< 1 Kings 2 >
1 Now the days of David had drawn near, so that he would die, and he instructed his son Solomon, saying:
೧ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
2 “I am entering the way of all the earth. Be strengthened and be a good man.
೨“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
3 And observe the care of the Lord your God, so that you walk in his ways, so that you care for his ceremonies, and his precepts, and judgments, and testimonies, just as it is written in the law of Moses. So may you understand everything that you do, in any direction that you may turn yourself.
೩ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
4 So may the Lord confirm his words, which he has spoken about me, saying: ‘If your sons will guard their ways, and if they will walk before me in truth, with all their heart and with all their soul, there shall not be taken away from you a man on the throne of Israel.’
೪ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
5 Also, you know what Joab, the son of Zeruiah, has done to me, what he did to the two leaders of the army of Israel, to Abner, the son of Ner, and to Amasa, the son of Jether. He killed them, and so he shed the blood of war in peace time, and he set the bloodshed of battle on his belt, which was around his waist, and in his shoes, which were on his feet.
೫ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
6 Therefore, act according to your wisdom. And you shall not allow his gray head to be led away to death in peace. (Sheol )
೬ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು. (Sheol )
7 Then, too, repay grace to the sons of Barzillai the Gileadite. And you shall allow them to eat at your table. For they met me when I fled from the face of Absalom, your brother.
೭ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
8 Also, you have with you Shimei, the son of Gera, the son of Benjamin, from Bahurim, who cursed me with a grievous curse, when I went away to the camp. And he descended to meet me when I crossed over the Jordan, and I swore to him by the Lord, saying, ‘I will not put you to death by the sword,’
೮ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
9 yet do not choose to treat him as if he were innocent. Since you are a wise man, you will know what to do with him. And you shall lead away his grey hair to death with blood.” (Sheol )
೯ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ” ಎಂದು ಹೇಳಿದನು. (Sheol )
10 And so, David slept with his fathers, and he was buried in the city of David.
೧೦ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
11 Now the days during which David reigned over Israel are forty years: he reigned seven years in Hebron, thirty-three in Jerusalem.
೧೧ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
12 Then Solomon sat upon the throne of his father David, and his kingdom was strengthened exceedingly.
೧೨ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
13 And Adonijah, the son of Haggith, entered to Bathsheba, the mother of Solomon. And she said to him, “Is your entrance peaceful?” He responded, “It is peaceful.”
೧೩ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, “ನೀನು ಸಮಾಧಾನದಿಂದ ಬಂದಿರುವೆಯೋ?” ಎಂದು ಕೇಳಿದಳು. ಅವನು, “ಹೌದು ಸಮಾಧಾನದಿಂದ ಬಂದೆನು” ಎಂದನು.
14 And he added, “My word is for you.” She said to him, “Speak.” And he said:
೧೪ಆಮೇಲೆ ಅವನು, “ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ” ಎಂದನು. ಅದಕ್ಕೆ ಆಕೆಯು, “ಹೇಳು” ಎಂದಳು.
15 “You know that the kingdom was mine, and that all of Israel had preferred me for themselves as king. But the kingdom was transferred, and has become my brother’s. For it was appointed to him by the Lord.
೧೫ಆಗ ಅವನು, “ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.
16 Now therefore, I beg of you one petition. May you not confound my face.” And she said to him, “Speak.”
೧೬ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.
17 And he said: “I beg that you may speak to king Solomon, for he is not able to refuse anything to you, so that he may give Abishag the Shunammite to me as wife.”
೧೭ಆಗ ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ” ಎಂದನು.
18 And Bathsheba said: “It is well. I will speak to the king on your behalf.”
೧೮ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು.
19 Then Bathsheba went to king Solomon, so that she might speak to him on behalf of Adonijah. And the king rose up to meet her, and he reverenced her, and he sat down upon his throne. And a throne was stationed for the mother of the king, and she sat at his right hand.
೧೯ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
20 And she said to him: “I petition one small request from you. May you not confound my face.” And the king said to her: “Ask, my mother. For it is not right that I turn away your face.”
೨೦ಆಗ ಆಕೆಯು, “ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ” ಎಂದು ಹೇಳಿದಳು. ಅರಸನು, “ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ” ಎಂದನು.
21 And she said, “Let Abishag the Shunammite be given to Adonijah, your brother, as wife.”
೨೧ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
22 And king Solomon responded, and he said to his mother: “Why do you request Abishag the Shunammite for Adonijah? Why not request the kingdom for him! For he is my older brother, and he has Abiathar, the priest, and Joab, the son of Zeruiah.”
೨೨ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ” ಎಂದು ಉತ್ತರಕೊಟ್ಟನು.
