< John 6 >
1 After this, Jesus left to go to the other side of the Sea of Galilee (also known as the Sea of Tiberias).
೧ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
2 A large crowd was following him, for they'd seen his miracles of healing.
೨ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
3 Jesus went up a hill and sat down there with his disciples.
೩ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
4 The time for the Jewish festival of the Passover was approaching.
೪ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
5 When Jesus looked up, and saw a large crowd coming towards him, he asked Philip, “Where can we buy enough bread to feed all these people?”
೫ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
6 He only asked this to see how Philip would respond, because Jesus already knew what he was going to do.
೬ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
7 “Two hundred silver coins wouldn't buy enough bread to give everyone even just a little,” Philip replied.
೭ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
8 One of his disciples, Andrew, Simon Peter's brother, spoke up.
೮ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
9 “There's a boy here who has five barley loaves and a couple of fish, but what good is that when there are so many people?”
೯“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10 “Have everybody sit down,” Jesus said. There was plenty of grass there, so they all sat down, the men numbering around five thousand.
೧೦ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11 Jesus took the bread, gave thanks, and had it handed out to the people as they sat there. Then he did the same with the fishes, making sure the people had as much as they wanted.
೧೧ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12 Once they were all full, he said to his disciples, “Collect what's left over so nothing is wasted.”
೧೨ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
13 So they collected and filled twelve baskets with the pieces of the five barley loaves the people had eaten.
೧೩ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
14 When the people saw this miracle, they said, “Surely this is the Prophet who was to come into the world.”
೧೪ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
15 Jesus realized that they were about to force him to become their king, so he left them and went up into the hills to be by himself.
೧೫ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
16 When evening came, his disciples went down to the sea,
೧೬ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
17 climbed into a boat, and headed across the water towards Capernaum. By now it was night and Jesus had not joined them yet.
೧೭ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18 A strong wind began blowing and the sea grew rough.
೧೮ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
19 When they had rowed three or four miles, they saw Jesus walking on the sea, coming towards the boat. They were very frightened.
೧೯ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
20 “Don't be afraid!” he told them. “It's me.”
೨೦ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
21 Then they gladly took him into the boat, and immediately they reached the shore where they were going.
೨೧ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
22 The next day the crowd that had stayed on the other side of the sea noticed that there had been only one boat there, and that Jesus had not got into the boat with his disciples, but they had left without him.
೨೨ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
23 Then other boats arrived from Tiberias, landing near to the place where they'd eaten the bread once the Lord had blessed it.
೨೩ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24 Once the crowd realized that neither Jesus nor his disciples were there, they got into the boats and went over to Capernaum, looking for Jesus.
೨೪ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25 When they found him on the other side of the sea, they asked him, “Rabbi, when did you get here?”
೨೫ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
26 “I tell you the truth,” Jesus replied, “you're looking for me because you ate as much bread as you wanted, not because you understood the miracles.
೨೬ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
27 Don't be preoccupied about food that doesn't last, but concentrate on the lasting food of eternal life which the Son of man will give you, for God the Father has placed his seal of approval on him.” (aiōnios )
೨೭ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. (aiōnios )
28 So they asked him, “What do we have to do in order to do what God wants?”
೨೮ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
29 Jesus replied, “What God wants you to do is to trust in the one he sent.”
೨೯ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
30 “What miracle are you going to perform for us to see so we can trust you? What are you able to do?” they asked.
೩೦ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
31 “Our forefathers ate manna in the desert in fulfillment of the Scripture that says, ‘He gave them bread from heaven to eat.’”
೩೧ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
32 “I tell you the truth, it wasn't Moses who gave you bread from heaven,” Jesus replied. “It's my Father who gives you the true bread of heaven.
೩೨ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
33 For the bread of God is the one who comes from heaven and gives life to the world.”
೩೩ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
34 “Lord, please give us this kind of bread all the time!” they said.
೩೪ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
35 “I am the bread of life,” Jesus replied. “Anyone who comes to me will never be hungry again, and anyone who trusts in me will never be thirsty again.
೩೫ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
36 But as I explained to you before, you have seen me, but you still don't trust me.
೩೬ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.
37 All those the Father gives me will come to me, and I won't reject any of them.
೩೭ತಂದೆಯು ನನಗೆ ಕೊಡುವಂಥವರೆಲ್ಲರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವನನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.
38 For I came down from heaven not to do what I want, but to do what the one who sent me wants.
೩೮ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.
