< Song of Solomon 8 >
1 Oh that you were my brother, who took milk from my mother's breasts! When I came to you in the street, I would give you kisses; yes, I would not be looked down on.
೧ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.
2 I would take you by the hand into my mother's house, and she would be my teacher. I would give you drink of spiced wine, drink of the pomegranate.
೨ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು, ಅಲ್ಲಿ ಆಕೆಯು ನಿನಗೆ ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.
3 His left hand would be under my head, and his right hand about me.
೩ಆಗ ನಿನ್ನ ಎಡಗೈ ನನಗೆ ತಲೆದಿಂಬಾಗಿ ಬಲಗೈ ನನ್ನನ್ನು ತಬ್ಬುತ್ತಿತ್ತು.
4 I say to you, O daughters of Jerusalem, do not let love be moved till it is ready.
೪ಯೆರೂಸಲೇಮಿನ ಮಹಿಳೆಯರೇ, ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
5 Who is this, who comes up from the waste places, resting on her loved one? It was I who made you awake under the apple-tree, where your mother gave you birth; there she was in pain at your birth.
೫ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.
6 Put me as a sign on your heart, as a sign on your arm; love is strong as death, and wrath bitter as the underworld: its coals are coals of fire; violent are its flames. (Sheol )
೬ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. (Sheol )
7 Much water may not put out love, or the deep waters overcome it: if a man would give all the substance of his house for love, it would be judged a price not great enough.
೭ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು, ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ ತಿರಸ್ಕಾರ.
8 We have a young sister, and she has no breasts; what are we to do for our sister in the day when she is given to a man?
೮ಸ್ತನಬಾರದ ತಂಗಿಯು ನಮಗುಂಟು; ಅವಳನ್ನು ವರಿಸಲು ಯಾರಾದರು ಬಂದರೆ ಅವಳ ಹಿತಕ್ಕೆ ಏನು ಮಾಡೋಣ?
9 If she is a wall, we will make on her a strong base of silver; and if she is a door, we will let her be shut up with cedar-wood.
೯ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.
10 I am a wall, and my breasts are like towers; then was I in his eyes as one to whom good chance had come.
೧೦ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.
11 Solomon had a vine-garden at Baal-hamon; he let out the vine-garden to keepers; every one had to give a thousand bits of silver for its fruit.
೧೧ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು, ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು.
12 My vine-garden, which is mine, is before me: you, O Solomon, will have the thousand, and those who keep the fruit of them two hundred.
೧೨ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.
13 You who have your resting-place in the gardens, the friends give ear to your voice; make me give ear to it.
೧೩ಉದ್ಯಾನದಲ್ಲಿ ವಾಸಿಸುವವಳೇ ಗೆಳೆಯರು ನಿನ್ನ ಧ್ವನಿ ಕೇಳಬೇಕೆಂದಿದ್ದಾರೆ, ನನಗೂ ಆ ಧ್ವನಿ ಕೇಳಿಸಲಿ.
14 Come quickly, my loved one, and be like a roe on the mountains of spice.
೧೪ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.