< Hebrews 2 >
1 For this reason we should give heed more abundantly to the things [we have] heard, lest in any way we should slip away.
೧ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.
2 For if the word which was spoken by angels was firm, and every transgression and disobedience received just retribution,
೨ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.
3 how shall we escape if we have been negligent of so great salvation, which, having had its commencement in being spoken [of] by the Lord, has been confirmed to us by those who have heard;
೩ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.
4 God bearing, besides, witness with [them] to [it], both by signs and wonders, and various acts of power, and distributions of [the] Holy Spirit, according to his will?
೪ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.
5 For he has not subjected to angels the habitable world which is to come, of which we speak;
೫ನಾವು ಪ್ರಸ್ತಾಪಿಸುತ್ತಿರುವ ಭವಿಷ್ಯತ್ತಿನ ಲೋಕವನ್ನು ದೇವರು ತನ್ನ ದೇವದೂತರಿಗೆ ಅಧೀನ ಮಾಡಿಕೊಡಲಿಲ್ಲ.
6 but one has testified somewhere, saying, What is man, that thou rememberest him, or son of man that thou visitest him?
೬“ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?
7 Thou hast made him some little inferior to the angels; thou hast crowned him with glory and honour, [and hast set him over the works of thy hands; ]
೭ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ.
8 thou hast subjected all things under his feet. For in subjecting all things to him, he has left nothing unsubject to him. But now we see not yet all things subjected to him,
೮ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.
9 but we see Jesus, who [was] made some little inferior to angels on account of the suffering of death, crowned with glory and honour; so that by the grace of God he should taste death for every thing.
೯ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.
10 For it became him, for whom [are] all things, and by whom [are] all things, in bringing many sons to glory, to make perfect the leader of their salvation through sufferings.
೧೦ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.
11 For both he that sanctifies and those sanctified [are] all of one; for which cause he is not ashamed to call them brethren,
೧೧ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.
12 saying, I will declare thy name to my brethren; in [the] midst of [the] assembly will I sing thy praises.
೧೨“ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,
13 And again, I will trust in him. And again, Behold, I and the children which God has given me.
೧೩“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.
14 Since therefore the children partake of blood and flesh, he also, in like manner, took part in the same, that through death he might annul him who has the might of death, that is, the devil;
೧೪ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,
15 and might set free all those who through fear of death through the whole of their life were subject to bondage.
೧೫ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.
16 For he does not indeed take hold of angels [by the hand], but he takes hold of the seed of Abraham.
೧೬ನಿಜವಾಗಿಯೂ ಆತನು ದೇವದೂತರಿಗೆ ಸಹಾಯ ಮಾಡುವುದಕ್ಕಾಗಿ ಅಲ್ಲ, ಅಬ್ರಹಾಮನ ಸಂತತಿಯವರಿಗೆ ಸಹಾಯ ಮಾಡುವುದಕ್ಕಾಗಿ ಬಂದನಷ್ಟೆ.
17 Wherefore it behoved him in all things to be made like to [his] brethren, that he might be a merciful and faithful high priest in things relating to God, to make propitiation for the sins of the people;
೧೭ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.
18 for, in that himself has suffered, being tempted, he is able to help those that are being tempted.
೧೮ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.