< Isaiah 30 >
1 Woe to the rebellious children, saith the LORD, that take counsel, but not of Me; and that form projects, but not of My spirit, that they may add sin to sin;
೧ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” “ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
2 That walk to go down into Egypt, and have not asked at My mouth; to take refuge in the stronghold of Pharaoh, and to take shelter in the shadow of Egypt!
೨ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.
3 Therefore shall the stronghold of Pharaoh turn to your shame, and the shelter in the shadow of Egypt to your confusion.
೩ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು.
4 For his princes are at Zoan, and his ambassadors are come to Hanes.
೪ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ.
5 They shall all be ashamed of a people that cannot profit them, that are not a help nor profit, but a shame, and also a reproach.
೫ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.”
6 The burden of the beasts of the South. Through the land of trouble and anguish, from whence come the lioness and the lion, the viper and flying serpent, they carry their riches upon the shoulders of young asses, and their treasures upon the humps of camels, to a people that shall not profit them.
೬ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.
7 For Egypt helpeth in vain, and to no purpose; therefore have I called her arrogancy that sitteth still.
೭ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ.
8 Now go, write it before them on a tablet, and inscribe it in a book, that it may be for the time to come for ever and ever.
೮ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು.
9 For it is a rebellious people, lying children, children that refuse to hear the teaching of the LORD;
೯ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು.
10 That say to the seers: 'See not,' and to the prophets: 'Prophesy not unto us right things, speak unto us smooth things, prophesy delusions;
೧೦ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
11 Get you out of the way, turn aside out of the path, cause the Holy One of Israel to cease from before us.'
೧೧ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
12 Wherefore thus saith the Holy One of Israel: because ye despise this word, and trust in oppression and perverseness, and stay thereon;
೧೨ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,
13 Therefore this iniquity shall be to you as a breach ready to fall, swelling out in a high wall, whose breaking cometh suddenly at an instant.
೧೩ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”
14 And He shall break it as a potter's vessel is broken, breaking it in pieces without sparing; so that there shall not be found among the pieces thereof a sherd to take fire from the hearth, or to take water out of the cistern.
೧೪ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು.
15 For thus said the Lord GOD, the Holy One of Israel: in sitting still and rest shall ye be saved, in quietness and in confidence shall be your strength; and ye would not.
೧೫ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.
16 But ye said: 'No, for we will flee upon horses'; therefore shall ye flee; and: 'We will ride upon the swift'; therefore shall they that pursue you be swift.
೧೬ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.
17 One thousand shall flee at the rebuke of one, at the rebuke of five shall ye flee; till ye be left as a beacon upon the top of a mountain, and as an ensign on a hill.
೧೭ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”
18 And therefore will the LORD wait, that He may be gracious unto you, and therefore will He be exalted, that He may have compassion upon you; for the LORD is a God of justice, happy are all they that wait for Him.
೧೮ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
19 For, O people that dwellest in Zion at Jerusalem, thou shalt weep no more; He will surely be gracious unto thee at the voice of thy cry, when He shall hear, He will answer thee.
೧೯ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.
20 And though the Lord give you sparing bread and scant water, yet shall not thy Teacher hide Himself any more, but thine eyes shall see thy Teacher;
೨೦ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.
21 And thine ears shall hear a word behind thee, saying: 'This is the way, walk ye in it, when ye turn to the right hand, and when ye turn to the left.'
೨೧ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.
22 And ye shall defile thy graven images overlaid with silver, and thy molten images covered with gold; thou shalt put them far away as one unclean; thou shalt say unto it: 'Get thee hence.'
೨೨ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ.
23 And He will give the rain for thy seed, wherewith thou sowest the ground, and bread of the increase of the ground, and it shall be fat and plenteous; in that day shall thy cattle feed in large pastures.
೨೩ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.
24 The oxen likewise and the young asses that till the ground shall eat savoury provender, which hath been winnowed with the shovel and with the fan.
೨೪ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು.
25 And there shall be upon every lofty mountain, and upon every high hill streams and watercourses, in the day of the great slaughter, when the towers fall.
೨೫ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು.
26 Moreover the light of the moon shall be as the light of the sun, and the light of the sun shall be sevenfold, as the light of the seven days, in the day that the LORD bindeth up the bruise of His people, and healeth the stroke of their wound.
೨೬ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
27 Behold, the name of the LORD cometh from far, with His anger burning, and in thick uplifting of smoke; His lips are full of indignation, and His tongue is as a devouring fire;
೨೭ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
28 And His breath is as an overflowing stream, that divideth even unto the neck, to sift the nations with the sieve of destruction; and a bridle that causeth to err shall be in the jaws of the peoples.
೨೮ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
29 Ye shall have a song as in the night when a feast is hallowed; and gladness of heart, as when one goeth with the pipe to come into the mountain of the LORD, to the Rock of Israel.
೨೯ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ.
30 And the LORD will cause His glorious voice to be heard, and will show the lighting down of His arm, with furious anger, and the flame of a devouring fire, with a bursting of clouds, and a storm of rain, and hailstones.
೩೦ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
31 For through the voice of the LORD shall Asshur be dismayed, the rod with which He smote.
೩೧ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು.
32 And in every place where the appointed staff shall pass, which the LORD shall lay upon him, it shall be with tabrets and harps; and in battles of wielding will He fight with them.
೩೨ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.
33 For a hearth is ordered of old; yea, for the king it is prepared, deep and large; the pile thereof is fire and much wood; the breath of the LORD, like a stream of brimstone, doth kindle it.
೩೩ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.