< Psalms 77 >
1 To the chief music-maker. After Jeduthun. Of Asaph. A Psalm. I was crying to God with my voice; even to God with my voice, and he gave ear to me.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ. ದೇವರಿಗೆ ಮೊರೆಯಿಡುವೆನು, ಕೂಗಿ ಮೊರೆಯಿಡುವೆನು; ಆತನು ನನಗೆ ಕಿವಿಗೊಡುವನು.
2 In the day of my trouble, my heart was turned to the Lord: my hand was stretched out in the night without resting; my soul would not be comforted.
೨ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.
3 I will keep God in memory, with sounds of grief; my thoughts are troubled, and my spirit is overcome. (Selah)
೩ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.
4 You keep my eyes from sleep; I am so troubled that no words come.
೪ನಾನು ರೆಪ್ಪೆಗಳನ್ನು ಮುಚ್ಚದಂತೆ ನೀನು ಮಾಡಿದಿ. ತಳಮಳಗೊಂಡು ಮಾತನಾಡಲಾರದೆ ಇದ್ದೆನು.
5 My thoughts go back to the days of the past, to the years which are gone.
೫ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.
6 The memory of my song comes back to me in the night; my thoughts are moving in my heart; my spirit is searching with care.
೬ನಾನು ರಾತ್ರಿಯಲ್ಲಿ ಮಾಡುತ್ತಿದ್ದ ಗಾನವನ್ನು ನೆನಪಿಸಿಕೊಳ್ಳುವೆನು, ನನ್ನ ಆಂತರ್ಯದಲ್ಲಿ ಮಾತನಾಡಿಕೊಳ್ಳುವೆನು ಅಂದುಕೊಂಡು ನನ್ನ ಮನಸ್ಸಿನಲ್ಲಿ,
7 Will the Lord put me away for ever? will he be kind no longer?
೭“ಕರ್ತನು ಸದಾಕಾಲಕ್ಕೂ ಬಿಟ್ಟೇಬಿಡುವನೋ? ಆತನು ಪುನಃ ಪ್ರಸನ್ನನಾಗುವುದಿಲ್ಲವೋ?
8 Is his mercy quite gone for ever? has his word come to nothing?
೮ಆತನ ಕೃಪಾವಾತ್ಸಲ್ಯವು ನಿಂತೇ ಹೋಯಿತೋ? ಆತನ ವಾಗ್ದಾನವು ಎಂದೆಂದಿಗೂ ಬಿದ್ದೇ ಹೋಯಿತೋ?
9 Has God put away the memory of his pity? are his mercies shut up by his wrath? (Selah)
೯ದೇವರು ದಯೆ ತೋರಿಸಲಿಕ್ಕೆ ಮರೆತುಬಿಟ್ಟನೋ? ಕೋಪದಿಂದ ತನ್ನ ಕರಳುಗಳನ್ನು ಬಿಗಿಹಿಡಿದಿದ್ದಾನೋ?” ಎಂದು ಅಂದುಕೊಂಡೆನು (ಸೆಲಾ)
10 And I said, It is a weight on my spirit; but I will keep in mind the years of the right hand of the Most High.
೧೦ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.
11 I will keep in mind the works of Jah: I will keep the memory of your wonders in the past.
೧೧ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.
12 I will give thought to all your work, while my mind goes over your acts of power.
೧೨ನಿನ್ನ ಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು; ನಿನ್ನ ಪ್ರವರ್ತನೆಗಳನ್ನು ಸ್ಮರಿಸುವೆನು” ಅಂದುಕೊಂಡೆನು.
13 Your way, O God, is holy: what god is so great as our God?
೧೩ದೇವರೇ, ನಿನ್ನ ಮಾರ್ಗವು ಪರಿಶುದ್ಧವಾದುದು. ನಮ್ಮ ದೇವರಂತೆ ಮಹತ್ವವುಳ್ಳ ದೇವರು ಯಾರು?
14 You are the God who does works of power: you have made your strength clear to the nations.
೧೪ಅದ್ಭುತಗಳನ್ನು ನಡೆಸುವ ದೇವರು ನೀನೇ; ಜನಾಂಗಗಳಲ್ಲಿ ಪರಾಕ್ರಮವನ್ನು ತೋರ್ಪಡಿಸಿದಿ.
15 With your arm you have made your people free, the sons of Jacob and Joseph. (Selah)
೧೫ಯಾಕೋಬ ಮತ್ತು ಯೋಸೇಫರ ವಂಶದವರಾದ ನಿನ್ನ ಪ್ರಜೆಯನ್ನು, ಭುಜಬಲದಿಂದ ಬಿಡುಗಡೆಮಾಡಿದಿ. (ಸೆಲಾ)
16 The waters saw you, O God; the waters saw you, they were in fear: even the deep was troubled.
೧೬ದೇವರೇ, ಜಲರಾಶಿಗಳು ನಿನ್ನನ್ನು ಕಂಡವು; ಕಾಣುತ್ತಲೇ ತಳಮಳಗೊಂಡು ತಳದವರೆಗೂ ಅಲ್ಲಕಲ್ಲೋಲವಾದವು.
17 The clouds sent out water; the skies gave out a sound; truly, your arrows went far and wide.
೧೭ಮೇಘಮಂಡಲವು ಮಳೆಗರೆಯಿತು; ಆಕಾಶವು ಗರ್ಜಿಸಿತು; ನಿನ್ನ ಬಾಣಗಳು ಎಲ್ಲಾ ಕಡೆಯೂ ಹಾರಿದವು.
18 The voice of your thunder went rolling on; the world was flaming with the light of the storm; the earth was shaking.
೧೮ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂಮಿಯು ಅಲ್ಲಾಡಿ ಕಂಪಿಸಿತು.
19 Your way was in the sea, and your road in the great waters; there was no knowledge of your footsteps.
೧೯ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.
20 You were guiding your people like a flock, by the hand of Moses and Aaron.
೨೦ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.