23 And so king Solomon swore by the Lord, saying: “May God do these things to me, and may he add these other things! For Adonijah has spoken this word against his own life.
೨೩ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
24 And now, as the Lord lives, who has confirmed me and placed me upon the throne of my father David, and who, just as he said, has made a house for me: Adonijah shall be put to death this day.”
೨೪ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
25 And king Solomon sent by the hand of Benaiah, the son of Jehoiada, who put him to death, and so he died.
೨೫ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
26 Also, the king said to Abiathar, the priest: “Go into Anathoth, to your own land, for you are a man worthy of death. But I will not put you to death this day, since you carried the ark of the Lord God before David, my father, and since you have endured hardship in all the things, for which my father labored.”
೨೬ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ” ಎಂದು ಹೇಳಿದನು.
27 Therefore, Solomon cast out Abiathar, so that he would not be the priest of the Lord, so that the word of the Lord might be fulfilled, which he spoke over the house of Eli at Shiloh.
೨೭ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
28 And the news came to Joab, for Joab had turned aside after Adonijah, and he had not turned aside after Solomon. And so, Joab fled into the tabernacle of the Lord, and he took hold of the horn of the altar.
೨೮ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
29 And it was reported to king Solomon that Joab had fled into the tabernacle of the Lord, and that he was beside the altar. And Solomon sent Benaiah, the son of Jehoiada, saying, “Go, put him to death.”
೨೯ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, “ಹೋಗಿ ಅವನನ್ನು ಕೊಂದು ಹಾಕು” ಎಂದು ಆಜ್ಞಾಪಿಸಿದನು.
30 And Benaiah went to the tabernacle of the Lord, and he said to him: “The king says this: ‘Come out.’” But he said: “I will not come out. Instead, I will die here.” Benaiah sent word back to the king, saying, “Joab said this, and he responded to me in this way.”
೩೦ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ” ಎಂದು ಹೇಳಲು ಅವನು “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
31 And the king said to him, “Do just as he has said. And put him to death, and bury him. And so shall you take away the innocent blood, which was shed by Joab, from me and from my father’s house.
೩೧ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
32 And the Lord shall repay his blood upon his own head. For he killed two men, just and better than himself, and he killed them with the sword, while my father, David, did not know it: Abner, the son of Ner, leader of the military of Israel, and Amasa, the son of Jether, leader of the army of Judah.
೩೨ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
33 And their blood shall be turned back upon the head of Joab, and upon the head of his offspring forever. But as for David, and his offspring and house, and his throne, may there be peace from the Lord, even unto eternity.”
೩೩ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
34 And so Benaiah, the son of Jehoiada, went up and, attacking him, put him to death. And he was buried in his own house in the desert.
೩೪ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
35 And the king appointed Benaiah, the son of Jehoiada, in his place over the army. And he appointed Zadok, the priest, in place of Abiathar.
೩೫ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
36 Also, the king sent for and summoned Shimei, and he said to him: “Build a house for yourself in Jerusalem, and live there. And do not depart from that place to here or to there.
೩೬ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
37 For on whatever day you will have departed and crossed the torrent Kidron, know that you shall be put to death. Your blood will be upon your own head.”
೩೭ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.
38 And Shimei said to the king: “The word is good. Just as my lord the king has said, so will your servant do.” And so Shimei lived in Jerusalem for many days.
೩೮ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.
39 But it happened that, after three years, the servants of Shimei fled to Achish, the son of Maacah, the king of Gath. And it was reported to Shimei that his servants had gone away to Gath.
೩೯ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
40 And Shimei rose up, and he saddled his donkey. And went away to Achish in Gath, in order to seek his servants. And he led them away from Gath.
೪೦ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
41 And it was reported to Solomon that Shimei had gone away from Jerusalem to Gath, and had returned.
೪೧ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
42 And sending, he summoned him, and he said to him: “Did I not testify to you by the Lord, and warn you in advance, ‘On whatever day, having departed, you go forth to here or to there, know that you shall die?’ And you responded to me, ‘The word that I have heard is good.’
೪೨“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, ‘ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ’ ಎಂದು ಹೇಳಿದಿಯಲ್ಲಾ.
43 Then why have you not kept the oath to the Lord, and the commandment which I instructed to you?”
೪೩ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ” ಎಂದನು.
44 And the king said to Shimei: “You know all the evil, of which your heart is conscious, which you did to David, my father. The Lord has repaid your wickedness upon your own head.”
೪೪ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
45 And king Solomon shall be blessed, and the throne of David shall be established before the Lord, even forever.
೪೫ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,
46 And so the king commanded Benaiah, the son of Jehoiada. And going out, he struck him down, and he died.
೪೬ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.