< Zechariah 1 >
1 In the eighth month, in the second year of Darius, came the word of Jehovah unto Zechariah the prophet, the son of Berechiah, the son of Iddo, saying,
೧ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಯೆಹೋವನು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಅದ ಜೆಕರ್ಯನೆಂಬ ಪ್ರವಾದಿಗೆ ಈ ವಾಕ್ಯವನ್ನು ದಯಪಾಲಿಸಿದನು.
2 Jehovah hath been very wroth with your fathers.
೨ಅದೇನೆಂದರೆ, “ಯೆಹೋವನು ನಿಮ್ಮ ಪೂರ್ವಿಕರ ಮೇಲೆ ಬಹು ಕೋಪಗೊಂಡಿದ್ದಾನೆ.
3 And thou shalt say unto them, Thus saith Jehovah of hosts: Return unto me, saith Jehovah of hosts, and I will return unto you, saith Jehovah of hosts.
೩ಆದಕಾರಣ ನೀನು ನಿನ್ನ ಜನರಿಗೆ ಹೀಗೆ ಹೇಳು, ‘ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ನನ್ನ ಕಡೆಗೆ ಪುನಃ ತಿರುಗಿಕೊಳ್ಳಿರಿ’” ಇದು ಸೇನಾಧೀಶ್ವರನಾದ ಯೆಹೋವನ ನುಡಿ, “ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
4 Be ye not as your fathers, unto whom the former prophets cried, saying, Thus saith Jehovah of hosts: Turn ye now from your evil ways, and from your evil doings; but they did not hearken nor attend unto me, saith Jehovah.
೪ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
5 Your fathers, where are they? and the prophets, do they live for ever?
೫“ನಿಮ್ಮ ಪೂರ್ವಿಕರು ಎಲ್ಲಿ? ಪ್ರವಾದಿಗಳು ಸದಾಕಾಲ ನಿತ್ಯನಿರಂತರವಾಗಿ ಇರುವರೇ?
6 But my words and my statutes, which I commanded my servants the prophets, did they not overtake your fathers? And they turned and said, Like as Jehovah of hosts thought to do unto us, according to our ways and according to our doings, so hath he dealt with us.
೬ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.
7 Upon the four and twentieth day of the eleventh month, which is the month Shebat, in the second year of Darius, came the word of Jehovah unto Zechariah the prophet, the son of Berechiah, the son of Iddo, saying,
೭ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಹನ್ನೊಂದನೆಯ ತಿಂಗಳಿನ ಅಂದರೆ ಶೆಬಾಟ್ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಯೆಹೋವನ ವಾಕ್ಯವು ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನಾದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂತು,
8 I saw by night, and behold, a man riding upon a red horse, and he stood among the myrtle-trees that were in the low valley; and behind him were red, bay, and white horses.
೮“ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನು ಹತ್ತಿದ ಒಬ್ಬ ಪುರುಷನು ತಗ್ಗಿನಲ್ಲಿರುವ ಸುಗಂಧವೃಕ್ಷಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು, ಕಂದು, ಬಿಳಿ ಕುದುರೆಗಳು ಮತ್ತು ಅವರ ಸವಾರರಿದ್ದರು.
9 And I said, My lord, what are these? And the angel that talked with me said unto me, I will shew thee what these are.
೯ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
10 And the man that stood among the myrtle-trees answered and said, These are they whom Jehovah hath sent to walk to and fro through the earth.
೧೦ಕೂಡಲೆ ಸುಗಂಧವೃಕ್ಷಗಳ ನಡುವೆ ನಿಂತಿದ್ದವನು, “ಇವರು ಲೋಕಸಂಚಾರಾರ್ಥವಾಗಿ ಯೆಹೋವನಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟನು.
11 And they answered the angel of Jehovah that stood among the myrtle-trees, and said, We have walked to and fro through the earth, and behold, all the earth sitteth still and is at rest.
೧೧ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಆ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು.
