< Micah 2 >
1 Woe to you who devise useless things and who work evil in your beds. In the morning light, they undertake it, because their hand is against God.
೧ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
2 And they have desired fields and have taken them by violence, and they have stolen houses. And they have made false accusations against a man and his house, a man and his inheritance.
೨ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.
3 For this reason, thus says the Lord: Behold, I devise an evil against this family, from which you will not steal away your necks. And you will not walk in arrogance, because this is a most wicked time.
೩ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.
4 In that day, a parable will be taken up about you, and a song will be sung with sweetness, saying: “We have been devastated by depopulation.” The fate of my people has been altered. How can he withdraw from me, when he might be turned back, he who might tear apart our country?
೪ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.
5 Because of this, there will be for you no casting of the cord of fate in the assembly of the Lord.
೫ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.
6 Do not speak by saying, “It will not drop on these ones; shame will not embrace them.”
೬ಆಹಾ, ಆ ಕೆಡುಕರು “ಪ್ರವಾದನೆ ಮಾಡಬೇಡಿರಿ. ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು, ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
7 The house of Jacob says, “Has the Spirit of the Lord been weakened, or are such things his thoughts?” Are not my words good for him who walks uprightly?
೭ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.
8 But, to the contrary, my people have risen up in opposition. You have lifted the cover from the undergarment, and those who passed by harmlessly, you have converted into war.
೮ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.
9 You have evicted the women among my people from their delicate houses. You have taken my praise forever from their little ones.
೯ನನ್ನ ಜನರ ಸ್ತ್ರೀಯರನ್ನು, ಅವರ ಪ್ರಿಯವಾದ ಮನೆಗಳಿಂದ ತಳ್ಳಿಹಾಕುತ್ತೀರಿ. ಅವರ ಸಣ್ಣ ಮಕ್ಕಳಿಗೆ ನನ್ನ ಆಶೀರ್ವಾದದ ಹಕ್ಕನ್ನು ಇನ್ನೆಂದಿಗೂ ಸಿಕ್ಕದಂತೆ ತಪ್ಪಿಸುತ್ತೀರಿ.
10 Rise and depart, for there is no relief for you here. Because of its uncleanness, it will be corrupted with a most wicked decay.
೧೦ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.
11 I wish that I were not a man who has breath, and that I rather spoke a lie. I will drop it down to you in wine and in drunkenness. And it will be this people on whom it will rain down.
೧೧ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.
12 I will gather together in a congregation all of you, Jacob. I will lead together as one, the remnant of Israel. I will set them together like a flock in the fold, like a sheep in the midst of the sheep pen. They will cause a tumult before the multitude of men.
೧೨ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.
13 For he will ascend, opening the way before them. They will separate, and they will cross the gate and enter through it. And their king will pass by, before their very eyes, and the Lord will be at their head.
೧೩ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.