< Ephesians 4 >
1 I, the prisoner in [the] Lord, exhort you therefore to walk worthy of the calling wherewith ye have been called,
೧ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 with all lowliness and meekness, with long-suffering, bearing with one another in love;
೨ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.
3 using diligence to keep the unity of the Spirit in the uniting bond of peace.
೩ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.
4 [There is] one body and one Spirit, as ye have been also called in one hope of your calling;
೪ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,
5 one Lord, one faith, one baptism;
೫ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ,
6 one God and Father of all, who is over all, and through all, and in us all.
೬ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ. ಆತನು ಎಲ್ಲರ ಮೇಲಿರುವವನೂ, ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ, ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ.
7 But to each one of us has been given grace according to the measure of the gift of the Christ.
೭ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.
8 Wherefore he says, Having ascended up on high, he has led captivity captive, and has given gifts to men.
೮ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
9 But that he ascended, what is it but that he also descended into the lower parts of the earth?
೯“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?
10 He that descended is the same who has also ascended up above all the heavens, that he might fill all things;
೧೦ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ.
11 and he has given some apostles, and some prophets, and some evangelists, and some shepherds and teachers,
೧೧ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.
12 for the perfecting of the saints; with a view to [the] work of [the] ministry, with a view to the edifying of the body of Christ;
೧೨ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
13 until we all arrive at the unity of the faith and of the knowledge of the Son of God, at [the] full-grown man, at [the] measure of the stature of the fulness of the Christ;
೧೩ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
14 in order that we may be no longer babes, tossed and carried about by every wind of that teaching [which is] in the sleight of men, in unprincipled cunning with a view to systematized error;
೧೪ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
15 but, holding the truth in love, we may grow up to him in all things, who is the head, the Christ:
೧೫ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
16 from whom the whole body, fitted together, and connected by every joint of supply, according to [the] working in [its] measure of each one part, works for itself the increase of the body to its self-building up in love.
೧೬ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
17 This I say therefore, and testify in [the] Lord, that ye should no longer walk as [the rest of] the nations walk in [the] vanity of their mind,
೧೭ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
18 being darkened in understanding, estranged from the life of God by reason of the ignorance which is in them, by reason of the hardness of their hearts,
೧೮ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
19 who having cast off all feeling, have given themselves up to lasciviousness, to work all uncleanness with greedy unsatisfied lust.
೧೯ಅವರು ಲಜ್ಜೆಗೆಟ್ಟವರಾಗಿ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
20 But ye have not thus learnt the Christ,
೨೦ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.
21 if ye have heard him and been instructed in him according as [the] truth is in Jesus;
೨೧ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.
22 [namely] your having put off according to the former conversation the old man which corrupts itself according to the deceitful lusts;
೨೨ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
23 and being renewed in the spirit of your mind;
೨೩ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
24 and [your] having put on the new man, which according to God is created in truthful righteousness and holiness.
೨೪ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
25 Wherefore, having put off falsehood, speak truth every one with his neighbour, because we are members one of another.
೨೫ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
26 Be angry, and do not sin; let not the sun set upon your wrath,
೨೬“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
27 neither give room for the devil.
೨೭ಸೈತಾನನಿಗೆ ಅವಕಾಶಕೊಡಬೇಡಿರಿ.
28 Let the stealer steal no more, but rather let him toil, working what is honest with [his] hands, that he may have to distribute to him that has need.
೨೮ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
29 Let no corrupt word go out of your mouth, but if [there be] any good one for needful edification, that it may give grace to those that hear [it].
೨೯ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
30 And do not grieve the Holy Spirit of God, with which ye have been sealed for [the] day of redemption.
೩೦ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
31 Let all bitterness, and heat of passion, and wrath, and clamour, and injurious language, be removed from you, with all malice;
೩೧ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
32 and be to one another kind, compassionate, forgiving one another, so as God also in Christ has forgiven you.
೩೨ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.