< Joshua 24 >
1 Joshua summoned all the tribes of Israel to Shechem. Then he called the elders, leaders, judges, and officials and they came and stood before the Tabernacle of God.
೧ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.
2 Joshua said to all the people, “The Lord, the God of Israel, says this: ‘Long, long ago your forefathers, including Terah, the father of Abraham and Nahor, lived beyond the Euphrates River, and they worshiped other gods.
೨ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.
3 I brought your father Abraham from beyond the Euphrates and led him through all the land of Canaan and gave him many descendants. I gave him Isaac.
೩ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
4 I gave to Isaac Jacob and Esau. I gave to Esau the hill country of Seir to own, but Jacob and his children went down to Egypt.
೪ಇಸಾಕನಿಗೆ ಯಾಕೋಬ, ಏಸಾವ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿ, ಏಸಾವನಿಗೆ ಸೇಯೀರ್ ಪರ್ವತವನ್ನೂ ಸ್ವತ್ತಾಗಿ ದಯಪಾಲಿಸಿದೆನು. ಯಾಕೋಬನಾದರೋ ತನ್ನ ಮಕ್ಕಳ ಸಹಿತವಾಗಿ ಐಗುಪ್ತ ದೇಶಕ್ಕೆ ಹೋದನು.
5 I sent Moses and Aaron, and I brought plagues on the people of Egypt, and I brought you out.
೫ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.
6 Yes, I brought your forefathers out, but when you arrived at the Red Sea the Egyptians were chasing after your forefathers with chariots and horsemen.
೬ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.
7 Your forefathers called out to the Lord for help, and he placed darkness between you and the Egyptians. Then he brought the sea back over them and they drowned. You saw what I did with your own eyes in Egypt. Then you lived for many years in the wilderness.
೭ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.
8 After that I brought you to the land of the Amorites who lived on the other side of the Jordan. They fought against you but I handed them over to you to defeat and you took over their land. I destroyed them before you.
೮ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು.
9 When Balak, son of Zippor, the king of Moab, wanted to fight against Israel, he sent for Balaam, son of Beor, to come and curse you.
೯ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಾಯೇಲರಾದ ನಿಮಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೆ ಎದ್ದು ನಿಮ್ಮನ್ನು ಶಪಿಸುವುದಕ್ಕೋಸ್ಕರ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.
10 But I wasn't willing to listen to Balaam, so instead he blessed you repeatedly, and saved you from Balak.
೧೦ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.
11 You crossed the Jordan and arrived at Jericho where the men of Jericho fought against you. So did the Amorites, the Perizzites, the Canaanites, the Hittites, the Girgashites, the Hivites, and the Jebusites.
೧೧ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು.
12 But I handed them over to you to defeat. And I sent the hornet before you to drive out the two kings of the Amorites. You did not win using your swords or your bows!
೧೨ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.
13 I gave you a land you didn't work for and towns you didn't build. Now you live in them and eat from vineyards and olive groves you didn't plant.’
೧೩ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”
14 So respect the Lord and worship him, sincerely and faithfully. Get rid of the gods your forefathers worshiped beyond the Euphrates and in Egypt, and worship the Lord.
೧೪ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.
15 But if you don't want to worship the Lord, choose today who you want to worship! Is it going to be the gods your forefathers worshipped beyond the Euphrates? Or the gods of the Amorites in whose land you're now living? But as for me and my family, we will worship the Lord!”
೧೫ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.
16 The people responded, “We are never going to give up on the Lord and worship other gods!
೧೬ಅದಕ್ಕೆ ಜನರು, “ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ.
17 For the Lord our God brought us and our forefathers out of slavery in Egypt. He was the one who did great miracles before our very eyes. He looked after us on the way as we traveled through the lands of many nations.
೧೭ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
18 The Lord drove out before us the Amorites and all the other nations who were living in the land. So we will worship the Lord, for he is our God!”
೧೮ಈ ದೇಶದ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಸರ್ವ ಜನಾಂಗಗಳನ್ನು ನಮ್ಮ ಎದುರಿನಿಂದ ಹೊರಡಿಸಿ ಬಿಟ್ಟವನು ಆತನೇ. ಆದುದರಿಂದ ನಾವು ಯೆಹೋವನನ್ನೇ ಸೇವಿಸುವೆವು. ಆತನೇ ನಮ್ಮ ದೇವರು” ಎಂದು ಉತ್ತರ ಕೊಟ್ಟರು.
19 Joshua told the people, “Remember that the Lord is a holy and jealous God. You won't be able to worship him, and he won't forgive your rebellion and sins
೧೯ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.
20 if you give up on him and worship foreign gods. He will turn against you and destroy you despite all the good he has done for you.”
೨೦ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು.
21 “Don't say that!” the people replied. “We will worship the Lord!”
೨೧ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
22 Then Joshua cautioned the people, “You have made yourselves witnesses against yourselves by saying that you have chosen to worship the Lord.” “Yes, we are witnesses,” the people replied.
೨೨ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು
23 “Then get rid of those foreign gods you have and promise to be loyal only to the Lord, the God of Israel,” Joshua told them.
೨೩ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು.
24 The people said to Joshua, “We will worship the Lord our God and we will obey him.”
೨೪ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
25 So Joshua made a solemn agreement between the people and the Lord that day in Shechem, obligating them to follow all the Lord's laws and instructions.
೨೫ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
26 Joshua recorded this in the Book of the Law of God, and he set up a large stone under the oak tree near the Lord's sanctuary.
೨೬ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
27 Joshua said to the people, “Look at this stone. It stands here as a witness against us for it has heard everything the Lord has told us, and it will be a witness against you if you ever deny what you have promised your God.”
೨೭ಎಲ್ಲಾ ಜನರಿಗೆ, “ಇಗೋ, ಈ ಕಲ್ಲು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಯೆಹೋವನು ಹೇಳಿದ ಎಲ್ಲಾ ಮಾತುಗಳನ್ನು ಇದು ಕೇಳಿದೆ. ಆದುದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆದರೆ ಇದೇ ನಿಮಗೆ ವಿರೋಧವಾಗಿ ಸಾಕ್ಷಿಯಾಗಿರುವುದು” ಎಂದು ಹೇಳಿ
28 Then Joshua dismissed the people, sending them to their allotted lands.
೨೮ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು.
29 Later, after all this, Joshua, son of Nun, servant of the Lord, died at the age of one hundred and ten.
೨೯ಇದಾದ ಮೇಲೆ ಯೆಹೋವನ ಸೇವಕನಾದ ನೂನನ ಮಗನಾದ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.
30 They buried him in Timnath-serah in the hill country of Ephraim, north of Mount Gaash, the land he had been allocated.
೩೦ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
31 The Israelites continued to worship the Lord throughout Joshua's life, and throughout the lifetimes of the elders who outlived him, those who had seen all that the Lord had done for Israel.
೩೧ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
32 The bones of Joseph, which the Israelites had brought with them from Egypt, they buried in Shechem in the piece of ground Jacob had bought from the sons of Hamor, the father of Shechem, for one hundred pieces of silver. This land was inherited by Joseph's sons.
೩೨ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
33 And Eleazar, son of Aaron, died and they buried him at Gibeah, in the hill country of Ephraim, land which had been given to his son Phinehas.
೩೩ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.