12 And the angel of Jehovah answered and said, Jehovah of hosts, how long wilt thou not have mercy on Jerusalem and on the cities of Judah, against which thou hast had indignation these seventy years?
೧೨ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
13 And Jehovah answered the angel that talked with me good words, comforting words.
೧೩ನನ್ನೊಂದಿಗೆ ಮಾತನಾಡಿದ ದೂತನಿಗೆ, ಯೆಹೋವನು ಕರುಣೆ ಹಾಗೂ ಒಳ್ಳೆಯ ಮಾತುಗಳಿಂದ ಉತ್ತರಕೊಟ್ಟನು.
14 And the angel that talked with me said unto me, Cry, saying, Thus saith Jehovah of hosts: I am jealous for Jerusalem and for Zion with a great jealousy,
೧೪ಆಗ ಆ ದೂತನು ನನಗೆ ಈ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
15 and I am wroth exceedingly with the nations that are at ease; for I was but a little wroth, and they helped forward the affliction.
೧೫ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ; ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
16 Therefore thus saith Jehovah: I am returned to Jerusalem with mercies: my house shall be built in it, saith Jehovah of hosts, and the line shall be stretched forth upon Jerusalem.
೧೬ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
17 Cry further, saying, Thus saith Jehovah of hosts: My cities shall yet overflow with prosperity, and Jehovah shall yet comfort Zion, and shall yet choose Jerusalem.
೧೭ಮತ್ತೊಮ್ಮೆ ಹೀಗೆ ಸಾರಿ ಹೇಳು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ನನ್ನ ಪಟ್ಟಣಗಳಲ್ಲಿ ಶುಭವು ತುಂಬಿ ತುಳುಕುವುದು; ಯೆಹೋವನು ಇನ್ನು ಚೀಯೋನನ್ನು ಸಂತೈಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.”
18 And I lifted up mine eyes, and saw, and behold four horns.
೧೮ನಾನು ಕಣ್ಣೆತ್ತಿ ನೋಡಲು ಇಗೋ, ನಾಲ್ಕು ಕೊಂಬುಗಳು ಕಾಣಿಸಿದವು.
19 And I said unto the angel that talked with me, What are these? And he said to me, These are the horns which have scattered Judah, Israel, and Jerusalem.
೧೯ವಿವರಿಸುವ ದೂತನನ್ನು ಕುರಿತು, “ಇವು ಏನು?” ಎಂದು ನಾನು ಕೇಳಿದ್ದಕ್ಕೆ ಅವನು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನು ಚದುರಿಸುವ ಕೊಂಬುಗಳು” ಎಂದು ಉತ್ತರಕೊಟ್ಟನು.
20 And Jehovah shewed me four craftsmen.
೨೦ಅನಂತರ ಯೆಹೋವನು ನನಗೆ ನಾಲ್ಕು ಮಂದಿ ಕಮ್ಮಾರರನ್ನು ತೋರಿಸಿದನು.
21 And I said, What come these to do? And he spoke, saying, Those are the horns which scattered Judah, so that no man lifted up his head; but these are come to affright them, to cast out the horns of the nations, which lifted up the horn against the land of Judah to scatter it.
೨೧ಆಗ ನಾನು, “ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಲು ಅವನು, “ಈ ಕೊಂಬುಗಳು ಯೆಹೂದದವರಲ್ಲಿ ಯಾರೂ ತಲೆಯೆತ್ತದಂತೆ ಅವರನ್ನು ಚದುರಿಸಿವೆಯಷ್ಟೆ; ಇವರಾದರೋ ಯೆಹೂದ ದೇಶದವರನ್ನು ಚದುರಿಸಬೇಕೆಂದು ತಲೆಯೆತ್ತಿದ ಜನಾಂಗಗಳ ಕೊಂಬುಗಳನ್ನು ಹೆದರಿಸಿ ಕೆಡುವುದಕ್ಕೆ ಬಂದಿದ್ದಾರೆ” ಎಂದು ಹೇಳಿದನು.