39 What he wants is for me not to lose anyone he has given to me, but for me to raise them up at the last day.
೩೯ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.
40 What my Father wants is for everyone who sees the Son and trusts in him to have eternal life, and for me to raise them up at the last day.” (aiōnios )
೪೦ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು. (aiōnios )
41 Then the Jews began to grumble about him because he had said, “I am the bread that came down from heaven.”
೪೧ಆತನು, “ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ” ಎಂದು ಹೇಳಿದ್ದಕ್ಕೆ ಯೆಹೂದ್ಯರು ಆತನ ವಿಷಯವಾಗಿ ಗೊಣಗುಟ್ಟಿ,
42 They said, “Isn't this Jesus, the son of Joseph? We know his father and his mother. So how can he now tell us, ‘I came down from heaven’?”
೪೨“ಈತನು ಯೋಸೇಫನ ಮಗನಾದ ಯೇಸು ಅಲ್ಲವೇ? ಈತನ ತಂದೆ ತಾಯಿಗಳನ್ನು ನಾವು ಬಲ್ಲೆವಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಇಳಿದು ಬಂದೆನು’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
43 “Stop grumbling to each other,” Jesus said.
೪೩ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.
44 “No one can come to me unless the Father who sent me attracts them, and I will raise them up at the last day.
೪೪“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
45 As is written in Scripture by the prophets, ‘Everyone will be taught by God.’ Everyone who listens to and learns from the Father comes to me.
೪೫‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.
46 Not that anyone has seen God, except he who is from God; he has seen the Father.
೪೬ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.
47 I tell you the truth: anyone who trusts in him has eternal life. (aiōnios )
೪೭ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ. (aiōnios )
48 I am the bread of life.
೪೮ನಾನೇ ಜೀವದ ರೊಟ್ಟಿ
49 Your forefathers ate manna in the desert but they still died.
೪೯ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
50 But this is the bread that comes down from heaven, and anyone who eats it won't ever die.
೫೦ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
51 I am the life-giving bread from heaven, and anyone who eats this bread will live forever. The bread is my flesh that I give so that the world may live.” (aiōn )
೫೧ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು. (aiōn )
52 Then the Jews argued heatedly among themselves. “How can this man give us his flesh to eat?” they asked.
೫೨ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
53 Jesus told them, “I tell you the truth, unless you eat the flesh of the Son of man and drink his blood, you cannot truly live.
೫೩ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
54 Those who eat my flesh and drink my blood have eternal life, and I will raise them up at the last day. (aiōnios )
೫೪ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು. (aiōnios )
55 For my flesh is true food, and my blood is true drink.
೫೫ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
56 Those who eat my flesh and drink my blood remain in me, and I remain in them.
೫೬ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
57 Just as the life-giving Father sent me and I live because of the Father, so anyone who feeds on me will live because of me.
೫೭ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
58 Now this is the bread that came down from heaven, not the kind your forefathers ate and still died. Anyone who eats this bread will live forever.” (aiōn )
೫೮ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು. (aiōn )
59 Jesus explained this while he was teaching in a synagogue at Capernaum.
೫೯ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
60 Many of his disciples when they heard it said, “This is hard to accept! Who can follow it?”
೬೦ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
61 Jesus saw that his disciples were complaining about this, so he asked them, “Are you offended by this?
೬೧ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
62 Then what if you were to see the Son ascend to where he was before?
೬೨ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63 The Spirit gives life; the physical body doesn't do anything. The words I've told you are spirit and life!
೬೩ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
64 Yet there are some of you who don't trust me.” (Jesus had known from the very beginning who didn't trust him, and who would betray him.)
೬೪ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
65 Jesus added, “This is why I told you that no one can come to me unless it is made possible by the Father.”
೬೫ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
66 From this time on many of Jesus' disciples gave up and no longer followed him.
೬೬ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
67 Then Jesus asked the twelve disciples, “What about you? Do you want to leave as well?”
೬೭ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
68 Simon Peter answered, “Lord, who would we follow? You're the one who has the words of eternal life. (aiōnios )
೬೮ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ. (aiōnios )
69 We trust in you, and we're convinced that you are God's Holy One.”
೬೯ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
70 Jesus replied, “Didn't I choose you, the twelve disciples? Yet one of you is a devil.”
೭೦ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
71 (Jesus was referring to Judas, son of Simon Iscariot. He was the one of the twelve disciples who would betray Jesus.)
೭೧ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.