< 1 Kings 17 >

1 And Elias the Thesbite of the inhabitants of Galaad said to Achab: As the Lord liveth the God of Israel, in whose sight I stand, there shall not be dew nor rain these years, but according to the words of my mouth.
ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.
2 And the word of the Lord came to him, saying:
ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,
3 Get thee hence, and go towards the east and hide thyself by the torrent of Carith, which is over against the Jordan,
“ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.
4 And there thou shalt drink of the torrent: and I have commanded the ravens to feed thee there.
ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.
5 So he went, and did according to the word of the Lord: and going, he dwelt by the torrent Carith, which is over against the Jordan.
ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು.
6 And the ravens brought him bread and flesh in the morning, and bread and flesh in the evening, and he drank of tile torrent.
ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.
7 But after some time the torrent was dried up, for it had not rained upon the earth.
ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
8 Then the word of the Lord came to him, saying:
ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,
9 Arise, and go to Sarephta of the Sidonians, and dwell there: for I have commanded a widow woman there to feed thee.
“ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.
10 He arose, and went to Sarephta. And when he was come to the gate of the city, he saw the widow woman gathering sticks, and he called her, and said to her: Give me a little water in a vessel, that I may drink.
ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು.
11 And when she was going to fetch it he called after her, saying: Bring me also, I beseech thee, a morsel of bread in thy hand.
ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.
12 And she answered: As the Lord thy God liveth, I have no bread, but only a handful of meal in a pot, and a little oil in a cruse: behold I am gathering two sticks that I may go in and dress it, for me and my son, that we may eat it, and die.
ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.
13 And Elias said to her: Fear not, but go, and do as thou hast said: but first make for me of the same meal a little hearth cake, and bring it to me: and after make for thyself and thy son.
ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.
14 For thus saith the Lord the God of Israel: The pot of meal shall not waste, nor the cruse of oil be diminished, until the day wherein the Lord will give rain upon the face of the earth.
ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.
15 She went and did according to the word of Elias: and he ate, and she, and her house: and from that day
ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.
16 The pot of meal wasted not, and the cruse of oil was not diminished, according to the word of the Lord, which he spoke in the hand of Elias.
ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
17 And it came to pass after this that the son of the woman, the mistress of the house, fell sick, and the sickness was very grievous, so that there was no breath left in him.
ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
18 And she said to Elias: What have I to do with thee, thou man of God? art thou come to me that my iniquities should be remembered, and that thou shouldst kill my son?
ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.
19 And Elias said to her: Give me thy son. And he took him out of her bosom, and carried him into the upper chamber where he abode, and laid him upon his own bed.
ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.
20 And he cried to the Lord, and said: O Lord my God, hast thou afflicted also the widow, with whom I am after a so maintained, so as to kill her son?
“ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.
21 And he stretched, and measured himself upon the child three times, and cried to the Lord, and said: O Lord my God, let the soul of this child, I beseech thee, return into his body.
ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.
22 And the Lord heard the voice of Elias: and the soul of the child returned into him, and he revived.
ಯೆಹೋವ ದೇವರು ಎಲೀಯನ ಪ್ರಾರ್ಥನೆಯನ್ನು ಕೇಳಿದ್ದರಿಂದ ಬಾಲಕನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರುಗಿ ಬಂತು.
23 And Elias took the child, and brought him down from the upper chamber to the house below, and delivered him to his mother, and said to her: Behold thy son liveth.
ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.
24 And the woman said to Elias: Now, by this I know that thou art a man of God, and the word of the Lord in thy mouth is true.
ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.

< 1 Kings 17 >