< Proverbs 24 >
1 Have no envy for evil men, or any desire to be with them:
೧ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
2 For the purposes of their hearts are destruction, and their lips are talking of trouble.
೨ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
3 The building of a house is by wisdom, and by reason it is made strong:
೩ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
4 And by knowledge its rooms are full of all dear and pleasing things.
೪ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
5 A wise man is strong; and a man of knowledge makes strength greater.
೫ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
6 For by wise guiding you will overcome in war: and in a number of wise guides there is salvation.
೬ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
7 Wisdom is outside the power of the foolish: he keeps his mouth shut in the public place.
೭ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
8 He whose purposes are bad will be named a man of evil designs.
೮ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
9 The purpose of the foolish is sin: and the hater of authority is disgusting to others.
೯ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
10 If you give way in the day of trouble, your strength is small.
೧೦ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
11 Be the saviour of those who are given up to death, and do not keep back help from those who are slipping to destruction.
೧೧ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
12 If you say, See, we had no knowledge of this: does not the tester of hearts give thought to it? and he who keeps your soul, has he no knowledge of it? and will he not give to every man the reward of his work?
೧೨“ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
13 My son, take honey, for it is good; and the flowing honey, which is sweet to your taste:
೧೩ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
14 So let your desire be for wisdom: if you have it, there will be a future, and your hope will not be cut off.
೧೪ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
15 Do not keep a secret watch, O evil-doer, against the fields of the upright man, or send destruction on his resting-place:
೧೫ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
16 For an upright man, after falling seven times, will get up again: but trouble is the downfall of the evil.
೧೬ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
17 Do not be glad at the fall of your hater, and let not your heart have joy at his downfall:
೧೭ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
18 For fear that the Lord may see it, and it may be evil in his eyes, and his wrath may be turned away from him.
೧೮ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
19 Do not be troubled because of evil-doers, or have envy of sinners:
೧೯ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
20 For there will be no future for the evil man; the light of sinners will be put out.
೨೦ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.
21 My son, go in fear of the Lord and the king: have nothing to do with those who are in high positions:
೨೧ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
22 For their downfall will come suddenly; and who has knowledge of the destruction of those in high positions?
೨೨ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
23 These are more sayings of the wise: To have respect for a person's position when judging is not good.
೨೩ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
24 He who says to the evil-doer, You are upright, will be cursed by peoples and hated by nations.
೨೪ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
25 But those who say sharp words to him will have delight, and a blessing of good will come on them.
೨೫ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
26 He gives a kiss with his lips who gives a right answer.
೨೬ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
27 Put your work in order outside, and make it ready in the field; and after that, see to the building of your house.
೨೭ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
28 Do not be a violent witness against your neighbour, or let your lips say what is false.
೨೮ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
29 Say not, I will do to him as he has done to me; I will give the man the reward of his work.
೨೯“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
30 I went by the field of the hater of work, and by the vine-garden of the man without sense;
೩೦ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
31 And it was all full of thorns, and covered with waste plants, and its stone wall was broken down.
೩೧ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
32 Then looking at it, I gave thought: I saw, and I got teaching from it.
೩೨ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
33 A little sleep, a little rest, a little folding of the hands in sleep:
೩೩ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
34 So loss will come on you like an outlaw, and your need like an armed man.
೩೪ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.