< Ezekiel 36 >
1 And thou, son of man, prophesy unto the mountains of Israel, and say: Ye mountains of Israel, hear the word of the LORD.
೧“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.
2 Thus saith the Lord GOD: Because the enemy hath said against you: Aha! even the ancient high places are ours in possession;
೨ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.
3 therefore prophesy, and say: Thus saith the Lord GOD: Because, even because they have made you desolate, and swallowed you up on every side, that ye might be a possession unto the rest of the nations, and ye are taken up in the lips of talkers, and the evil report of the people;
೩ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.
4 therefore, ye mountains of Israel, hear the word of the Lord GOD: Thus saith the Lord GOD to the mountains and to the hills, to the streams and to the valleys, to the desolate wastes and to the cities that are forsaken, which are become a prey and derision to the residue of the nations that are round about;
೪ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
5 therefore thus saith the Lord GOD: Surely in the fire of My jealousy have I spoken against the residue of the nations, and against all Edom, that have appointed My land unto themselves for a possession with the joy of all their heart, with disdain of soul, to cast it out for a prey;
೫ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’
6 therefore prophesy concerning the land of Israel, and say unto the mountains and to the hills, to the streams and to the valleys: Thus saith the Lord GOD: Behold, I have spoken in My jealousy and in My fury, because ye have borne the shame of the nations;
೬ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’
7 therefore thus saith the Lord GOD: I have lifted up My hand: Surely the nations that are round about you, they shall bear their shame.
೭ಆದಕಾರಣ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಸುತ್ತಣ ಆ ಅನ್ಯಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.
8 But ye, O mountains of Israel, ye shall shoot forth your branches, and yield your fruit to My people Israel; for they are at hand to come.
೮ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳ ಕೊಂಬೆಗಳನ್ನು ಹರಡಿಕೊಂಡು, ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವವು. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.
9 For, behold, I am for you, and I will turn unto you, and ye shall be tilled and sown;
೯ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನೀವು ಉತ್ತು, ಬಿತ್ತುವಿರಿ.
10 and I will multiply men upon you, all the house of Israel, even all of it; and the cities shall be inhabited, and the waste places shall be builded;
೧೦ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
11 and I will multiply upon you man and beast, and they shall increase and be fruitful; and I will cause you to be inhabited after your former estate, and will do better unto you than at your beginnings; and ye shall know that I am the LORD.
೧೧ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
12 Yea, I will cause men to walk upon you, even my people Israel, and they shall possess thee, and thou shalt be their inheritance; and thou shalt no more henceforth bereave them of children.
೧೨ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”
13 Thus saith the Lord GOD: Because they say unto you: Thou land art a devourer of men, and hast been a bereaver of thy nations;
೧೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.
14 therefore thou shalt devour men no more, neither bereave thy nations any more, saith the Lord GOD;
೧೪“ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ.
15 neither will I suffer the shame of the nations any more to be heard against thee, neither shalt thou bear the reproach of the peoples any more, neither shalt thou cause thy nations to stumble any more, saith the Lord GOD.'
೧೫ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
16 Moreover the word of the LORD came unto me, saying:
೧೬ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
17 'Son of man, when the house of Israel dwelt in their own land, they defiled it by their way and by their doings; their way before Me was as the uncleanness of a woman in her impurity.
೧೭“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.
18 Wherefore I poured out My fury upon them for the blood which they had shed upon the land, and because they had defiled it with their idols;
೧೮ಅವರು ದೇಶದ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಅಶುದ್ಧಪಡಿಸಿದ ಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿದೆನು.
19 and I scattered them among the nations, and they were dispersed through the countries; according to their way and according to their doings I judged them.
೧೯ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.
20 And when they came unto the nations, whither they came, they profaned My holy name; in that men said of them: These are the people of the LORD, and are gone forth out of His land.
೨೦ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
21 But I had pity for My holy name, which the house of Israel had profaned among the nations, whither they came.
೨೧ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.”
22 Therefore say unto the house of Israel: Thus saith the Lord GOD: I do not this for your sake, O house of Israel, but for My holy name, which ye have profaned among the nations, whither ye came.
೨೨ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
23 And I will sanctify My great name, which hath been profaned among the nations, which ye have profaned in the midst of them; and the nations shall know that I am the LORD, saith the Lord GOD, when I shall be sanctified in you before their eyes.
೨೩ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.
24 For I will take you from among the nations, and gather you out of all the countries, and will bring you into your own land.
೨೪“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.
25 And I will sprinkle clean water upon you, and ye shall be clean; from all your uncleannesses, and from all your idols, will I cleanse you.
೨೫ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
26 A new heart also will I give you, and a new spirit will I put within you; and I will take away the stony heart out of your flesh, and I will give you a heart of flesh.
೨೬ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
27 And I will put My spirit within you, and cause you to walk in My statutes, and ye shall keep Mine ordinances, and do them.
೨೭ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ.
28 And ye shall dwell in the land that I gave to your fathers; and ye shall be My people, and I will be your God.
೨೮ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.
29 And I will save you from all your uncleannesses; and I will call for the corn, and will increase it, and lay no famine upon you.
೨೯ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.
30 And I will multiply the fruit of the tree, and the increase of the field, that ye may receive no more the reproach of famine among the nations.
೩೦ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
31 Then shall ye remember your evil ways, and your doings that were not good; and ye shall loathe yourselves in your own sight for your iniquities and for your abominations.
೩೧ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”
32 Not for your sake do I this, saith the Lord GOD, be it known unto you; be ashamed and confounded for your ways, O house of Israel.
೩೨ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
33 Thus saith the Lord GOD: In the day that I cleanse you from all your iniquities, I will cause the cities to be inhabited, and the waste places shall be builded.
೩೩ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
34 And the land that was desolate shall be tilled, whereas it was a desolation in the sight of all that passed by.
೩೪ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ಹಾಳುಬಿದ್ದು ಭೂಮಿಯನ್ನು ಉಳುವರು.
35 And they shall say: This land that was desolate is become like the garden of Eden; and the waste and desolate and ruined cities are fortified and inhabited.
೩೫ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.
36 Then the nations that are left round about you shall know that I the LORD have builded the ruined places, and planted that which was desolate; I the LORD have spoken it, and I will do it.
೩೬ಯೆಹೋವನಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವನಾದ ನಾನೇ ನುಡಿದಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.”
37 Thus saith the Lord GOD: I will yet for this be inquired of by the house of Israel, to do it for them; I will increase them with men like a flock.
೩೭ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
38 As the flock for sacrifice, as the flock of Jerusalem in her appointed seasons, so shall the waste cities be filled with flocks of men; and they shall know that I am the LORD.'
೩೮ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.”