< John 12 >
1 Six days before the Passover Jesus went to Bethany, to the home of Lazarus who had been raised from the dead.
೧ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.
2 There a dinner was arranged in his honor. Martha helped serve the food while Lazarus sat at the table with Jesus and the others guests.
೨ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು.
3 Mary brought a pint of pure nard perfume and anointed Jesus' feet, wiping them dry with her hair. The scent of the perfume filled the whole house.
೩ಆಗ ಮರಿಯಳು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು.
4 But one of the disciples, Judas Iscariot, who would later betray Jesus, asked,
೪ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು,
5 “Why wasn't this perfume sold and the money given to the poor? It was worth three hundred denarii.”
೫“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು.
6 He wasn't saying this because he cared about the poor but because he was a thief. He was the one who looked after the disciples' money and he often took some for himself.
೬ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.
7 “Don't criticize her,” Jesus replied. “She did this in preparation for the day of my burial.
೭ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ.
8 You'll always have the poor here with you, but you won't always have me here.”
೮ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9 A large crowd had found out that he was there. They came there not just to see Jesus but because they wanted to see Lazarus, the man Jesus had raised from the dead.
೯ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು.
10 So the chief priests planned to kill Lazarus as well,
೧೦ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
11 since it was because of him that many Jews were no longer following them but putting their trust in Jesus.
೧೧ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
12 The following day the crowds of people who had come for the Passover festival heard that Jesus was on his way to Jerusalem.
೧೨ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ
13 They cut off palm branches and went to welcome him, shouting, “Hosanna! Blessed is the one coming in the name of the Lord. Blessed is the king of Israel.”
೧೩ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.
14 Jesus found a young donkey and rode on it, as Scripture says:
೧೪ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು.
15 “Don't be afraid, daughter of Zion. Look, your king is coming, riding a donkey's colt.”
೧೫ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.
16 At the time, Jesus' disciples did not understand what these things meant. It was only later when he was glorified that they realized what had happened had been prophesied and applied to him.
೧೬ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು.
17 Many in the crowd had seen Jesus call Lazarus from the tomb and raise him from the dead and were telling the story.
೧೭ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು.
18 That was the reason so many people went to meet Jesus—because they had heard about this miracle.
೧೮ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು.
19 The Pharisees said to one other, “Look, we're getting nowhere. Everyone's running after him.”
೧೯ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
20 Now some Greeks had come to the festival to worship.
೨೦ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.
21 They came to Philip of Bethsaida in Galilee, and said, “Sir, we'd like to see Jesus.”
೨೧ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.
22 Philip went and told Andrew. Then they both went to Jesus and told him.
೨೨ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.
23 Jesus replied, “The time has come for the Son of man to be glorified.
೨೩ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.
24 I tell you the truth: unless a grain of wheat is planted in the soil and dies, it remains just one grain. But if it dies, it produces many more grains of wheat.
೨೪ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು
25 If you love your own life you will lose it, but if you don't love your own life in this world you will keep your life forever. (aiōnios )
೨೫ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. (aiōnios )
26 If you want to serve me you need to follow me. My servants will be where I am, and my Father will honor anyone who serves for me.
೨೬ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27 Now I am troubled. What should I say? ‘Father, save me from this coming time of suffering?’ No, for this is why I came—to go through this time of suffering.
೨೭ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?
28 Father, show the glory of your character.” A voice came from heaven, saying, “I have shown its glory, and I will show it again.”
೨೮ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
29 The crowd that was standing there heard it. Some said it thundered; others said an angel had spoken to him.
೨೯ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು.
30 Jesus told them, “This voice spoke not for my sake, but for yours.
೩೦ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು.
31 Now is the judgment of this world; now the prince of this world will be thrown out.
೩೧ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು
32 But when I am lifted up from the earth I will attract everyone to me.”
೩೨ಆದರೆನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
33 (He said this to point out the kind of death he was going to die.)
೩೩ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.
34 The crowd responded, “The Law tells us that the Messiah will live forever, so how can you say the Son of man must be ‘lifted up’? Who is this ‘Son of man’?” (aiōn )
೩೪ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. (aiōn )
35 Jesus replied, “The light is here with you for a little longer. Walk while you have the light so that the darkness doesn't overtake you. Those who walk in the dark don't know where they're going.
೩೫ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36 Put your trust in the light while you still have it so that you can become children of light.” When Jesus had told them this, he left and hid himself from them.
೩೬ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
37 But despite all the miracles he had done in their presence, they still did not trust in Jesus.
೩೭ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.
38 This fulfilled the message of Isaiah the prophet who said, “Lord, who has believed what we told them? To whom has the Lord's power been revealed?”
೩೮ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
39 They were not able to trust him, and as a result they fulfilled what Isaiah also said:
೩೯ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ,
40 “He blinded their eyes, and made their minds dull, so that their eyes would not see, and their minds would not think, and they would not turn to me—for if they did I would heal them.”
೪೦“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.
41 Isaiah saw Jesus' glory and said this in reference to him.
೪೧ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು.
42 Even so many of the leaders did trust in him. However, they did not openly admit it because they did not want the Pharisees to expel them from the synagogue,
೪೨ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.
43 loving human admiration more than God's approval.
೪೩ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44 Jesus called out, “If you trust in me you're not just trusting in me but also in the one who sent me.
೪೪ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.
45 When you see me, you're seeing the one who sent me.
೪೫ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ.
46 I have come as a light shining into the world, so if you trust in me you won't remain in the dark.
೪೬ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47 I don't judge anyone who hears my words but doesn't do what I say. I came to save the world, not to judge it.
೪೭ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.
48 Anyone who rejects me and does not accept my words will be judged at the end-time judgment in accordance with what I have said.
೪೮ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.
49 For I'm not speaking for myself but for my Father who sent me. He is the one who instructed me what to say and how to say it.
೪೯ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.
50 I know that what he told me to say brings eternal life—so whatever I say is what the Father told me.” (aiōnios )
೫೦ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು. (aiōnios )