< James 3 >

1 Be not many teachers, my brethren, knowing that we shall receive greater judgment.
ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.
2 For we all often offend. If any one offend not in word, he [is] a perfect man, able to bridle the whole body too.
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
3 Behold, we put the bits in the mouths of the horses, that they may obey us, and we turn round their whole bodies.
ಕುದುರೆಗಳು ನಮ್ಮ ಇಚ್ಚೆಯಂತೆ ನಡೆಯುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವೆ. ಆಗ ಅವುಗಳ ದೇಹವನ್ನೆಲ್ಲಾ ನಮಗೆ ಬೇಕಾದ ಕಡೆಗೆ ತಿರುಗಿಸುವುದಕ್ಕೆ ಆಗುತ್ತದೆ.
4 Behold also the ships, which are so great, and driven by violent winds, are turned about by a very small rudder, wherever the pleasure of the helmsman will.
ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ.
5 Thus also the tongue is a little member, and boasts great things. See how little a fire, how large a wood it kindles!
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.
6 and the tongue [is] fire, the world of unrighteousness; the tongue is set in our members, the defiler of the whole body, and which sets fire to the course of nature, and is set on fire of hell. (Geenna g1067)
ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. (Geenna g1067)
7 For every species both of beasts and of birds, both of creeping things and of sea animals, is tamed and has been tamed by the human species;
ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
8 but the tongue can no one among men tame; [it is] an unsettled evil, full of death-bringing poison.
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.
9 Therewith bless we the Lord and Father, and therewith curse we men made after [the] likeness of God.
ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.
10 Out of the same mouth goes forth blessing and cursing. It is not right, my brethren, that these things should be thus.
೧೦ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,
11 Does the fountain, out of the same opening, pour forth sweet and bitter?
೧೧ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ?
12 Can, my brethren, a fig produce olives, or a vine figs? Neither [can] salt [water] make sweet water.
೧೨ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
13 Who [is] wise and understanding among you; let him shew out of a good conversation his works in meekness of wisdom;
೧೩ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
14 but if ye have bitter emulation and strife in your hearts, do not boast and lie against the truth.
೧೪ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
15 This is not the wisdom which comes down from above, but earthly, natural, devilish.
೧೫ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.
16 For where emulation and strife [are], there [is] disorder and every evil thing.
೧೬ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.
17 But the wisdom from above first is pure, then peaceful, gentle, yielding, full of mercy and good fruits, unquestioning, unfeigned.
೧೭ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
18 But [the] fruit of righteousness in peace is sown for them that make peace.
೧೮ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

< James 3 >