are living in Shaphir: the one living in Zaanan has not come out of her town; Beth-ezel is taken away from its base, even from its resting-place.
೧೧ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.
12 For the one living in Maroth is waiting for good: for evil has come down from the Lord to the doorways of Jerusalem.
೧೨ಕೇಡು ಯೆಹೋವನಿಂದ ಹೊರಟು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ತಮಗೆ ಮೇಲುಂಟಾಗುವುದಿಲ್ಲವೋ ಎಂದು ವೇದನೆಪಡುತ್ತಾರೆ.
13 Let the war-carriage be yoked to the quick-running horse, you who are living in Lachish: she was the first cause of sin to the daughter of Zion; for the wrongdoings of Israel were seen in you.
೧೩ಲಾಕೀಷಿನವರೇ ಅಶ್ವಗಳನ್ನು ರಥಕ್ಕೆ ಕಟ್ಟಿರಿ. ನಿಮ್ಮ ಊರೇ ಚೀಯೋನ್ ನಗರಿಯ ಪಾಪಕ್ಕೆ ಮೂಲ, ಹೌದು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿಬಂದವು.
14 For this cause give a parting offering to Moresheth-gath: the daughter of Achzib will be a deceit to the king of Israel.
೧೪ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.
15 Even now will the taker of your heritage come to you, you who are living in Mareshah: the glory of Israel will come to destruction for ever.
೧೫ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಾಯೇಲಿನ ನಾಯಕರು ಅದುಲ್ಲಾಮ್ ಪಟ್ಟಣಕ್ಕೆ ಸೇರುವುದು.
16 Let your head be uncovered and your hair cut off in sorrow for the children of your delight: let the hair be pulled from your head like an eagle's; for they have been taken away from you as prisoners.
೧೬ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.